ಹಿಮಾಚಲ ಪ್ರದೇಶ: ಜೈ’ರಾಮ್’ಗೆ ಪಟ್ಟ ಕಟ್ಟಿದ ಬಿಜೆಪಿ
Team Udayavani, Dec 24, 2017, 2:44 PM IST
ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಜೈರಾಮ್ ಠಾಕೂರ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.
5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ 52 ರ ಹರೆಯದ ಠಾಕೂರ್ ಈ ಹಿಂದೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಯಾವುದೇ ವಿವಾದ ಹಗರಣಕ್ಕೆ ಗುರಿಯಾಗದಿರುವ ರಾಜಕಾರಣಿ ಎಂಬ ಹೆಗ್ಗಳಿಕೆ ಠಾಕೂರ್ ಅವರದ್ದಾಗಿದೆ.
ಭಾನುವಾರ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಠಾಕೂರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಿಎಂ ಅಭ್ಯರ್ಥಿಯಾಗಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಅನಿರೀಕ್ಷಿತ ಸೋಲು ಅನುಭವಿಸಿದ್ದ ಹಿನ್ನಲೆಯಲ್ಲಿ ಬಿಜೆಪಿ ಇಕ್ಕಟ್ಟಿಗೆ ಸಿಲುಕಿತ್ತು. ಹುದ್ದೆಗೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರ ಹೆಸರೂ ಕೇಳಿ ಬಂದಿತ್ತು.
ನಾಳೆಸೋಮವಾರ ಸಂಜೆ ಠಾಕೂರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ