ಒಗ್ಗಟ್ಟಾಗಿ ಶ್ರಮಿಸಿದಾಗ ಸಂಘ-ಸಂಸ್ಥೆಗಳ ಪ್ರಗತಿ ಸಾಧ್ಯ


Team Udayavani, Jan 16, 2018, 5:29 PM IST

yad-5.jpg

ಯಾದಗಿರಿ: ಸಂಘ ಸಂಸ್ಥೆಗಳಲ್ಲಿ ಅಸಮಾಧಾನಗಳಿಗೆ ಆಸ್ಪದ ನೀಡದೆ ಎಲ್ಲರೂ ಒಂದೇ ಭಾವನೆಯಿಂದ ಒಗ್ಗಟ್ಟಾಗಿ ಶ್ರಮಿಸಿದಾಗ ಮಾತ್ರ ಸಮಾಜದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಲು ಸಾಧ್ಯ ಎಂದು ವೀರಶೈವ ಸಮಾಜದ
ನಗರ ಘಟಕದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನೂತನ ವರ್ಷದ ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್‌ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂಘ-ಸಂಸ್ಥೆಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಬೇಕು. ಸಂಸ್ಥೆ ಅಭಿವೃದ್ಧಿ ಜೊತೆಗೆ ಸಮಾಜದ ಪ್ರಗತಿಗೆ ಅನೇಕ ಕಾರ್ಯಕ್ರಮ ಆಯೋಜಿಸಬೇಕು ಎಂದರು. 

ಸಂಘದ ಪದಾಧಿಕಾರಿಗಳಾದ ಸೂಗಪ್ಪ ಪಾಟೀಲ, ಗುರುನಾಥರಡ್ಡಿ ಹತ್ತಿಕುಣಿ ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಎಂದು ಹೇಳಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು. 

ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‌ ಭವನಕ್ಕೆ ವಿಧಾನ ಪರಿಷತ್‌ ಸದಸ್ಯ ಶರಣಪ್ಪ ಮಟ್ಟೂರ ಅನುದಾನದಲ್ಲಿ 5 ಲಕ್ಷ ರೂ. ಅನುದಾನ ಒದಗಿಸಲು ಶ್ರಮಿಸಿದ ಅಶೋಕ ಕೆಂಭಾವಿ ಅವರನ್ನು ಸನ್ಮಾನಿಸಲಾಯಿತು. 

ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಶಶಿಕಾಂತ ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಬಸವಂತರಾಯಗೌಡ ಮಾಲಿ ಪಾಟೀಲ, ಚೆನ್ನಪ್ಪ ಸಾಹು, ದೇವಿಂದ್ರ ಯಡ್ಡಳ್ಳಿ, ನೀಲಕಂಠ ಶೀಲವಂತ, ನಾಗೇಂದ್ರ ಜಾಜಿ, ರಾಜಶೇಖರ ಕೊಳ್ಳಿ, ಬಂದಪ್ಪ ಐರಡ್ಡಿ, ಡಾ| ಅಯ್ಯಣ್ಣ ಗೌಡ, ವಿಜಯಕುಮಾರ, ಪ್ರಭು ಗುಣಾದಿ, ಮಲ್ಲಣ್ಣಗೌಡ, ನಾಗರಾಜ, ನಾಗಪ್ಪ ಇದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.