“ಕುಮಾರಸ್ವಾಮಿ ವಿರುದ್ಧ 1 ಕೋ.ರೂ. ಮಾನನಷ್ಟ ಮೊಕದ್ದಮೆ’ 


Team Udayavani, Jan 10, 2018, 11:34 AM IST

10-25.jpg

ಮಂಗಳೂರು: ದೀಪಕ್‌ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರ ಪಾತ್ರ ಇದೆ ಎಂದು ಬೇಜಾವಾಬ್ದಾರಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರ ವಿರುದ್ಧ ಮಂಗಳೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮಂಗಳವಾರ 1 ಕೋ.ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಡಾ| ಭರತ್‌ ಶೆಟ್ಟಿ  ತಿಳಿಸಿದ್ದಾರೆ. 

ದ.ಕ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಕ್‌ ಹತ್ಯೆಯ ತನಿಖೆಯನ್ನು ದಾರಿ ತಪ್ಪಿಸುವ ಹಾಗೂ ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡಿ ಜನರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರ ಹೇಳಿಕೆ ಪರಿಣಾಮ ಬೀರುತ್ತದೆ. ಪೊಲೀಸರಿಗೆ ಗೊತ್ತಿಲ್ಲದ ಹಾಗೂ ಘಟನೆಯ ಬಗ್ಗೆ ಒಂದಿನಿತೂ ಅರಿಯದೆ ಮೈಸೂರಿನಲ್ಲಿ ಕುಳಿತು ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರ ವಿರುದ್ದ ಮಂಗಳೂರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಬಿಜೆಪಿ ನಾಯಕರ ಕೈವಾಡ ಎಂಬಂತೆ ಕುಮಾರಸ್ವಾಮಿ ಅವರ ಹಿಟ್‌ ಆ್ಯಂಡ್‌ ರನ್‌ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಬಿಜೆಪಿ ವತಿಯಿಂದ ಮೊಕದ್ದಮೆ ಹೂಡಲಾಗಿದೆ ಎಂದವರು ಹೇಳಿದರು.

ಝಾಕೀರ್‌ ನಾೖಕ್‌ ಹಾಗೂ ಓವೈಸಿ ಜತೆಗೆ ಪೊಟೋ ಕ್ಲಿಕ್ಕಿಸಿದ ಶಾಸಕ ಮೊದಿನ್‌ ಬಾವಾ ಅವರು ಪ್ರಸ್ತುತ ಹತಾಶರಾಗಿ ಸಹೋದರ ಜೆಡಿಎಸ್‌ನ ಬಿ.ಎಂ.ಫಾರೂಕ್‌ ಅವರ ಮೂಲಕ ಕುಮಾರಸ್ವಾಮಿ ಅವರಲ್ಲಿ ಹೇಳಿಕೆ ನೀಡುತ್ತಿರುವ ಬಗ್ಗೆ ಮಾಹಿತಿ ಇದೆ. ಫಾರೂಕ್‌ ಅವರಿಗೆ ಜೆಡಿಎಸ್‌ನಲ್ಲಿ ಸೀಟೂ ಇಲ್ಲ-ಸೂಟುಕೇಸೂ ಇಲ್ಲ ಎಂಬ ಪರಿಸ್ಥಿತಿಯಲ್ಲಿದ್ದಾರೆ ಎಂದವರು ದೂರಿದರು. 

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಕಾಸ್‌ ಪುತ್ತೂರು, ಅಶೋಕ್‌ ಕೃಷ್ಣಾಪುರ, ಸುಧಾಕರ ಅಡ್ಯಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.