ಹೊಲಸಿ ನಿಂದ ಹೊರ ಬನ್ನಿ: ಪ್ರಿಯಾಂಕ್‌

Team Udayavani, Jan 8, 2018, 11:59 AM IST

gul-5.jpg

ವಾಡಿ: ಬಯಲು ಶೌಚಾಲಯ ಬಳಕೆ ನಿಲ್ಲಿಸಿ, ವೈಯಕ್ತಿಕ ಶೌಚಾಲಯಕ್ಕೆ ಆದ್ಯತೆ ಕೊಡಿ. ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ, ಹೊಲಸಿನಿಂದ ಹೊರ ಬನ್ನಿ ಎಂದು ಹೇಳಿ ಹೇಳಿ ಸಾಕಾಗಿದೆ. ನನ್ನ ಮಾತೇ ಕೇಳುತ್ತಿಲ್ಲ. ಅಲ್ಲೇ ಹೊಲಸಿನ್ಯಾಗೆ ಇರ್ತೀನಿ ಅಂತೀರಿ, ಇರ್ರಿ ನನಗೇನು. ನೋಡಿ ಪ್ರಾಮಾಣಿಕವಾಗಿ ಕೆಲಸ ಮಾಡೋದಿದ್ರೆ ಮಾಡ್ರಿ, ಇಲ್ಲದಿದ್ದರೆ ಮನೆಗೆ ಹೋಗ್ರಿ ಎಂದು ಶಾಸಕ, ಐಟಿಬಿಟಿ ಹಾಗೂ ಪ್ರವಾಸೋಧ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಪುರಸಭೆ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಪುರಸಭೆಯಲ್ಲಿ ಶನಿವಾರ ಸಂಜೆ ಸುಮಾರು ಮೂರು ತಾಸು ವಾರ್ಡ್‌ ಸದಸ್ಯರ ಹಾಗೂ ಅಧಿಕಾರಿಗಳ ಸಭೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಅವರು, ನೀರು ಮತ್ತು ಮನೆಗಳ ಕರ ವಸೂಲಿ ಲೆಕ್ಕಪತ್ರ ಸರಿಯಾಗಿಲ್ಲ. ವಿವಿಧ ಅಭಿವೃದ್ಧಿಗಳಿಗಾಗಿ ರೂಪಿಸಲಾಗಿರುವ ಕ್ರಿಯಾಯೋಜನೆ ಪಟ್ಟಿ ವಿಶ್ವಾಸಾರ್ಹವಾಗಿಲ್ಲ. ವಸ್ತುಗಳ ಮಾರ್ಕೇಟ್‌ ಬೆಲೆ ತಿಳಿಯದೆ ಮೂತ್ರಾಲಯ, ಕುಂದನೂರ ಜಾಕ್‌ವೆಲ್‌ ಮತ್ತು ಪೈಪ್‌ ದುರಸ್ತಿಗೆ ಬೇಕಾಬಿಟ್ಟಿ ಅಂದಾಜು ವೆಚ್ಚ ಬರೆಯಲಾಗಿದೆ. ಇದರಿಂದ 28 ಲಕ್ಷ ರೂ. ಚರಂಡಿಗೆ ಚೆಲ್ಲಿದಂತಾಗಿದೆ ಎಂದು ಮುಖ್ಯಾಧಿಕಾರಿ ಶಂಕರ ಕಾಳೆ ಹಾಗೂ ಕಿರಿಯ ಅಭಿಯಂತರ ಅಶೋಕ ಪುಟ್‌ಫಾಕ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ನಗರದಲ್ಲಿ ಹಂದಿ ಸಾಕಾಣಿಕೆ ಕೂಡಲೇ ಬಂದ್‌ ಮಾಡಿ. ಸಾರ್ವಜನಿಕ ಶೌಚಾಲಯ, ರಸ್ತೆ, ಚರಂಡಿ, ಸಮುದಾಯ ಭವನಗಳ ಕಾಮಗಾರಿಗಳ ದೀರ್ಘ‌ ವಿಳಂಬಕ್ಕೆ ಕಾರಣವಾದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಮರು ಟೆಂಡರ್‌ ಕರೆಯಿರಿ. ಆ ಪಟ್ಟಿಯನ್ನು ಸೋಮವಾರ ಫಲಕಕ್ಕೆ ಅಂಟಿಸಬೇಕು. ಅನಧಿಕೃತ ನಳ ಸಂಪರ್ಕ ಕಡಿತಗೊಳಿಸಿ ಹಾಗೂ ನಗರೋತ್ಥಾನದ ಕೆಲಸ ಎಲ್ಲೆಲ್ಲಿ ಎಷ್ಟೆಷ್ಟಾಗಿದೆ ಎಂಬುದರ ಬಗ್ಗೆ ನನಗೆ ವರದಿ ಕೊಡಿ. ಜನರಲ್ಲಿ ಶೌಚಾಲಯ ಜಾಗೃತಿ ಮೂಡಿಸಲು ಎಲ್ಲಾ ಪ್ರಚಾರ ಕ್ರಮಗಳನ್ನು ಕೈಗೊಳ್ಳಿ. ಹೊರಗಿನಿಂದ ಬರುವವರಿಗಾಗಿ ಸುಲಭ ಶೌಚಾಲಯ ನಿರ್ಮಿಸಲು ಸ್ಥಳ ನಿಗದಿ ಮಾಡಿರಿ ಎಂದು ಆದೇಶಿಸಿದರು.

ಯಾವ ವಾರ್ಡ್‌ನಲ್ಲಿ ಹೆಚ್ಚು ವೈಯಕ್ತಿಕ ಶೌಚಾಲಯ ನಿರ್ಮಿಸಲಾಗುತ್ತದೋ ಆ ವಾರ್ಡ್‌ಗೆ ಶಾಸಕರ ನಿಧಿಯಿಂದ ಹೆಚ್ಚಿನ ಅನುದಾನ ನೀಡಲಾಗುವುದು. ಅಧಿಕಾರಿಗಳ ತಪ್ಪನ್ನು ಗುರುತಿಸಲು ಸದಸ್ಯರಾದವರು ಹೋಂ ವರ್ಕ್‌ ಮಾಡಿಕೊಂಡು ಬರಬೇಕು ಎಂದು ಸಲಹೆ ನೀಡಿದರಲ್ಲದೇ, ಮುಖ್ಯ ರಸ್ತೆ ಮೇಲೆ ಭಾರಿ ವಾಹನಗಳು ನಿಲ್ಲದಂತೆ ಎಚ್ಚರವಹಿಸಲು ಪೊಲೀಸರಿಗೆ ಸೂಚಿಸಿದರು.

ಪುರಸಭೆ ಅಧಿಕಾರಿಗಳು ಸೇರಿದಂತೆ ಅಧ್ಯಕ್ಷೆ ಮೈನಾಬಾಯಿ ರಾಠೊಡ, ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ ಹಾಗೂ ಚುನಾಯಿತ ಸದಸ್ಯರು ಪಾಲ್ಗೊಂಡಿದ್ದರು. ಕೆಲ ಸದಸ್ಯರು ಅಭಿವೃದ್ಧಿ ಕುರಿತು ಸಚಿವರಿಗೆ ದೂರುಗಳನ್ನು ನೀಡಿದರು 

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.