ಬಜಪೆ ಮಕ್ಕಳ ಗ್ರಾಮ ಸಭೆ


Team Udayavani, Dec 25, 2017, 2:03 PM IST

25-Dec-16.jpg

ಬಜಪೆ: ಸರಕಾರ ಕೇವಲ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ಸಮವಸ್ತ್ರ ನೀಡುತ್ತಿದೆ.ಅನುದಾನಿತ ಶಾಲೆಯಲ್ಲಿಯೂ ಬಡ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣ ಇಲಾಖೆ ಈ ಬಗ್ಗೆ ಗಮನಿಸಿ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರಗಳನ್ನು ಉಚಿತವಾಗಿ ನೀಡಬೇಕು. ಗ್ರಾಮ ಪಂಚಾಯತ್‌ ಈ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಮಾಡಬೇಕು ಎಂದು ಬಜಪೆ ಗ್ರಾಮ ಪಂಚಾಯತ್‌ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.

ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ 2017- 18ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಡಿ. 23ರಂದು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಮಹಮದ್‌ ಶರೀಫ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ವಿವಿಧ ಶಾಲೆಯ ವಿದ್ಯಾರ್ಥಿ ಸಂಘದ ನಾಯಕರು ಉದ್ಘಾಟಿಸಿದರು. ಬೆಳಗ್ಗೆ ವಿದ್ಯಾರ್ಥಿಗಳಿಂದ ಬಜಪೆ ಪೇಟೆಯಲ್ಲಿ ಮಕ್ಕಳ ಜಾಗೃತಿ ಜಾಥಾ ನಡೆಯಿತು. ಎಸೆಸೆಲ್ಸಿ ಪರೀಕ್ಷೆಗಳು ಈ ಬಾರಿ ಬೇಗ ಬರುತ್ತಿದೆ. ವಿದ್ಯುತ್‌ ಕಡಿತ ಮಾಡದಂತೆ ಮೆಸ್ಕಾಂ ಇಲಾಖೆಯನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.

ಬ್ಯಾಗ್‌ ರಹಿತ ದಿನ ಉತ್ತಮ
ಶನಿವಾರ ಬ್ಯಾಗ್‌ ರಹಿತ ದಿನ ಆಚರಿಸಲಾಗಿದೆ. ಮಕ್ಕಳು ಪುಸ್ತಕದ ಹೊರೆ ಕಡಿಮೆ ಮಾಡಲು ಜಿಲ್ಲಾದ್ಯಂತ
ಈ ದಿನ ಆಚರಿಸಲಾಗಿದೆ. ಈ ದಿನದಲ್ಲಿ ಮಕ್ಕಳು ಪಠ್ಯಕ್ಕೆ ಸಂಬಂಧಿಸಿ ವಿಷಯಗಳ ಚರ್ಚೆ, ವಿವಿಧ ಚಟುವಟಿಕೆಗಳನ್ನು
ಮಾಡಬೇಕಾಗಿದೆ. ಶಿಕ್ಷಕರಿಂದ ಒಳ್ಳೆಯ ಅಭಿಪ್ರಾಯವೂ ಬಂದಿದೆ ಎಂದು ಉಸ್ಮಾನ್‌ ಹೇಳಿದರು.

ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಮೋಹಿನಿ ಮಾತನಾಡಿ, ಈ ಬಾರಿ ಡಿಪಿಟಿ ಚುಚ್ಚು ಮದ್ದು ಬಂದಿಲ್ಲ. ಇದರಿಂದ ಮಕ್ಕಳಿಗೆ ಚುಚ್ಚುಮದ್ದು ಕೊಟ್ಟಿಲ್ಲ. ಟಿಟಿಯನ್ನು ಶಾಲಾ ಮಕ್ಕಳಿಗೆ ನೀಡಲಾಗಿದೆ ಎಂದು ತಿಳಿಸಿದರು.

ಅರ್ಧ ಮೊಟ್ಟೆ ಯಾರಿಗೆ?
ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕೆಲವು ಅಂಗನವಾಡಿ ಕೇಂದ್ರದಲ್ಲಿ ಅರ್ಧ ಮೊಟ್ಟೆ ಮಾತ್ರ ಮಕ್ಕಳಿಗೆ ನೀಡಲಾಗುತ್ತದೆ. ಉಳಿದ ಅರ್ಧ ಮೊಟ್ಟೆ ಎಲ್ಲಿ ಹೋಗುತ್ತದೆ ಎಂದು ವಿಷಯ ಸಭೆಯಲ್ಲಿ ಚರ್ಚೆಗೆ ಬಂತು.

ಇದಕ್ಕೆ ಉತ್ತರಿಸಿದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಚಂದ್ರಿಕಾ, ಮಕ್ಕಳಿಗೆ ಒಮ್ಮೆಲೇ ಒಂದು ಮೊಟ್ಟೆ ಕೊಟ್ಟರೆ ಹಿಡಿಯಲು ಕಷ್ಟ ವಾಗುತ್ತದೆ. ಅದು ಕೈಯಿಂದ ಜಾರಿ ಬೀಳುತ್ತದೆ. ಕೆಲವರು ಎಲ್ಲವನ್ನೂ ತಿನ್ನುವುದಿಲ್ಲ. ಅರ್ಧ ತಿಂದು ಬಿಸಾಡುತ್ತಾರೆ. ಇದಕ್ಕಾಗಿ ಮೊದಲು ಅರ್ಧ ಮೊಟ್ಟೆಯನ್ನು ಮಕ್ಕಳಿಗೆ ನೀಡಲಾಗುತ್ತದೆ. ಅದು ತಿಂದ ಬಳಿಕ ಇನ್ನೊಂದು ಅರ್ಧ ಮೊಟ್ಟೆಯನ್ನು ನೀಡಲಾಗುತ್ತದೆ ಎಂದರು.

ಮಕ್ಕಳು ಹಕ್ಕುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮೂಡಬಿದಿರೆ ಆಳ್ವಾಸ್‌ ಪ್ರೌಢಶಾಲಾ ಮುಖ್ಯ ಶಿಕ್ಷಕ ವಸಂತ
ಕುಮಾರ್‌ ನಿಟ್ಟೆ ಮಾಹಿತಿ ನೀಡಿದರು. ಮಕ್ಕಳ ಬಗ್ಗೆ ಹೆತ್ತವರು ಮತ್ತು ಶಿಕ್ಷಕರು ಕಾಳಜಿ ವಹಿಸಬೇಕು ಎಂದು ಎಸ್‌ಐ
ಮದನ್‌ ಹೇಳಿದರು.

ತಾಲೂಕು ಪಂಚಾಯತ್‌ ಸದಸ್ಯೆ ಲತಾ ಸುವರ್ಣ, ಗ್ರಾಮ ಪಂಚಾಯತ್‌ ಸದಸ್ಯರಾದ ಸುರೇಂದ್ರ ಪೆರ್ಗಡೆ, ಸುಧಾಕರ ಕಾಮತ್‌, ಸಾಹುಲ್‌ ಹಮೀದ್‌, ಲೋಕೇಶ್‌ ಪೂಜಾರಿ, ಸುಮಾ ಶೆಟ್ಟಿ , ವೇದಾವತಿ, ಅಯಿಶಾ, ಯಶೋಧಾ, ಉದಯ, ನಝೀರ್‌ ಉಪಸ್ಥಿತರಿದ್ದರು.ಸಭೆಯನ್ನು ಪಿಡಿಒ ಸಾಯೀಶ್‌ ಚೌಟ ನಿರ್ವಹಿಸಿದರು.

ಆಧಾರ್‌ ಕಾರ್ಡ್‌ ಆಗಿಲ್ಲ
ಗ್ರಾಮ ಲೆಕ್ಕಾಧಿಕಾರಿ ಕಿಶೋರ್‌ ಅವರು ಕಂದಾಯ ಇಲಾಖೆ ಮಾಹಿತಿ ನೀಡಿದರು. ಅ ಸಂದರ್ಭದಲ್ಲಿ ಮಕ್ಕಳು ಆಧಾರ್‌ ಕಾರ್ಡ್‌ ಇನ್ನೂ ಸರಿಪಡಿಸಿಲ್ಲ. ಇದಕ್ಕಾಗಿ ಮಂಗಳೂರಿಗೆ ಹೋಗಬೇಕಾಗಿದೆ ಎಂದು ತಮ್ಮ ಸಮಸ್ಯೆಯನ್ನು ಹೇಳಿದರು. ಅದಕ್ಕೆ ಉತ್ತರಿಸಿದ ಕಿಶೋರ್‌, ಈಗಾಗಲೇ ಶೇ. 94ರಷ್ಟು ಆಧಾರ್‌ ಕಾರ್ಡ್‌ ಅಗಿದೆ. ಕೇವಲ ಮೊಬೈಲ್‌ ನಂಬರ್‌ ಹಾಗೂ ವಿಳಾಸ ತಿದ್ದುಪಡಿ ಆಗಲು ಬಾಕಿ ಇದೆ. ಇದು ಅಂಚೆ ಕಚೇರಿಯಲ್ಲಿ ನಡೆಯುತ್ತಿದೆ. ಮುಂದೆ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆಬಹುದು ಎಂದು ಹೇಳಿದರು.

ಸಿಬಂದಿ ಕೊರತೆ
ಬಜಪೆ ಪ್ರಾಥಮಿಕ ಆರೋಗ್ಯಕೇಂದ್ರ ಮೇಲ್ದೆರ್ಜೆಗೆ ಏರುವಲ್ಲಿ ಈಗಾಗಲೇ ಅದು ಚಾಲನೆಯಲ್ಲಿದೆ. ಅದರೆ ಸಿಬಂದಿಯ ಕೊರತೆ ಇಲ್ಲಿ ಈಗ ಇದೆ. ಕೇಂದ್ರದ ವ್ಯಾಪ್ತಿಯ ಅದ್ಯಪಾಡಿ, ಕಂದಾವರ,ಪಡುಪೆರಾರ ಉಪಕೇಂದ್ರಗಳಲ್ಲಿ ಸಿಬಂದಿ ಖಾಲಿ ಇದೆ. 2018 ಜ. 14ರಿಂದ 24ರವರೆಗೆ ಮನೆ ಮನೆಗೆ ಟಿಬಿಯ ಬಗ್ಗೆ ಸರ್ವೆ  ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು ಎಂದು ಬಜಪೆ ಪ್ರಾ. ಆ. ಕೇಂದ್ರದ ಮೇಲ್ವಿಚಾರಕಿ ಮೋಹಿನಿ ಎಂದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.