ಎಲೆಕ್ಟ್ರಿಕ್‌ ವಾಹನಗಳ ನೀತಿರೂಪಿಸಲು ಸಿದ್ಧತೆ: ರೇವಣ್ಣ

Team Udayavani, Jan 18, 2018, 12:24 PM IST

blore-2.jpg

ಬೆಂಗಳೂರು: “ಭವಿಷ್ಯದಲ್ಲಿ ಭಾರತವು ಬ್ಯಾಟರಿ ಚಾಲಿತ ವಾಹನಗಳ ತಯಾರಿಕಾ ಕೇಂದ್ರವಾಗಲಿದ್ದು, ಇದಕ್ಕೆ ಪೂರಕವಾದ ನೀತಿ ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ’ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ತಿಳಿಸಿದರು.

ನಗರದ ಹೋಟೆಲ್‌ ಲಿ ಮೆರಿಡಿಯನ್‌ನಲ್ಲಿ ಬುಧವಾರ ಅಸೋಚಾಮ್‌ (ಅಸೋಸಿಯೇಟೆಡ್‌ ಚೇಂಬರ್‌ ಆಫ್ ಕಾಮರ್ಸ್‌ ಆಂಡ್‌ ಇಂಡಸ್ಟ್ರಿ ಆಫ್ ಇಂಡಿಯಾ) ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್‌ ವಾಹನಗಳ ಕುರಿತ “ಎಲೆಕ್ಟ್ರಿಕ್‌ ಮೊಬಿಲಿಟಿ’ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ಥಳೀಯವಾಗಿಯೇ ಎಲೆಕ್ಟ್ರಿಕ್‌ ವಾಹನಗಳ ತಯಾರಿಕೆ, ಬ್ಯಾಟರಿಗಳ ಕೊರತೆ ಆಗದಂತೆ ದಾಸ್ತಾನು ಮಾಡುವ ವಿಧಾನಗಳ ಸುಧಾರಣೆ, ಬ್ಯಾಟರಿಗಳಿಗಾಗಿ ಅವಲಂಬನೆಯಾಗದೆ ದೇಶೀಯವಾಗಿಯೇ ನಿರ್ಮಿಸುವುದು ಸೇರಿದಂತೆ ಹಲವು ಅಂಶಗಳ ಬಗ್ಗೆ ತಯಾರಕರೊಂದಿಗೆ ಒಂದು Óುತ್ತಿನ ಮಾತುಕತೆ ಮಾಡಲಾಗಿದೆ ಎಂದು ಹೇಳಿದರು. 

ಈಗಾಗಲೇ “ಕರ್ನಾಟಕ ಎಲೆಕ್ಟ್ರಿಕ್‌ ವೇಹಿಕಲ್‌ ಆಂಡ್‌  ನರ್ಜಿ ಸ್ಟೋರೇಜ್‌ ಪಾಲಿಸಿ-2017′ ರೂಪಿಸಲಾಗಿದ್ದು, ಇದರಡಿ ಎಲೆಕ್ಟ್ರಿಕ್‌ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಲಾಗಿದೆ. ಇಂತಹ ಹಲವು ಕ್ರಮಗಳಿಂದ ಮುಂದಿನ ದಿನಗಳಲ್ಲಿ
ಬ್ಯಾಟರಿ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಲಿದೆ. ಇದರ ಬೆನ್ನಲ್ಲೇ ವಿದ್ಯುತ್‌ ಜಾಲವನ್ನೂ ವಿಸ್ತರಿಸುವ ಅವಶ್ಯಕತೆ ಇದೆ ಎಂದರು.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿ, ಮೇಕ್‌ ಇನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ಟಾರ್ಟ್‌ ಅಪ್‌ ಇಂಡಿಯಾ ಸೇರಿದಂತೆ ಕೇಂದ್ರ ಸರ್ಕಾರದ ಯಾವುದೇ ಪ್ರಮುಖ ಯೋಜನೆಗಳನ್ನು ರಾಜ್ಯ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದೆ. ಎಲೆಕ್ಟ್ರಿಕ್‌ ವಾಹನಗಳ ವಿಚಾರದಲ್ಲೂ ರಾಜ್ಯ ಹಿಂದೆಬೀಳುವುದಿಲ್ಲ ಎಂದು ಭರವಸೆ ನೀಡಿದರು. ಎಸ್‌. ಸಂಪತ್‌ರಾಮನ್‌, ಮಹೇಶ್‌ ಬಾಬು ಉಪಸ್ಥಿತರಿದ್ದರು. 

2020ಕ್ಕೆ  60 ಲಕ್ಷ ಇ-ವಾಹನಗಳು?
 2020ರ ವೇಳೆಗೆ ದೇಶದಲ್ಲಿ 60 ಲಕ್ಷ ಎಲೆಕ್ಟ್ರಿಕ್‌ ವಾಹನಗಳು ರಸ್ತೆಗಿಳಿಯಲಿದ್ದು, 2022ರ ವೇಳೆಗೆ ದೇಶದ ಅಟೋಮೋಟಿವ್‌ ಉದ್ಯಮದ ಒಟ್ಟಾರೆ ವೃದ್ಧಿ ದರ (ಜಿಡಿಪಿ) ಶೇ. 15ರಿಂದ ಶೇ. 25ಕ್ಕೆ ಏರಿಕೆ ಆಗಲಿದೆ. ಕೇಂದ್ರ ಸರ್ಕಾರವು 2030ರ ವೇಳೆಗೆ ಬಹುತೇಕ ಎಲ್ಲ ವಾಹನಗಳನ್ನು ಬ್ಯಾಟರಿಚಾಲಿತವಾಗಿ ಮಾರ್ಪಡಿ ಸುವ ಗುರಿ ಹೊಂದಿದೆ. ಇದರಿಂದ ಒಂದು ಗಿಗಾ ಟನ್‌ ಹೊಗೆಯನ್ನು ತಗ್ಗಿಸುವುದರ ಜತೆಗೆ 60 ಬಿಲಿಯನ್‌ ಅಮೆರಿಕ ಡಾಲರ್‌ನಷ್ಟು ಇಂಧನ ಉಳಿತಾಯ ಆಗಲಿದೆ ಎಂದು ಅಸೋಚಾಮ್‌ನ ಅಟೋ ಮೋಟಿವ್‌ ಉದ್ಯಮದ ತಜ್ಞರು ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.