ಸಿನ್ಮಾ ಟೈಟಲ್‌ ಆಯ್ತು ಭೈರತಿ ರಣಗಲ್ಲು 

Team Udayavani, Dec 27, 2017, 11:01 AM IST

mufti.jpg

ಯಾವುದೇ ಒಂದು ಚಿತ್ರದ ಪಾತ್ರ ಅಥವಾ ಹಾಡು ಇಷ್ಟವಾದರೆ ಅದನ್ನೇ ಟೈಟಲ್‌ ಇಟ್ಟುಕೊಂಡು ಸಿನಿಮಾಗಳು ಬರೋದು ನಿಮಗೆ ಗೊತ್ತಿರಬಹುದು. ಈಗಾಗಲೇ ಆ ತರಹದ ಅನೇಕ ಉದಾಹರಣೆಗಳು ಕನ್ನಡ ಚಿತ್ರರಂಗದಲ್ಲಿ ಸಿಗುತ್ತವೆ. ಈಗ ಅದಕ್ಕೆ ಹೊಸ ಸೇರ್ಪಡೆ ಶಿವಣ್ಣನ ಸಿನಿಮಾವೊಂದರ ಪಾತ್ರ. ಹೌದು, ಶಿವರಾಜಕುಮಾರ್‌ ಅವರು “ಮಫ್ತಿ’ ಚಿತ್ರದಲ್ಲಿ ನಿರ್ವಹಿಸಿರುವ ಪಾತ್ರಕ್ಕೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅವರ ಗೆಟಪ್‌, ಸ್ಟೈಲ್‌, ಪಾತ್ರದ ಹೆಸರು …. ಎಲ್ಲವನ್ನೂ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಶಿವರಾಜಕುಮಾರ್‌ ಅವರು “ಮಫ್ತಿ’ ಚಿತ್ರದಲ್ಲಿ ಭೈರತಿ ರಣಗಲ್ಲು ಎಂಬ ಡಾನ್‌ ಪಾತ್ರ ಮಾಡಿದ್ದರು. ಈಗ ಅವರ ಪಾತ್ರದ ಹೆಸರೇ ಚಿತ್ರಕ್ಕೆ ಟೈಟಲ್‌ ಆಗಿದೆ. ಹೌದು, “ಭೈರತಿ ರಣಗಲ್ಲು’ ಎಂಬ ಶೀರ್ಷಿಕೆಯನ್ನು ಮಂಡಳಿಯಲ್ಲಿ ನೋಂದಣಿ ಮಾಡಲಾಗಿದೆ. ಮೂಲಗಳ ಪ್ರಕಾರ, ಈ ಟೈಟಲ್‌ ಕೆ.ಪಿ.ಶ್ರೀಕಾಂತ್‌ ಅವರ ಬ್ಯಾನರ್‌ನಲ್ಲಿ ನೋಂದಣಿಯಾಗಿದೆ.

ಹಾಗಾದರೆ ಕೆ.ಪಿ.ಶ್ರೀಕಾಂತ್‌ “ಭೈರತಿ ರಣಗಲ್ಲು’ ಸಿನಿಮಾ ನಿರ್ಮಿಸುತಾರಾ? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಸದ್ಯಕ್ಕೆ ಆ ಪ್ರಶ್ನೆಗೆ ಉತ್ತರವಿಲ್ಲ. ಆದರೆ, ಆ ಹೆಸರು ಶಿವಣ್ಣನಿಗೂ ತುಂಬಾ ಇಷ್ಟವಾಗಿದೆಯಂತೆ. ಮುಂದೆ ಆ ಟೈಟಲ್‌ನಡಿ ಸಿನಿಮಾ ಮಾಡುವ ಆಸೆಯೂ ಅವರಿಗಿದೆ ಎಂಬ ಮಾತು ಕೇಳಿಬರುತ್ತಿದೆ. ಸದ್ಯ ಶಿವರಾಜಕುಮಾರ್‌ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಆ ಚಿತ್ರಗಳನ್ನು ಮುಗಿಸಿದ ಬಳಿಕ “ಭೈರತಿ ರಣಗಲ್ಲು’ ಆರಂಭವಾಗಬಹುದು ಎಂಬ ಸುದ್ದಿಯೂ ಇದೆ.

ಇನ್ನು, ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಸದ್ಯ ಶಿವರಾಜಕುಮಾರ್‌ಗೆ “ಟಗರು’ ಸಿನಿಮಾ ಮಾಡುತ್ತಿದ್ದು, ಈ ಚಿತ್ರ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ. ಮುಂದೆ “ಭೈರತಿ ರಣಗಲ್ಲು’ ಚಿತ್ರವನ್ನು ಶಿವಣ್ಣನಿಗೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇದರ ನಡುವೆಯೇ “ಭೈರತಿ ರಣಗಲ್ಲು’ ಚಿತ್ರಕ್ಕೆ “ಮಫ್ತಿ’ ನಿರ್ದೇಶಿಸಿದ ನರ್ತನ್‌ ಅವರೇ ನಿರ್ದೇಶನ ಮಾಡುತ್ತಾರೆನ್ನಲಾಗಿದೆ. ಅದೇನೇ ಆದರೂ ಸಿನಿಮಾ ಯಾವಾಗ ಆಗುತ್ತದೆ, ಯಾರು ಮಾಡುತ್ತಾರೆಂಬುದನ್ನು ತಿಳಿಯಲು ಇನ್ನೂ ಸಾಕಷ್ಟು ಸಮಯವಿದೆ. 

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.