ಪಡೀಲಿನ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ?

Team Udayavani, Jan 14, 2018, 2:26 PM IST

14-Jan-14.jpg

ಪುತ್ತೂರು: ಇಲ್ಲಿನ ಪಡೀಲಿನಲ್ಲಿ  ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು, ಜನರ ಮನಸ್ಥಿತಿ ಎಲ್ಲಿಗೆ ತಲುಪಿದೆ ಎನ್ನುವುದು ಬಹಿರಂಗವಾದಂತಾಗಿದೆ.

ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸ್ವಚ್ಛ ಭಾರತ್‌ ತಂಡ ಶುಚಿಗೊಳಿಸುವ ವೇಳೆ ಕೃಷ್ಣಾ ಎಂಬವರಿಗೆ ರಾಷ್ಟ್ರಧ್ವಜ ಸಿಕ್ಕಿದೆ. ಇದನ್ನು ಜೋಪಾನವಾಗಿ ಮನೆಗೆ ತೆಗೆದುಕೊಂಡು ಹೋಗಿ, ತೆಗೆದಿರಿಸಿದ್ದಾರೆ. ರಾಮಕೃಷ್ಣ ಮಿಶನ್‌ ನೇತೃತ್ವದಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ್‌ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗೆ ಸ್ವಚ್ಛತ ಕಾರ್ಯಕ್ರಮ ನಡೆಯುತ್ತಿದೆ. ಕೃಷ್ಣಾ ಅವರ ತಂಡ ತ್ಯಾಜ್ಯ ಹೆಕ್ಕುವುದು ಮಾತ್ರವಲ್ಲ, ಇದರ ಜತೆಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ರಸ್ತೆ ಬದಿಯಲ್ಲಿ ಕಸ ರಾಶಿ ಬಿದ್ದಿದರೆ, ಅದರ ಫೋಟೋ ತೆಗೆದು ಜಾಲತಾಣಗಳಲ್ಲಿ ಹರಿಯಬಿಡುತ್ತಾರೆ. ಜಾಗೃತಿ ಮೂಡಿಸುವ ಬರಹಗಳು ಇದರ ಜತೆಗಿರುತ್ತವೆ. ಶನಿವಾರ ಬೆಳಗ್ಗೆ ಇದೇ ರೀತಿ ಫೂಟೋ ತೆಗೆದು, ಮನೆಗೆ ಹೋಗಿ ಫೋಟೋ ವೀಕ್ಷಿಸಿದ್ದಾರೆ. ಆ ಸಂದರ್ಭ ಕಸದ ರಾಶಿಯಲ್ಲಿ ರಾಷ್ಟ್ರಧ್ವಜ ಇರುವುದು ಬೆಳಕಿಗೆ ಬಂದಿದೆ. ತತ್‌ಕ್ಷಣ ಪಡೀಲಿನಲ್ಲಿ ರಾಶಿ ಬಿದ್ದಿರುವ ಕಸದ ಹತ್ತಿರ ಬಂದು, ರಾಷ್ಟ್ರಧ್ವಜವನ್ನು ಕೈಗೆತ್ತಿಕೊಂಡಿದ್ದಾರೆ. ಶುಚಿಗೊಳಿಸಿ, ಮನೆಯಲ್ಲಿ ಜೋಪಾನವಾಗಿ ಇಟ್ಟುಕೊಂಡಿದ್ದಾರೆ.

ಭಾರತದ ಸಮಗ್ರತೆಯನ್ನು ಸಾರುವ ತಿರಂಗವನ್ನು ದೇಶದ ಪ್ರತಿಷ್ಠೆಯ ದ್ಯೋತಕ. ತಿರಂಗವನ್ನು ಹಿಡಿದುಕೊಳ್ಳುವ ರೀತಿ, ಧ್ವಜಾರೋಹಣ ಮಾಡುವ ಬಗ್ಗೆ ನಿಯಮವಿದೆ. ಇದನ್ನು ಉಲ್ಲಂಘಿಸುವುದು ಅಪರಾಧ ಎಂದು ಘೋಷಿಸಲಾಗಿದೆ. ಧ್ವಜವನ್ನು ನೆಲಕ್ಕೆ ಮುಖ ಮಾಡಿ ಹಿಡಿದುಕೊಳ್ಳುವುದು ಸರಿಯಲ್ಲ. ಹೀಗಿ ರುವಾಗ ಕಸದ ತೊಟ್ಟಿಯಲ್ಲಿ ಬಿದ್ದು ಸಿಕ್ಕಿರುವುದು ದುರಂತವೇ ಸರಿ.

ದೇಶದ್ರೋಹದ ಕೆಲಸ
ಅದ್ಯಾರು ರಾಷ್ಟ್ರಧ್ವಜವನ್ನು ತಂದು ಬಿಸಾಡಿದ್ದಾರೆ ಗೊತ್ತಿಲ್ಲ. ಆದರೆ ರಾಷ್ಟ್ರಧ್ವಜವನ್ನು ಕಸದ ತೊಟ್ಟಿಯಲ್ಲಿ ಬಿಸಾಡುವುದು ರಾಷ್ಟ್ರದ್ರೋಹದ ಕೆಲಸ. ಇದಕ್ಕೆ ಕಾನೂನು ಪ್ರಕಾರ ಕಠಿನ
ಶಿಕ್ಷೆಯನ್ನುನೀಡಬಹುದು.

ವಿಪರ್ಯಾಸ
ತ್ಯಾಜ್ಯದಷ್ಟೇ ಮನಸ್ಸುಗಳು ಕೊಳಕಾಗಿವೆ ಎನ್ನುವುದಕ್ಕೆ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಬಿಸಾಡಿರುವುದು ಸಾಕ್ಷಿ. ಪಡೀಲಿನ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಸಿಕ್ಕಿರುವುದು ವಿಪರ್ಯಾಸ. ಆದರೆ ಯಾರು ಬಿಸಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಪ್ರದೇಶದಲ್ಲಿ ಕಸ ಹಾಕಬಾರದು ಎಂದು ಬೋರ್ಡ್‌ ಹಾಕಲಾಗಿದೆ. ಆದರೂ ಕಸ ಹಾಕಿದ್ದಾರೆ. ಕಸದ ಜತೆಗೆ ರಾಷ್ಟ್ರಧ್ವಜವನ್ನು ಹಾಕಲಾಗಿದೆ.
– ಕೃಷ್ಣಾ, ನೆಹರೂನಗರ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.