ದರ್ಶನ್‌ 51ನೇ ಚಿತ್ರಕ್ಕೆ ಚಾಲನೆ


Team Udayavani, Jan 16, 2018, 10:55 AM IST

Darshan-New-Fi.jpg

“ನಾನು ಕಂಡ ಹಾಗೆ ಮೀಡಿಯಾದಲ್ಲಿ, ಸಾಮಾಜಿಕ ತಾಣಗಳಲ್ಲಿ ನನ್ನ 51, 52. 53ನೇ ಚಿತ್ರಗಳ ಬಗ್ಗೆ ಅನವಶ್ಯಕ ಚರ್ಚೆಗಳು ಮತ್ತು ಗಾಳಿಸುದ್ದಿಗಳು ಸದ್ಯಕ್ಕೆ ಬೇಡ. ಸಮಯ ಬಂದಾಗ ಅದರ ಸಂಪೂರ್ಣ ವಿವರಗಳನ್ನು ಎಲ್ಲರಿಗೂ ತಿಳಿಸುತ್ತೇನೆ …’ ಹಾಗಂತ ಕೆಲವು ತಿಂಗಳುಗಳ ಹಿಂದೆ ದರ್ಶನ್‌ ಟ್ವೀಟ್‌ ಮಾಡಿದ್ದರು. ಅದಕ್ಕೆ ಕಾರಣವೂ ಇತ್ತು. ದರ್ಶನ್‌ ಅವರ ಮುಂದಿನ ಚಿತ್ರಗಳ ಬಗ್ಗೆ ದಿನಕ್ಕೊಂದು ಸುದ್ದಿ ಕೇಳಿ ಬರುತಿತ್ತು.

ಅದಕ್ಕೊಂದು ಫ‌ುಲ್‌ಸ್ಟಾಪ್‌ ಹಾಕುವುದಕ್ಕೆಂದೇ ದರ್ಶನ್‌ ಹಾಗೆ ಹೇಳಿದ್ದರು. ಈಗ ದರ್ಶನ್‌ ಅವರ ಮುಂದಿನ ಚಿತ್ರ ಯಾವುದು ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಅಷ್ಟೇ ಅಲ್ಲ, ದರ್ಶನ್‌ ಅವರ 51ನೇ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. ಹೌದು, ದರ್ಶನ್‌ ಅವರ 51ನೇ ಚಿತ್ರವು ಸಂಕ್ರಾಂತಿ ಹಬ್ಬದಂದು ಪ್ರಾರಂಭವಾಗಿದೆ.

ಸೋಮವಾರ ಚಂದ್ರ ಲೇಔಟ್‌ನ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ದಿನಕರ್‌ ಕ್ಲಾಪ್‌ ಮಾಡಿದ್ದಾರೆ. ಈ ಚಿತ್ರವನ್ನು ಬಿ. ಸುರೇಶ ಮತ್ತು ಅವರ ಪತ್ನಿ ಶೈಲಜಾ ನಾಗ್‌ ಅವರು ಮೀಡಿಯಾ ಹೌಡ್‌ ಸ್ಟುಡಿಯೋ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದಾರೆ. “ವಿಷ್ಣುವರ್ಧನ’, “ಚಾರುಲತಾ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಪಿ. ಕುಮಾರ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಅದಲ್ಲದೆ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಸಂಭಾಷಣೆಕಾರ “ಬಹದ್ದೂರ್‌’ ಚೇತನ್‌, ಛಾಯಾಗ್ರಾಹಕ ಶ್ರೀಷ ಕೂದುವಳ್ಳಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ಹೆಸರಿಡದ ಈ ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರದ ಚಿತ್ರೀಕರಣ ಪ್ರಾರಂಭವಾಗುವುದೇನಿದ್ದರೂ ಫೆಭ್ರವರಿ ಮೊದಲ ವಾರದಲ್ಲೇ. ಚಿತ್ರದಲ್ಲಿ ದರ್ಶನ್‌ ಮತ್ತು ರಶ್ಮಿಕಾ ಜೊತೆಗೆ ರವಿಶಂಕರ್‌, ದೇವರಾಜ್‌ ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.