ಯಕ್ಷಶಿಕ್ಷಣ ಪ್ರಶಸ್ತಿಗೆ ತೋನ್ಸೆ ಜಯಂತ್‌ ಕುಮಾರ್‌

Team Udayavani, Dec 15, 2017, 3:17 PM IST

15-34.jpg

ಯಕ್ಷ ಶಿಕ್ಷಣ ಟ್ರಸ್ಟ್‌ 16-12-2017ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಸುತ್ತಿರುವ ಕಿಶೋರ ಯಕ್ಷಗಾನದ ದಶ ಮಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಯಕ್ಷಗುರು ಗಳಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ ಯು. ದುಗ್ಗಪ್ಪನವರ ನೆನಪಿನಲ್ಲಿ ಪ್ರಶಸ್ತಿ ಪ್ರದಾನ ಮಾಡಿ, ತೋನ್ಸೆ ಜಯಂತ್‌ ಕುಮಾರ್‌ ಅವರನ್ನು ಗೌರವಿಸಲಿದೆ. 

ಯಕ್ಷಶಿಕ್ಷಣದ ಗುರು, ಭಾಗವತ, ವೇಷಧಾರಿ ತೋನ್ಸೆ ಜಯಂತ್‌ ಕುಮಾರ್‌ ಯಕ್ಷಗಾನದ ಸರ್ವಾಂಗವನ್ನೂ ಬಲ್ಲವರು. “ಸವ್ಯಸಾಚಿ’ ಎಂಬುದು ಅವರ ಹಿಮ್ಮೇಳ -ಮುಮ್ಮೇಳ ಪರಿಣತಿಯನ್ನು ಗುರುತಿಸಿ ಅಭಿಮಾನಿಗಳು ನೀಡಿದ ಬಿರುದು.

1946ರಲ್ಲಿ ಕಾಂತಪ್ಪ ಮಾಸ್ತರ್‌-ಚೆಲುವಮ್ಮ ದಂಪತಿಯ ಪುತ್ರರಾಗಿ ಜನಿಸಿದ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಗುಮಾಸ್ತರಾಗಿ ನಿವೃತ್ತರು. ಯಕ್ಷಗಾನದಲ್ಲಿ ಸದಾ ಪ್ರವೃತ್ತರು. 

ಯಕ್ಷಗಾನವು ಜಯಂತ ಕುಮಾರರಿಗೆ ವಂಶ ಪಾರಂಪರ್ಯವಾಗಿ ಬಂದ ಬಳುವಳಿ. ಅವರ ತೀರ್ಥರೂಪರು ಯಕ್ಷಗಾನದ ಭಾಗವತರಾಗಿ, ಗುರುಗಳಾಗಿ ಪ್ರಸಿದ್ಧರು. ಅಜ್ಜ ತಿಮ್ಮಪ್ಪ ಮಾಸ್ತರರು ಭಾಗವತರು. ದೊಡ್ಡಪ್ಪ ಗೋಳಿಗರಡಿ ಮೇಳದ ಕಲಾವಿದರಾಗಿದ್ದರು. ಈ ವಂಶೀಯ ಹಿನ್ನೆಲೆ ಅವರು ಯಕ್ಷಗಾನದತ್ತ ಆಕರ್ಷಿತರಾಗಲು ಪ್ರೇರಕವಾಯಿತು. ಕಾಂತಪ್ಪ ಮಾಸ್ತರರು ಶಾಲಾ ವೇಳೆಯ ಅನಂತರ ಅನೇಕ ಕಡೆ ಯಕ್ಷಗಾನ ತರಗತಿ ನಡೆಸುತ್ತಿದ್ದರು. ತಂದೆಯೊಂದಿಗೆ ಈ ತಿರುಗಾಟದಲ್ಲಿ ಕಲಿತ ಬಾಲಪಾಠ ಗಟ್ಟಿಯಾಯಿತು. ನಾರ್ಣಪ್ಪ ಉಪ್ಪೂರರು ಹಂಗಾರಟ್ಟೆ ಯಕ್ಷಗಾನ ಕೇಂದ್ರ ಸ್ಥಾಪಿಸಿದಾಗ ಅವರ ಮತ್ತು ಬೇಳಂಜೆ ತಿಮ್ಮಪ್ಪ ನಾಯ್ಕರ ಶಿಷ್ಯರಾಗುವ ಸುವರ್ಣಾವಕಾಶ ಪ್ರಾಪ್ತವಾಯಿತು. ಅದನ್ನು ಚೆನ್ನಾಗಿಯೇ ಬಳಸಿಕೊಂಡ ಜಯಂತರು, ಉಪ್ಪೂರರ ಶೈಲಿಯನ್ನು ಮೈಗೂಡಿಸಿಕೊಂಡರು. ಪರಂಪರೆಯ ಶೈಲಿಗೆ ತನ್ನ ತುಂಬು ಕಂಠಸಿರಿಯನ್ನು ಮೇಳೈಸಿ ಪ್ರಸಿದ್ಧ ಭಾಗವತರಾಗಿ ಮೂಡಿಬಂದರು.

ಎಳವೆಯಲ್ಲಿ ಯಕ್ಷಗಾನ ವೇಷಗಳನ್ನು ಮಾಡುತ್ತಿದ್ದ ಇವರು ಬಡಗಿನ ಪರಂಪರೆಯ ಸ್ತ್ರೀ-ಪುರುಷ ಪಾತ್ರಗಳನ್ನು ಮನೋಜ್ಞವಾಗಿ ನಿರ್ವಹಿಸಿದ್ದಾರೆ. ಉಪ್ಪೂರರ ಭಾಗವತಿಕೆಗೆ ಹಿಮ್ಮೇಳವಾದಕನಾಗಿ ಭಾಗವಹಿಸಿದ್ದು ತನ್ನ ಭಾಗ್ಯವೆಂದು ನೆನಪಿಸಿಕೊಳ್ಳುತ್ತಾರೆ. ಭಾಗವತರಾಗಿ ಅನೇಕ ಆಟ- ಕೂಟ ಗಳಲ್ಲಿ ತಮ್ಮ ಸಿರಿಕಂಠ ಮೊಳಗಿಸಿದ್ದಾರೆ. ಯಕ್ಷಗಾನದ ತಂಡದ ಭಾಗವತರಾಗಿ ದಿಲ್ಲಿ, ಸಿಂಗಾಪುರ ಮತ್ತು ನಾಡಿನ ಅನ್ಯಾನ್ಯ ಪ್ರದೇಶಗಳಲ್ಲಿ ಭಾಗವಹಿಸಿದ್ದಾರೆ. 

ಯಕ್ಷಗಾನ ಗುರುಗಳಾಗಿ ಅವರ ಸಾಧನೆ ದೊಡ್ಡದು. ತಂದೆಯವರು ನಡೆಸುತ್ತಿದ್ದ ಅನೇಕ ಸಂಘಗಳಿಗೆ ಗುರು ಗಳಾಗಿ ತರಬೇತಿ ನೀಡುವ ಅನಿವಾರ್ಯತೆ ಅವರನ್ನು ಯಕ್ಷಗಾನ ಗುರುಗಳನ್ನಾಗಿಸಿತು. ತಂದೆಯ ಸ್ಥಾನವನ್ನು ಸಮರ್ಥವಾಗಿ ತುಂಬಿದ ಉತ್ತರಾಧಿಕಾರಿಯಾದರು. ಇವರಿಗೆ 20-30 ಪ್ರಸಂಗಗಳು ಕಂಠಸ್ಥ. ಹತ್ತಾರು ಪ್ರಸಂಗಗಳಿಗೆ ಸ್ವತಃ ಅರ್ಥ ಬರೆದು ನಿರ್ದೇಶಿಸಿದ್ದಾರೆ. ತಾವೇ ಅಚ್ಚುಕಟ್ಟಾಗಿ ಅರ್ಥ ಬರೆದ ಅನೇಕ ಹಸ್ತಪ್ರತಿಗಳು ಅವರ ಬಳಿ ಇವೆ. ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವವರಿಗೆ ನಿಜಕ್ಕೂ ಇದೊಂದು ಮಾದರಿ. ಮಹಿಳೆಯರಿಗೂ ಯಕ್ಷಗಾನ ತರಬೇತಿ ನೀಡಿ ಆಟ ಆಡಿಸಿ ದ್ದಾರೆ. ಯಕ್ಷಗಾನ ಶಿಬಿರಗಳನ್ನು ನಡೆಸಿದ್ದಾರೆ. ನಿರಂತರ 11 ವರ್ಷಗಳಿಂದ ಯಕ್ಷಶಿಕ್ಷಣ ಟ್ರಸ್ಟ್‌ನ ಗುರುಗಳಾಗಿ ಯಕ್ಷಗಾನ ತರಬೇತಿ ನೀಡುತ್ತಿದ್ದಾರೆ. 

ಐದು ದಶಕಗಳ ಅವಧಿಯಲ್ಲಿ ಯಕ್ಷಗಾನದ ವಿವಿಧ ವಿಭಾಗಗಳಲ್ಲಿ ಕಲಾಪ್ರೌಢಿಮೆಯನ್ನು ಮೆರೆದು ಯಕ್ಷ ಕಲಾ ರಸಿಕರಿಗೆ ಮುದ ನೀಡಿ ದವರು, ಪರಂಪರೆಯ ಹಾಡಿಕೆಯ ಶುದ್ಧಿಯನ್ನು ಕಾಪಿಟ್ಟುಕೊಂಡು ಬಂದವರು, ಸಾವಿರಾರು ಶಿಷ್ಯರಿಗೆ ಈ ಕಲೆಯನ್ನು ಕಲಿಸಿಕೊಟ್ಟವರು ತೋನ್ಸೆ ಜಯಂತ್‌ ಕುಮಾರ್‌.

ನಾರಾಯಣ ಎಂ. ಹೆಗಡೆ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.