ಮಲ್ಪೆ ಬೀಚ್‌: ಇಂದಿನಿಂದ 3 ದಿನ “ಉಡುಪಿ ಪರ್ಬ’

Team Udayavani, Dec 29, 2017, 6:00 AM IST

281217Astro02.jpg

ಮಲ್ಪೆ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಮಲ್ಪೆ ಅಭಿವೃದ್ಧಿ ಸಮಿತಿ, ಉಡುಪಿ ಡಾ| ಜಿ. ಶಂಕರ್‌ ಸರಕಾರಿ ಮಹಿಳಾ ಪ್ರ.ದ.ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಬೆಂಗಳೂರು ಹಾಗೂ ಕರಾವಳಿ ಪ್ರವಾಸೋದ್ಯಮಗಳ ಸಂಘಟನೆಗಳ ಆಶ್ರಯದಲ್ಲಿ ಮಲ್ಪೆ ಕಡಲ ಕಿನಾರೆಯಲ್ಲಿ ಡಿ. 29ರಿಂದ 31ರ ವರೆಗೆ ನಡೆಯಲಿರುವ ಉಡುಪಿ ಪರ್ಬ ಮತ್ತು ಉಡುಪಿ ಸಾಹಸ ಉತ್ಸವಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ.

ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೋತ್ಸವ, ಸಾಹಸ ಕ್ರೀಡೆ, ಆಹಾರೋತ್ಸವ, ಗೂಡುದೀಪ ಸ್ಪರ್ಧೆ, ಮರಳು ಶಿಲ್ಪ, ಗಾಳಿಪಟ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು ಅದಕ್ಕಾಗಿ ಸಂಘಟಕರಿಂದ ಪೂರ್ವ ತಯಾರಿಗಳು ನಡೆಯುತ್ತಿವೆ. ಕಾರ್ಯಕ್ರಮಕ್ಕೆ ಬೃಹತ್‌ ಗಾತ್ರದ ವೇದಿಕೆಯ ನಿರ್ಮಾಣದ ಕೆಲಸಗಳು ನಡೆಯುತ್ತಿವೆ.  ಕರಕುಶಲ ವಸ್ತುಗಳು ಸೇರಿದಂತೆ ಆಹಾರ ಮೇಳಗಳ ಪ್ರದರ್ಶನ ಮತ್ತು ಮಾರಾಟದ 30 ಮಳಿಗೆಗಳನ್ನು ತೆರೆಯಲಾಗುತ್ತದೆ. 

ಸಿಸಿ ಕೆಮರಾ ಅಳವಡಿಕೆ
ಮುಂಜಾಗ್ರತೆಗಾಗಿ ಈಗಿರುವ 7 ಸಿಸಿ ಕೆಮರಾ ಅಲ್ಲದೆ ಹೆಚ್ಚುವರಿಯಾಗಿ 12 ಕೆಮರಾಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮದ ವೀಕ್ಷಣೆಗಾಗಿ ಸುಮಾರು 5 ಸಾವಿರ ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ.
ಡಿ. 29ರಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಸಚಿವ ಪ್ರಿಯಾಂಕಾ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಶಿವಮಣಿ ಅವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. 

30ರಂದು ಪ್ರಹ್ಲಾದ ಆಚಾರ್ಯ ಅವರಿಂದ ಶ್ಯಾಡೋ ಪ್ಲೇ  ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಜರಗಲಿದೆ. ಡಿ. 31ರಂದು ಸರಿಗಮಪ ತಂಡದವರಿಂದ ಸಂಗೀತ ಸಂಜೆ, ಬಳಿಕ ಹೊಸವರ್ಷ ಆಚರಣೆಯ ಪ್ರಯುಕ್ತ ಮಂತ್ರ ಡಯಾಲ್‌ ವತಿಯಿಂದ ಒಂದು ಗಂಟೆ ಅವಧಿಯ ಸುಡುಮದ್ದು ಪ್ರದರ್ಶನ ನಡೆಯಲಿದೆ.

ರಾಷ್ಟ್ರೀಯ ಓಪನ್‌ ಈಜು
ರಾಷ್ಟ್ರಮಟ್ಟದ  ಓಪನ್‌ ಸ್ವಿಮ್ಮಿಂಗ್‌ ಸ್ಪರ್ಧೆಗಳು ಡಿ. 30ರಂದು ಬೆಳಗ್ಗೆ 7 ಕ್ಕೆ ಮಲ್ಪೆ ಅರಬ್ಬಿ ಸಮುದ್ರದಲ್ಲಿ ನಡೆಯಲಿದೆ. ಭಾರತದಲ್ಲಿ ನಡೆಯುವ ಏಕೈಕ ಓಪನ್‌ ಈಜು ಸ್ಪರ್ಧೆ ಇದಾಗಿದೆ. ಈಗಾಗಲೇ 270 ಮಂದಿ 14, 16, 18  ವಯೋ ವಿಭಾಗದಲ್ಲಿ ನೋಂದಣಿ ಮಾಡಿದ್ದಾರೆ.ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ತರಲಾಗಿದ್ದು, ರಾಷ್ಟ್ರೀಯ ಸ್ವಿಮ್ಮಿಂಗ್‌ ಫೆಡರೇಶನಿನ ಕಾರ್ಯದರ್ಶಿ ಬಂದು ಸ್ಥಳದ ಪರಿವೀಕ್ಷಣೆ ನಡೆಸಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಹಿಳೆಯರಿಗೆ ಮತ್ತು ಪುರುಷರಿಗೆ ಬೀಚ್‌ ಹಗ್ಗಜಗ್ಗಾಟವೂ ನಡೆಯಲಿದೆ.

ಸಾಹಸ ಸ್ಪರ್ಧೆ
ಉಡುಪಿ ಪರ್ಬದ ಅಂಗವಾಗಿ ಟೆರಿಸ್ಟ್ರೀಯ ಅಡ್ವೆಂಚರ್‌ ನ್ಪೋರ್ಟ್ಸ್ ಗಳಾದ ಬೋಲ್ಡಿಂಗ್‌ ಸ್ಲೇಕ್‌ಲೈನ್‌, ಜುಮ್ಮರಿಂಗ್‌, ಬರ್ಮಾಬ್ರಿಡ್ಜ್, ಕಮಾಂಡೋ ಬ್ರಿಡ್ಜ್, ಸೇÉಕ್‌ಲೈನ್‌ ಸುರಕ್ಷತಾ ಕಾರ್ಯಾಗಾರಗಳು ನಡೆಯಲಿವೆೆ. 125 ಕಿ. ಮೀ. ಸೈಕಲ್‌ ಸ್ಪರ್ಧೆ, ಈಜು, ಎಕ್ಟ್ರೀಮ್‌ ಸೋ³ರ್ಟ್ಸ್, ಬಿಎಂಎಕ್ಸ್‌, ಸೇRಟ್‌ ಬೋರ್ಡಿಂಗ್‌, ಸಾರ್ವಜನಿಕರಿಗೆ ರಿಯಾಯಾತಿ ದರದಲ್ಲಿ ಜೆಟ್‌ಸ್ಕೈ, ವಿಂಡ್‌ ಸರ್ಫಿಂಗ್‌, ಬನಾನ ರೈಡ್‌, ಕಯಾಕಿಂಗ್‌ ನಡೆಸಲಾಗುವುದು. 

– ನಟರಾಜ್‌ ಮಲ್ಪೆ

ಚಿತ್ರ: ಆಸ್ಟ್ರೋಮೋಹನ್‌

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.