ರಾಜನ್‌ ಹತ್ಯೆಗೆ ದಾವೂದ್‌ ಸಂಚು

Team Udayavani, Dec 28, 2017, 6:00 AM IST

dawood.jpg

ನವದೆಹಲಿ: ಮುಪ್ಪು ಆವರಿಸಿರುವ ಹಿನ್ನೆಲೆಯಲ್ಲಿ ಶರಣಾಗತನಾಗಿ ನವದೆಹಲಿಯ ತಿಹಾರ್‌ ಜೈಲಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಕೊಲ್ಲಲು ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಗ್ಯಾಂಗ್‌ ಯೋಚಿಸಿತ್ತೇ? ಕೇಂದ್ರ ಗುಪ್ತಚರ ಸಂಸ್ಥೆಗಳು ಜೈಲಧಿಕಾರಿಗಳ ಜತೆ ಹಂಚಿಕೊಂಡಿರುವ ಮಾಹಿತಿಯಂತೆ ಈ ವಿಚಾರ ಹೌದು.

ಎರಡು ವಾರಗಳ ಹಿಂದೆ ಇಂಥ ಒಂದು ಸಂಚು ಬಹಿರಂಗವಾಗಿತ್ತು. ಈಗಾಗಲೇ ಜೈಲಲ್ಲಿರುವ ಪಾತಕಿ ನೀರಜ್‌ ಬವಾನಾ ಎಂಬಾತನ ಮೂಲಕವೇ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಮಾಹಿತಿ ದೊರೆತಿದೆ.

ಜೈಲಲ್ಲೇ ಕೊಲ್ಲಲು ಚಿಂತನೆ: ಬವಾನಾ ಎಂಬಾತ ಕೂಡ ತಿಹಾರ್‌ ಜೈಲಲ್ಲಿಯೇ ಇದ್ದಾನೆ. ಆತನ ಭೇಟಿಗಾಗಿ ಸಂದರ್ಶಕನೊಬ್ಬ ಬಂದಿದ್ದ ವೇಳೆ ಈ ಬಗ್ಗೆ ಚರ್ಚೆ ನಡೆದಿತ್ತು. ಅದನ್ನು ಕೇಂದ್ರ ಗುಪ್ತಚರ ಸಂಸ್ಥೆಗಳು ಪತ್ತೆ ಹಚ್ಚಿದ್ದವು. ಈ ಬಗ್ಗೆ ಸುಳಿವು ದೊರೆತ ಕೂಡಲೇ ತಿಹಾರ್‌ ಜೈಲಿನ ಅಧಿಕಾರಿಗಳು, ಬವಾನಾನನ್ನು ಬಿಗಿ ಭದ್ರತೆಯ ಮತ್ತೂಂದು ಸೆಲ್‌ಗೆ ವರ್ಗಾಯಿಸಿದ್ದಾರೆ. ಈ ಸಂದರ್ಭದಲ್ಲಿ ಆತನ ಬಳಿ ಮೊಬೈಲ್‌ ಫೋನ್‌ ಇದ್ದದ್ದೂ ಪತ್ತೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೈಲಧಿ ಕಾರಿಗಳು, ಮುಂಬೈನ ಕಾರಾಗೃಹಕ್ಕಿಂತ ತಿಹಾರ್‌ ಜೈಲಲ್ಲಿ ಭದ್ರತೆ ಬಿಗಿಯಾಗಿದೆ. ಹೀಗಾಗಿ ದಾವೂದ್‌ ಸಹಚರರು ಛೋಟಾ ರಾಜನ್‌ನನ್ನು ಟಾರ್ಗೆಟ್‌ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನು ರಾಜನ್‌ಗೆ ವಿಶೇಷ ಗಾರ್ಡ್‌ಗಳ ಭದ್ರತೆ ನೀಡಲಾಗಿದೆ.

ಯಾರಿದು ಬವಾನಾ?: ಅಂದ ಹಾಗೆ ನೀರಜ್‌ ಬವಾನಾ ಎಂಬಾತ ನವದೆಹಲಿಯ ಕುಖ್ಯಾತ ಗ್ಯಾಂಗ್‌ ಸ್ಟರ್‌. ಅಕ್ರಮವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ 2016ರ ಸೆಪ್ಟೆಂಬರ್‌ನಲ್ಲಿ ಆತನಿಗೆ ದೆಹಲಿಯ ಸ್ಥಳೀಯ ಕೋರ್ಟೊಂದು ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ಪಶ್ಚಿಮ ದೆಹಲಿ ನಿವಾಸಿಯಾಗಿರುವ ಆತನ ವಿರುದಟಛಿ ಕೊಲೆ, ಕೊಲೆಯತ್ನ, ಸುಲಿಗೆ ಸೇರಿದಂತೆ ಗುರುತರ ಆರೋಪಗಳು ಇವೆ. ಹಿಂದೆ ಕೂಡ ದಾವೂದ್‌ ಛೋಟಾ ರಾಜನ್‌ನನ್ನು
ಹತ್ಯೆ ಮಾಡಲು ಸಂಚು ರೂಪಿಸಿ ವಿಫ‌ಲನಾಗಿದ್ದ.

ಬೆಳಕಿಗೆ ಬಂದದ್ದು ಹೇಗೆ?
ಜೈಲಲ್ಲಿರುವ ಬವಾನಾ ಎಂಬಾತನ ಸಹಚರನೊಬ್ಬ ನವೆಂಬರ್‌ ಮಧ್ಯಭಾಗದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಆತ ದೆಹಲಿಯಲ್ಲಿ ಕುಖ್ಯಾತ ಗ್ಯಾಂಗ್‌ ಲೀಡರ್‌ ಒಬ್ಬನ ಜತೆ ರಾಜನ್‌ನನ್ನು ಮುಗಿಸುವ ಮಾತಾಡಿದ್ದ. ಆತ ಮತ್ತೂಬ್ಬನಿಗೆ ಫೋನ್‌ ಮಾಡಿದ ಸಂದರ್ಭದಲ್ಲಿ “ದೊಡ್ಡ ಟಾಸ್ಕ್ ಒಂದು ಇದೆ’ ಎಂದು ಹೇಳಿದ್ದನ್ನು ಪತ್ತೆ ಮಾಡಿ ಬೆನ್ನು ಹತ್ತಲಾಗಿತ್ತು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.