ಜ.14ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

Team Udayavani, Dec 21, 2017, 5:02 PM IST

mys1.jpg

ಮೈಸೂರು: ಮೈಸೂರು ರಂಗಾಯಣ ಪ್ರತಿ ವರ್ಷ ಆಯೋಜಿಸುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ವಲಸೆ ಶೀರ್ಷಿಕೆಯಡಿ ಜನವರಿ 14ರಿಂದ 21ರವರೆಗೆ ನಡೆಯಲಿದೆ. ಪ್ರತಿ ವರ್ಷದಂತೆ ಸಂಕ್ರಾಂತಿಯ ದಿನದಂದೇ ಆರಂಭವಾಗುವ ಈ ಉತ್ಸವವು ನಾಟಕ, ವಿಚಾರ ಸಂಕಿರಣ, ಜಾನಪದ ಕಲೆಗಳ ಪ್ರದರ್ಶನ, ಪುಸ್ತಕ ಮೇಳ, ಕರಕುಶಲ ಮೇಳ, ಚಲನಚಿತ್ರೋತ್ಸವ, ಬೀದಿ
ನಾಟಕ ಹೀಗೆ ತನ್ನೆಲ್ಲಾ ಸಾಂಸ್ಕೃತಿಕ ವೈವಿಧ್ಯತೆಯಿಂದ ನಾಡಿನ ಜನತೆಗೆ ರಸದೌತಣ ನೀಡಲಿದೆ ಎಂದು ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ ತಿಳಿಸಿದ್ದಾರೆ.

ವಲಸೆ ಶೀರ್ಷಿಕೆ: ಈ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವನ್ನು ವಲಸೆ ಶೀರ್ಷಿಕೆ ಯಡಿ ಸಂಘಟಿಸಲಾಗುತ್ತಿದೆ. ಜಗತ್ತಿನಾದ್ಯಂತ ಮನುಷ್ಯರನ್ನೂ ಒಳಗೊಂಡಂತೆ ಜೀವರಾಶಿಯ ಸಹಜ ಜೀವನದ ನೆಲೆಗೆ ಬೇರೆ ಬೇರೆ ಆತಂಕಗಳು ಎದುರಾಗುತ್ತಿರುವ ಈ ಸಂದರ್ಭದಲ್ಲಿ ಅನೇಕ ಸಮುದಾಯಗಳು ತಮ್ಮ ಬದುಕಿನ ನೆಲೆ ಕಂಡು ಕೊಳ್ಳಲು ಒಂದೆಡೆಯಿಂದ ಮತ್ತೂಂದೆಡೆಗೆ ವಲಸೆ ಹೋಗುವುದು ನಿರಂತರವಾಗಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರಚಲಿತ ವಿಷಯಗಳಿಗೆ ಸಂವೇದಿ
ಸುವ ಆಶಯದಿಂದ ಬಹುರೂಪಿಗೆ ಈ ಶೀರ್ಷಿಕೆ ಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಬಹುರೂಪಿ ನಾಟಕೋತ್ಸವ ನಾಡಿನ ಹೆಮ್ಮೆಯ
ಉತ್ಸವವಾಗಿದ್ದು, ಕಳೆದ 17ನೇ ವರ್ಷಗಳಿಂದ ದೇಶದಾದ್ಯಂತ ನೂರಾರು ಬೇರೆ ಬೇರೆ ಭಾಷೆಯ ನಾಟಕಗಳಲ್ಲದೆ, ಬೇರೆ ಬೇರೆ ದೇಶದ ನಾಟಕಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೇ ರಾಜ್ಯದ ಬೇರೆ ಬೇರೆ ಪ್ರದೇಶದಲ್ಲಿ ರಂಗ ಸೇವೆಯಲ್ಲಿ ತೊಡಗಿರುವ ಅನೇಕ ಹವ್ಯಾಸಿ ರಂಗತಂಡಗಳ ನಾಟಕಗಳು ಪ್ರದರ್ಶನಗೊಂಡಿವೆ. 

ಬಹುರೂಪಿ ಉತ್ಸವದಲ್ಲಿ ದೇಶದ ಬೇರೆ ಬೇರೆ ರಾಜ್ಯಗಳ ವಿವಿಧ ಭಾಷೆಗಳ 9 ನಾಟಕಗಳು ಹಾಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ
ಕನ್ನಡ ನಾಟಕಗಳು ಮತ್ತು 6ಏಕವ್ಯಕ್ತಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಜನವರಿ 14ರಂದೇ ಆರಂಭವಾಗುವ ಅಂತಾ
ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಾಕ್ಷ್ಯಚಿತ್ರಗಳನ್ನು ಒಳಗೊಂಡಂತೆ ಪ್ರತಿ ದಿನ 3 ಚಲನಚಿತ್ರಗಳಂತೆ ಬೇರೆ ಬೇರೆ ಭಾಷೆಯ ಸುಮಾರು 24 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಉದ್ಘಾಟನೆ: ಜನವರಿ 20 ಮತ್ತು 21 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಆಗಮಿಸುವ ಸಾಧಕರು, ರಂಗತಜ್ಞರು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ. ಇದೇ ಪ್ರಥಮ ಬಾರಿಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಯುವ ಸಮೂಹವನ್ನು ಆಕರ್ಷಿ ಸುವ ದೃಷ್ಟಿಯಿಂದ ಮೈಸೂರು ಜಿಲ್ಲೆಯ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳ ತಂಡಕ್ಕೆ ವಿವಿಧ ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿದ್ದು, ಅವರಿಗೆ ತರಬೇತಿ ನೀಡಲು ತಜ್ಞರನ್ನು ನೇಮಿಸಲಾಗಿದೆ.

2018ರ ಜನವರಿ 14ರಂದು ಉದ್ಘಾಟನೆಗೊಳ್ಳುವ ಈ ನಾಟಕೋತ್ಸವದಲ್ಲಿ ಪ್ರತಿದಿನ ಬೀದಿನಾಟಕ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದಿಂದ ಪ್ರಾಯೋಜಿಸಲ್ಪಡುವ ವಿವಿಧ ರಾಜ್ಯಗಳ ಜಾನಪದ ತಂಡಗಳಿಂದ ಕಲಾಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳ ತಂಡದಿಂದ ಜಾನಪದ ಕಲಾ ಪ್ರದರ್ಶನಗಳಲ್ಲದೆ ಭೂಮಿಗೀತ, ಕಲಾಮಂದಿರ, ಕಿರುರಂಗಮಂದಿರಗಳಲ್ಲಿ ಕ್ರಮವಾಗಿ ಸಂಜೆ 6.30,
7 ಹಾಗೂ 7.30ಕ್ಕೆ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ಬಹುರೂಪಿ ನಾಟಕೋತ್ಸವ ಆಯೋಜನೆ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರಂದೀಪ್‌ ಡಿ., ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.