ಚಾರಣ ಹೋಮ: ಒಂದು ಟ್ರೆಕ್ಕಿಂಗ್‌ ಸ್ಟೋರಿ


Team Udayavani, Jan 2, 2018, 9:13 AM IST

02-6.jpg

ಯೋಗಾನರಸಿಂಹ ದೇವಸ್ಥಾನ ನೋಡುವ ನೆಪದಲ್ಲಿ ಟ್ರೆಕ್ಕಿಂಗ್‌ ಕೂಡಾ ಆಗಿಬಿಡುತ್ತದೆಯೆಂದು ದೇವರಾಯನ ದುರ್ಗಕ್ಕೆ ಹೊರಡಲು ಮಕ್ಕಳೆಲ್ಲರೂ ಒಕ್ಕೊರಳಿನಿಂದ ಒಪ್ಪಿದರು. ಬಂಡೆಗಲ್ಲಿನ ನಡುವೆ ವರ್ಷವಿಡೀ ಬತ್ತದೆ ಹರಿಯುವ ಚಿಲುಮೆಯನ್ನು ನೋಡಲು ಮುನ್ನುಗ್ಗಿತು ಕಪಿಸೇನೆ. ವನವಾಸದ ವೇಳೆ ಕಾಡಿನಿಂದ ಕಾಡಿಗೆ ಸಂಚರಿಸುತ್ತಾ ಶ್ರೀರಾಮ ಈ ಪ್ರದೇಶಕ್ಕೆ ಬಂದಾಗ, ನೀರಿನ ಸೆಲೆ ಕಾಣದೆ ತಾನೇ ಬಾಣ ಪ್ರಯೋಗಿಸಿ ಒರತೆಯೊಂದನ್ನು ಚಿಮ್ಮಿಸಿದ ಕತೆಯನ್ನು ತಾನೇ ಕಣ್ಣಾರೆ ಕಂಡಂತೆ ವರ್ಣಿಸಿದಳು ಅದೇ ಏರಿಯಾದ ಮೂಲನಿವಾಸಿ ಸವಿತಾ.

“ಭಾನುವಾರ ಎಲ್ಲರೂ ಫ್ರೀ ಇದ್ದೀರೇನ್ರೊ? ನಿಮ್ಗೆಲ್ಲ ಓಕೆ
ಅಂದ್ರೆ ದೇವರಾಯನದುರ್ಗಕ್ಕೆ ಒಂದು ಟ್ರೆಕ್ಕಿಂಗ್‌ ಹೋಗ್ಬರೋಣ’ ಅಂದಿದ್ದೇ ತಡ, ಇನ್ನೇನು ಸೇತುವೆ ಕಟ್ಟಿಯೇ ಸಿದ್ಧ ಎಂದು ಹೊರಟ ವಾನರ ಸೈನ್ಯದಂತೆ ಇಡೀ ಕ್ಲಾಸು ಜೈ ಎಂದು ಎದ್ದು ನಿಂತಿತು. “ನಡ್ಕೊಂಡೇ ಹೋಗೋದಾ ಸಾರ್‌?’ ಎಂದು ಸೈನ್ಯದ ನಡುವಿನಿಂದ ಕೀರಲು ಅಶರೀರವಾಣಿಯೊಂದು ಕೇಳಿಬಂದದ್ದೂ, “ಇಲ್ಲ ನಿಮ್‌ ತಾತ ಫ್ಲೈಟ್‌ ತರ್ತಾರೆ, ಟೆನ್ಸ್ನ್‌ ಮಾಡ್ಕೊàಬೇಡ’ ಎಂದು ಮತ್ತೂಂದು ದನಿ ಛೇಡಿಸಿದ್ದೂ, “ಟ್ರೆಕ್ಕಿಂಗ್‌ ಅಂದ್ರೆ ನಡ್ಕೊಂಡೇ ಹೋಗೋದು ಕಣಮ್ಮಾ’ ಎಂದು ಇನ್ನೊಬ್ಬ ಸ್ಪಷ್ಟೀಕರಣ ಕೊಟ್ಟಿದ್ದೂ ಮುಂದಿನ ಮೂರು ಕ್ಷಣಗಳಲ್ಲಿ ನಡೆದುಹೋಯಿತು.

ಹೊರಟಿತು ಸವಾರಿ
ಅಂತೂ ಭಾನುವಾರದ ಚುಮುಚುಮು ಮುಂಜಾನೆ ಎಲ್ಲರನ್ನೂ ಹೊತ್ತು ತುಮಕೂರಿನಲ್ಲೇ ವರ್ಲ್ಡ್ಫೇಮಸ್ಸಾದ ಡಕೋಟಾ ಬಸ್ಸು ಬೆಳಗುಂಬ ಗ್ರಾಮ ದಾಟಿ ಮುಂದಕ್ಕೆ ತೆವಳಿತು. ಅಪರೂಪಕ್ಕೆ ಹುಡುಗ ಹುಡುಗಿಯರಿಂದಲೇ ತುಂಬಿ ತೊನೆದಾಡುತ್ತಿದ್ದ ಬಸ್ಸು ಯಾವ ಕೋನದಿಂದ ನೋಡಿದರೂ ಮದುವೆ ದಿಬ್ಬಣಕ್ಕಿಂತ ಕಡಿಮೆಯಿರಲಿಲ್ಲ. ಅರ್ಧ ಗಂಟೆಯಲ್ಲಿ ನಾವು ನಾಮದ ಚಿಲುಮೆ ತಲುಪಿಯಾಗಿತ್ತು. ಜಿಂಕೆವನಕ್ಕೆ ಸುತ್ತು ಹಾಕಿ, ಬಂಡೆಗಲ್ಲಿನ ನಡುವೆ ವರ್ಷವಿಡೀ ಬತ್ತದೆ ಹರಿಯುವ ಚಿಲುಮೆಯನ್ನು ನೋಡಲು ಮುನ್ನುಗ್ಗಿತು ಕಪಿಸೇನೆ. ವನವಾಸದ ವೇಳೆ ಕಾಡಿನಿಂದ ಕಾಡಿಗೆ ಸಂಚರಿಸುತ್ತಾ ಶ್ರೀರಾಮ ಈ ಪ್ರದೇಶಕ್ಕೆ ಬಂದಾಗ, ನೀರಿನ ಸೆಲೆ ಕಾಣದೆ ತಾನೇ ಬಾಣ ಪ್ರಯೋಗಿಸಿ ಒರತೆಯೊಂದನ್ನು ಚಿಮ್ಮಿಸಿದ ಕತೆಯನ್ನು ತಾನೇ ಕಣ್ಣಾರೆ ಕಂಡಂತೆ ವರ್ಣಿಸಿದಳು ಅದೇ ಏರಿಯಾದ ಮೂಲನಿವಾಸಿ ಸವಿತಾ. 

ನಡೆ ಮುಂದೆ ನಡೆ ಮುಂದೆ
ಸಮೀಪದ ಕಲ್ಲುಮಂಟಪವನ್ನು ಏರಿ ಫೋಟೋ ಸೆಶನ್‌ ಮುಗಿಸಿಕೊಂಡ ಮೇಲೆ ಆರಂಭವಾಯಿತು ನಮ್ಮ ಟ್ರೆಕ್ಕಿಂಗ್‌. “ತಂದಾನಿ ತಾನೋ ತಾನಿ ತಂದಾನೋ’ ಎಂದು ಕೈಕೈ ಹಿಡಿದು ಹುಡುಗಿಯರ ತಂಡ ಮುಂದುವರಿದರೆ, “ಡಕ್ಕಣಕಾ ಣಕಾ ಜಕಾ’ ಎಂದು ತಮ್ಮದೇ ಸ್ಟೈಲಲ್ಲಿ ಹೆಜ್ಜೆ ಹಾಕುತ್ತಾ ತಿರುವುಗಳಲ್ಲಿ ಸಾಗಿ ಬೆಟ್ಟದ ಬುಡ ತಲುಪಿತು ಹುಡುಗರ ಗಡಣ. ದುರ್ಗದ ಬಾಗಿಲಲ್ಲಿರುವ ಯೋಗಾನರಸಿಂಹಸ್ವಾಮಿ ದೇವಾಲಯದ ಎದುರೇ ಮನೆ ಕಟ್ಟಿಕೊಂಡಿರುವ ಕವಿತಾ, ಜ್ಯೂಸ್‌ ಪಾನಕಗಳೊಂದಿಗೆ ಆಗಲೇ ಸಿದ್ಧವಾಗಿದ್ದರಿಂದ ಬೆಟ್ಟವೇರುವ ಸೈನ್ಯದ ಉತ್ಸಾಹ ಇಮ್ಮಡಿಸಿತು. ತಮ್ಮ ತಮ್ಮ ಟ್ಯಾಂಕ್‌ಗಳನ್ನು ಮತ್ತೂಮ್ಮೆ ಭರ್ತಿ ಮಾಡಿಕೊಂಡ ಹುಡುಗರು ಬೆಟ್ಟದತ್ತ ಸರಭರನೆ ಹೆಜ್ಜೆಯಿಟ್ಟೇಬಿಟ್ಟರು. 

ಬ್ಯಾಗ್‌ ಹೊತ್ತೂಯ್ದ ಕೋತಿ
ಹುಡುಗಿಯರು ಸಲೀಸಾದ ಡಾಂಬಾರು ರಸ್ತೆಯಲ್ಲಿ ಗುಂಪುಗುಂಪಾಗಿ ಗೀಗೀ ಪದ ಹೊಸೆದುಕೊಂಡು ಸಾಗಿದರೆ, ಹುಡುಗರು ತಮ್ಮ ಸಹಜ ಧರ್ಮವನ್ನು ಬಿಡಲಾಗದೆ ಕಲ್ಲುಬಂಡೆಗಳ ನಡುವೆ ಹಾದಿ ಹುಡುಕಿಕೊಂಡು ಏರತೊಡಗಿದರು. ದೇವರಾಯನ ದುರ್ಗವೆಂದರೆ ಕೇಳಬೇಕೇ? ತಮ್ಮ ಸ್ನೇಹಿತ ವರ್ಗ ಬರುತ್ತಿದೆಯೆಂದು ಮೊದಲೇ ತಿಳಿದವರಂತೆ ಕಾದುಕುಳಿತಿದ್ದವು ನೂರಾರು ಕೋತಿಗಳು. ತಮಗಿಂತಲೂ ಚೆನ್ನಾಗಿ ಬೆಟ್ಟವೇರಲು ಗೊತ್ತಿದ್ದ ಹುಡುಗರನ್ನು ಕಂಡು ಸೋಜಿಗದಿಂದ ತಾವೂ ಮರದಿಂದ ಮರಕ್ಕೆ ನೆಗೆಯುತ್ತಾ ಹಿಂಬಾಲಿಸಿಯೇಬಿಟ್ಟವು. ಚುರುಮುರಿ ಸೌತೆಕಾಯಿ ಮೆಲ್ಲುತ್ತಾ ಬೆಟ್ಟದ ತಪ್ಪಲಿನ ರಮಣೀಯ ಹಸಿರನ್ನು ನಿರಾಳವಾಗಿ ಕಣ್ತುಂಬಿಕೊಳ್ಳುತ್ತಿದ್ದ ಹುಡುಗಿಯರ ಗುಂಪೊಂದು ಕಿಟಾರನೆ ಕಿರುಚಿಕೊಂಡಾಗಲೇ ಕೋತಿಗಳ ನಿಜವಾದ ಕೌಶಲ ಎಲ್ಲರಿಗೂ ಅರ್ಥವಾದದ್ದು. ಕೆಂಪು ಮೂತಿಯ ದಢೂತಿ ಗಡವವೊಂದು ಅನಿತಳ ಹೊಚ್ಚಹೊಸ ಹ್ಯಾಂಡ್‌ಬ್ಯಾಗನ್ನು ಸರಕ್ಕನೆ ಲಪಟಾಯಿಸಿಕೊಂಡು ಹೋಗಿ ಮರದ ತುದಿಯಲ್ಲಿ ಪ್ರತಿಷ್ಠಾಪಿತವಾಗಿತ್ತು.

ಮಿಷನ್‌ ಬ್ಯಾಗ್‌ ವಾಪಸಿ
ಜಗತ್ತನ್ನೇ ಗೆದ್ದು ಬರುವ ಉತ್ಸಾಹದಲ್ಲಿ ಬೀಗುತ್ತಿದ್ದ ಹುಡುಗರಿಗೆ ಕೋತಿಯ ಕೈಯಿಂದ ಬ್ಯಾಗನ್ನು ಪಡೆಯುವ ಕೆಲಸ ಮಾತ್ರ ಹರಸಾಹಸವಾಯಿತು. ಮರದಿಂದ ಮರಕ್ಕೆ ಬಂಡೆಯಿಂದ ಬಂಡೆಗೆ ಬ್ಯಾಗ್‌ ಸಮೇತ ನೆಗೆಯುತ್ತಾ ಕೋತಿ ಮಜಾ ತೆಗೆದುಕೊಳ್ಳುತ್ತಿದ್ದರೆ ಬ್ಯಾಗಿನ ಒಳಗೆ ಪ್ರಾಣವನ್ನೆಲ್ಲಾ ಪ್ಯಾಕ್‌ ಮಾಡಿಟ್ಟಿದ್ದ ಹುಡುಗಿಯ ಕಣ್ಣುಗಳಿಂದ ಸ್ವತಃ ಜಯಮಂಗಲಿಯೇ ಧಾರಾಕಾರವಾಗಿ ಹರಿಯುತ್ತಿದ್ದಳು. ಅಂತೂ ಹದಿನೈದು ನಿಮಿಷ ಹೋರಾಡಿ ಹುಡುಗರೆಲ್ಲ ಸೋಲೊಪ್ಪಿಕೊಂಡ ಬಳಿಕ ಬ್ಯಾಗನ್ನು ಬಂಡೆಯೊಂದರ ತುದಿಯಲ್ಲಿ ಬಿಟ್ಟು ಮಾಯವಾಯಿತು ಮಂಗ.

ಮರಳಿ ಮನೆಗೆ
ಬೆಟ್ಟದ ತುದಿ ತಲುಪಿ ದುರ್ಗವೇ ಬೆಚ್ಚಿಬೀಳುವಂತೆ ಡ್ಯಾನ್ಸ್‌ ಮಾಡಿ ಇದ್ದ ಏಕೈಕ ಕೂಲಿಂಗ್‌ ಗ್ಲಾಸನ್ನೇ ಒಬ್ಬರಾದ ಮೇಲೊಬ್ಬರಂತೆ ತೊಟ್ಟು ಫೋಟೋ ಹೊಡೆಸಿಕೊಳ್ಳುವ ಹೊತ್ತಿಗೆ ತಂದಿದ್ದ ಚಿಪು ಪಪ್ಸಾದಿ ಸರಕುಗಳೆಲ್ಲ ಬಹುತೇಕ ಖಾಲಿಯಾಗಿದ್ದವು. ಮಟಮಟ ಮಧ್ಯಾಹ್ನದ ಬಿಸಿಲಿನ ನಡುವೆಯೇ ಬೆಟ್ಟವಿಳಿದು ರಸ್ತೆ ಸೇರಿದಾಗ ಮತ್ತೆ ನಡೆದುಕೊಂಡು ನಗರ ಸೇರುವ ಉತ್ಸಾಹ ಯಾರಿಗೂ ಉಳಿದಿರಲಿಲ್ಲ. ನಡೆದುಕೊಂಡೇ ವಾಪಸ್‌ ಬಂದೆವೆಂದು ಮರುದಿನ ಪ್ರಚಾರ ಮಾಡುವುದೆಂಬ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಮೇಲೆ ಎಲ್ಲರೂ ಮತ್ತದೇ ಸೂಪರ್‌ ಡಿಲಕ್ಸ್‌ ಬಸ್‌ ಹತ್ತಿದರು. 

ಸಿಬಂತಿ ಪದ್ಮನಾಭ ಕೆ.ವಿ.

ಟಾಪ್ ನ್ಯೂಸ್

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.