ಕಪ್ಪು ಹಣ: ಸಿಸಿಬಿ ಪೊಲೀಸರ ವಿರುದ್ಧ ಎಫ್ಐಆರ್‌


Team Udayavani, Dec 13, 2017, 12:55 PM IST

police-fir.jpg

ಬೆಂಗಳೂರು: ಸಿಸಿಬಿ ಕಚೇರಿಯಲ್ಲೇ ನಾಪತ್ತೆಯಾದ 1.60 ಕೋಟಿ ರೂ. ಕಪ್ಪು ಹಣ ಪ್ರಕರಣ ಸಂಬಂಧ ಸಿಸಿಬಿ ಎಎಸ್‌ಐ ಹೊಂಬಾಳೇಗೌಡ, ಪೇದೆಗಳಾದ ನರಸಿಂಹಮೂರ್ತಿ ಹಾಗೂ ಗಂಗಾಧರ್‌ ವಿರುದ್ಧ ಕಾಟನ್‌ಪೇಟೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ರವಿಕುಮಾರ್‌ ಎಫ್ಐಆರ್‌ ದಾಖಲಿಸಿದ್ದಾರೆ. ಹೈಗ್ರೌಂಡ್ಸ್‌ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಈ ಮೂವರು ಶೇಷಾದ್ರಿಪುರ ಪೊಲೀಸರು ಎಂದು ಹೇಳಿ 1 ಕೋಟಿ ರೂ. ಹಳೇ ನೋಟುಗಳನ್ನು ದೋಚಿದ್ದರು.

ಈ ಸಂಬಂಧ ಬಿಎಂಟಿಸಿ ಚಾಲಕ ಸುಬಾನು ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣದ ತನಿಖೆ ನಡೆಸಿದಾಗ ಮೂವರು ಅಸಲಿ ಸಿಸಿಬಿ ಪೊಲೀಸರು ಎಂದು ತಿಳಿದಿತ್ತು. ಪ್ರಕರಣದ ತನಿಖೆ ತೀವ್ರಗೊಂಡಾಗ ಸಿಸಿಬಿ ಕಚೇರಿಯಲ್ಲೇ 1.60 ಕೋಟಿ ರೂ. ನಾಪತ್ತೆಯಾರುವುದು ಬೆಳಕಿಗೆ ಬಂದಿತ್ತು. 

ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಹಣ ನಾಪತ್ತೆ ಕುರಿತು ವರದಿ ನೀಡುವಂತೆ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸತೀಶ್‌ ಕುಮಾರ್‌ಗೆ ಸೂಚಿಸಿದ್ದರು. ಡಿಸಿಪಿ ಜಿನೇಂದ್ರ ಖಣಗಾವಿ ನೇತೃತ್ವದ ತಂಡ ನೋಟು ಅಮಾನ್ಯದ ಬಳಿಕ ಇದುವರೆಗೂ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಪರಿಶೀಲಿಸಿದಾಗ 1.60 ಕೋಟಿ ಹಣ ನಾಪತ್ತೆಯಾಗಿರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಸಿಸಿಬಿಯ ಮನೆ ಮತ್ತು ಕನ್ನ ಕಳವು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್‌ಸ್ಪೆಕ್ಟರ್‌ ಭಾನುಪ್ರಕಾಶ್‌ ನೋಟು ಅಮಾನ್ಯ ಸಂದರ್ಭದಲ್ಲಿ ಶಂಕರಪುರ ಠಾಣಾ ವ್ಯಾಪ್ತಿಯಲ್ಲಿ 3 ಕೋಟಿ ಹಳೇ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ಕಚೇರಿಯಲ್ಲಿ ಲಾಕರ್‌ ಹಾಗೂ ಬೀರು ಇಲ್ಲದ ಕಾರಣ ಬ್ಯಾಗ್‌ನಲ್ಲಿ ಕಟ್ಟಿ ಇಟ್ಟಿದ್ದರು.

ಇದೇ ಆಗಸ್ಟನಲ್ಲಿ ಭಾನುಪ್ರಸಾದ್‌ ನಿವೃತ್ತರಾದಾಗ, ಹಿರಿಯ ಅಧಿಕಾರಿಗಳ ಸೂಚನೆಯಂತೆ ಡಿ.10ರಂದು ಭಾನುಪ್ರಕಾಶ್‌ ತಮ್ಮ ಅಧಿಕಾರಾವಧಿಯಲ್ಲಿ ವಶಕ್ಕೆ ಪಡೆದ ಹಣ ಹಾಗೂ ಪ್ರಕರಣದ ಕಡತಗಳನ್ನು ಒಪ್ಪಿಸಲು ಬಂದಿದ್ದರು. ಈ ಸಮಯದಲ್ಲಿ 3 ಕೋಟಿ ರೂ. ಪೈಕಿ 1.60 ಕೋಟಿ ರೂ. ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಈ ಹಣವನ್ನು ಈ ಮೂವರು ಆರೋಪಿಗಳೇ ದುರ್ಬಳಕೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿತ್ತು. ಭಾನುಪ್ರಕಾಶ್‌ ನಿವೃತ್ತರಾದ ಬಳಿಕ ಈ ಕೊಠಡಿಯನ್ನು ಈ ಮೂವರು ಆರೋಪಿಗಳು ಬಳಸುತ್ತಿದ್ದರು. ಜತಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೂವರು ತಲೆಮರೆಸಿಕೊಂಡಿರುವುದರಿಂದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಹಳೇ ನೋಟುಗಳನ್ನು ವಶಕ್ಕೆ ಪಡೆಯಬೇಕು ಎಂದು ಇನ್‌ಸ್ಪೆಕ್ಟರ್‌ ರವಿಕುಮಾರ್‌ ದೂರಿನಲ್ಲಿ ತಿಳಿಸಿದ್ದಾರೆ.

ಎಸಿಪಿ ಪಾತ್ರದ ಬಗ್ಗೆ ಅನುಮಾನ: ಸಾಮಾನ್ಯವಾಗಿ ಸಿಸಿಬಿಗೆ ಹಿರಿಯ ಅಧಿಕಾರಿ ಕರ್ತವ್ಯಕ್ಕೆ ಹಾಜರಾದ ಸಂದರ್ಭದಲ್ಲಿ ವಿಭಾಗದ ಹಳೇ ಮತ್ತು ಹೊಸ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಎಸಿಪಿ ಮರಿಯಪ್ಪ ಅವರ ಗಮನಕ್ಕೆ ಬಾರದೆ ಇಷ್ಟೊಂದು ದೊಡ್ಡ ಮೊತ್ತದ ಹಣ ಏಕಾಏಕಿ ನಾಪತ್ತೆಯಾಗಲು ಸಾಧ್ಯವಿಲ್ಲ.

ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಮರಿಯಪ್ಪ ವಿರುದ್ಧ ಯಾವುದೇ ಸಾûಾ$Âಧಾರಗಲಿಲ್ಲ. ಹೀಗಾಗಿ ಆ ಮೂವರು ಆರೋಪಿಗಳು ಪತ್ತೆಯಾಗುವವರೆಗೂ ಎಸಿಪಿ ಪಾತ್ರದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹಿರಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.