ಪ್ರಧಾನಿ ಮೋದಿ ಯಾರ ದುಡ್ಡಲ್ಲಿ ವಿದೇಶ ಪ್ರವಾಸ ಮಾಡ್ತಾರೆ?: CM
Team Udayavani, Jan 9, 2018, 11:49 AM IST
ಉಡುಪಿ:ಪ್ರಧಾನಿ ನರೇಂದ್ರ ಮೋದಿ ಅವರು ಯಾರ ದುಡ್ಡಲ್ಲಿ ವಿದೇಶ ಪ್ರವಾಸ ಮಾಡುತ್ತಾರೆ?ಪ್ರಧಾನಿ ಸ್ವಂತ ಹಣದಲ್ಲಿ ವಿಮಾನದಲ್ಲಿ ಓಡಾಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಂಗಳವಾರ ಉಡುಪಿಯ ಉಪ್ಪೂರಿನಲ್ಲಿ ಸಾಧನಾ ಸಮಾವೇಶಕ್ಕೆ ಜನರ ಹಣ ಬಳಕೆ ಮಾಡುತ್ತಿರುವುದಾಗಿ ವಿಪಕ್ಷಗಳು ಆರೋಪಿಸುತ್ತಿವೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣದಲ್ಲಿಯೇ ಕಾರ್ಯಕ್ರಮಗಳು ನಡೆಯುತ್ತದೆ. ಅದು ಕೇಂದ್ರ ಸರ್ಕಾರ ಕೂಡಾ ಮಾಡುತ್ತದೆ ಎಂದರು.
ನಾನಾ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಬೈಂದೂರು, ಉಡುಪಿ, ಕಾಪುಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ಉಪ್ಪೂರಿನಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ಸಿಎಂ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು.
ದೇವೇಗೌಡರದ್ದು ಏನೂ ನಡೆಯಲ್ಲ:
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಆಟ ಏನೂ ನಡೆಯಲ್ಲ. ದೇವೇಗೌಡರನ್ನು ನಾನು ಬಹಳ ವರ್ಷದಿಂದ ನೋಡಿದ್ದೇನೆ. ಗೌಡರ ಜತೆಗಿದ್ದು ನೋಡಿದ್ದೇನೆ, ವಿಪಕ್ಷದಲ್ಲಿದ್ದೂ ನೋಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಏರಲ್ಲ, ಬಿಜೆಪಿ ವರಿಷ್ಠ ಅಮಿತ್ ಶಾಗೆ ಸೋಲಿನ ಭಯ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’