ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ
Team Udayavani, Jan 16, 2018, 6:00 AM IST
ಬೆಂಗಳೂರು: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆಯಾಗಿದ್ದು, ಇದು ಪ್ರಾರಂಭವಷ್ಟೇ,
ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪದ್ಮನಾಭನಗರದಲ್ಲಿ ದೇವೇಗೌಡರ ಸಮ್ಮುಖ ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ ನಂತರ ಸುದ್ದಿಗೋಷ್ಠಿ
ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ ಸಾಕಷ್ಟು ನಾಯಕ
ರಲ್ಲಿದೆ. ಬಳ್ಳಾರಿ, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದಲ್ಲಿ ಹಲವು ನಾಯಕರು ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ
ಬದಲಾವಣೆ ತರಲು ಬಯಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಜೆಡಿಎಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆಯೇ ಎಂಬ ಪ್ರಶ್ನೆಗೆ, ಅವರು ನನ್ನ ಜತೆ ಮಾತನಾಡಿಲ್ಲ ಎಂದು ಉತ್ತರಿಸಿದರು.
ರಾಜ್ಯದ ಜನತೆ ಕಾಂಗ್ರೆಸ್ ಹಾಗೂ ಬಿಜೆಪಿ ದುರಾಡಳಿತ ನೋಡಿ ಬೇಸರಗೊಂಡಿದ್ದಾರೆ. ಹಿಂದುತ್ವ, ಮೃದು ಹಿಂದುತ್ವ
ಇವೆಲ್ಲವೂ ನಡೆಯುವುದಿಲ್ಲ. ಕರ್ನಾಟಕದ ಅಭಿವೃದ್ಧಿ ನಮ್ಮ ಮಂತ ಎಂದು ತಿಳಿಸಿದರು. ಆನಂದ್ ಅಸ್ನೋಟಿಕರ್ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಆತಂಕ ತಂದಿದೆ. ನನ್ನ ಜಿಲ್ಲೆಯ ಅಭಿವೃದ್ಧಿಗಾಗಿ ನಾನು ಜೆಡಿಎಸ್ ಸೇರುತ್ತಿದ್ದೇನೆ ಎಂದು ಹೇಳಿದರು. ಶಾಸಕ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯರಾದ ರಮೇಶ್ಬಾಬು,ಕಾಂತರಾಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ