ಛಲವಿದ್ದರೆ ಅಸಾಧ್ಯವಾದದ್ದು ಯಾವುದೂ ಇಲ್ಲ: ಸಾಗರ


Team Udayavani, Jan 9, 2018, 10:27 AM IST

kal-4.jpg

ಕಲಬುರಗಿ: ದೃಢಸಂಕಲ್ಪ ಸಾಧಿಸುವ ಛಲವಿದ್ದರೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಕೌಟುಂಬಿಕ ಆರ್ಥಿಕ ಪರಿಸ್ಥಿತಿ ಸಾಧನೆಗೆ ಸಮಸ್ಯೆಯಾಗುವುದಿಲ್ಲ. ನಾವೇನಾಗಬೇಕೆಂಬುದು ಮನಸ್ಸಿನ ಇಚ್ಛೆಗೆ ಸಂಬಂಧಿಸಿದ್ದು, ಪಾಲಕರ ಪ್ರೋತ್ಸಾಹ, ಕಠಿಣ ಶ್ರಮದಿಂದ ಐ.ಎ.ಎಸ್‌ ಪರೀಕ್ಷೆ ಪಾಸು ಮಾಡಲು ಸಾಧ್ಯವಾಯಿತು. ಹೆಣ್ಣೆಂಬ ಕೀಳರಿಮೆ ಭಾವನೆ ತೊರೆದು ಶೈಕ್ಷಣಿಕ ಸಾಧನೆ ಮಾಡಿ ಸಮಾಜ ಸೇವೆಗೆ ಸಿದ್ಧರಾಗಿ ಎಂದು ಐ.ಎ.ಎಸ್‌. ಅಧಿಕಾರಿ ಆಕೃತಿ ಸಾಗರ ತಿಳಿಸಿದರು.

ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಎಚ್‌ಕೆಇ ಸಂಸ್ಥೆಯ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತದ ಪ್ರಥಮ ಶಿಕ್ಷಕಿ ಮಾತೋಶ್ರೀ ಸಾವಿತ್ರಿಬಾಯಿ ಫುಲೆ ಸ್ಮಾರಕ ಪ್ರಶಸ್ತಿಯನ್ನು ಶಿಕ್ಷಕರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು.

ಚಿತ್ತಾಪುರ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ವಿಜಯಕುಮಾರ ಸಾಲಿಮನಿ ಉಪನ್ಯಾಸ ನೀಡಿ, ನಿರ್ಗತಿಕ ಬಡ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಲು ಹಲವಾರು ಸಮಸ್ಯೆಗಳ ಸವಾಲುಗಳನ್ನು ಎದುರಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದವರು ಸಾವಿತ್ರಿಬಾಯಿ ಫುಲೆ. ಇಂದು ಸ್ತ್ರೀಯರು ಪುರುಷರಿಗೆ ಸಮಾನವಾಗಿ ಸಾಧನೆಯತ್ತ ಹೆಜ್ಜೆ ಹಾಕುತ್ತಿರುವುದಕ್ಕೆ ಕಾರಣ ಫುಲೆ ದಂಪತಿಗಳು ಹಾಗೂ ಡಾ| ಅಂಬೇಡ್ಕರರ ಕೊಡುಗೆ ಕಾರಣ ಎಂದರು.

ಜಿ.ಪಂ.ಸದಸ್ಯ ಅರುಣಕುಮಾರ ಎಂ.ಪಾಟೀಲ ಮಾತನಾಡಿದರು. ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.
 
ಸೇಡಂ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಮಾ ಎಲ್‌. ಚಿಮ್ಮನಚೋಡಕರ್‌, ಬಿದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗೇಂದ್ರಪ್ಪ ಮಾಡ್ಯಾಳೆ, ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ತೇಗಂಪುರನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀದೇವಿ ಹೂಗಾರ, ಆಜಾದಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿಜಯಲಕ್ಷ್ಮೀ ಗಟಾಟೆ, ಸರಡಗಿ (ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೋಮು ಎಸ್‌.ಕುಂಬಾರ ಹಾಗರಗಾ ಅವರನ್ನು ಸನ್ಮಾನಿಸಲಾಯಿತು. ಡಿಡಿಪಿಐ ಶಾಂತಗೌಡ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಎನ್‌.ಜಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಎಸ್‌.ಎಂ.ಪಟ್ಟಣಕರ್‌, ಶಿವರಾಜ ಎಸ್‌. ಅಂಡಗಿ, ಕೆ.ಗಿರಿಮಲ್ಲ, ಶಿವಾನಂದ ಮಠಪತಿ, ಬಿ.ಎಂ.ಪಾಟೀಲ ಕಲ್ಲೂರ, ಡಾ| ನಾಗರತ್ನಾ ಬಿ.ದೇಶಮಾನ್ಯೆ, ಶ್ರೀಶೈಲ ಧಮ್ಮೂರೆ ಅಣೂರ, ಲಕ್ಷ್ಮೀನಾರಾಯಣ ಚಿಮ್ಮನಚೋಡಕರ್‌, ದೇವೇಂದ್ರಪ್ಪ ಗಣಮುಖೀ, ಈಶ್ವರಗೌಡ ಪಾಟೀಲ, ಸೇವಂತಾ ಪ್ರೇಮಸಿಂಗ್‌, ಜಯಶ್ರೀ
ಚವ್ಹಾಣ, ಪ್ರಕಾಶ, ಡಾ| ಅರುಣಕುಮಾರ ಲಗಶೆಟ್ಟಿ, ಸತೀಶ ಸಜ್ಜನ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.