ಮೂಡಬಿದಿರೆ: 50ನೇ ಉಚಿತ ವೈದ್ಯಕೀಯ ತಪಾಸಣ ಶಿಬಿರ

Team Udayavani, Jan 22, 2018, 2:45 PM IST

22-Jan-15.jpg

ಮೂಡಬಿದಿರೆ: ವಿಧಾನ ಪರಿಷತ್‌ ಸರಕಾರಿ ಮುಖ್ಯಸಚೇತಕ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಅಲಂಗಾರು ಲಯನ್ಸ್‌ ಕ್ಲಬ್‌, ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಂಗಳೂರು ಎ.ಜೆ. ಆಸ್ಪತ್ರೆಯ ಗೈನಕಾಲಜಿ ಮತ್ತು ಇತರ ವಿಭಾಗಗಳ ಸಹಕಾರದಲ್ಲಿ ಮೂಡಬಿದಿರೆ ಮೆನೇಜಸ್‌ ಕಾಂಪ್ಲೆಕ್ಸ್‌ನಲ್ಲಿರುವ ಜನಸ್ಪಂದನ ಕಚೇರಿಯ ಸಭಾಂಗಣದಲ್ಲಿ ರವಿವಾರ ಏರ್ಪಡಿಸಲಾಗಿದ್ದ 50ನೇ ವೈದ್ಯಕೀಯ ತಪಾಸಣ ಉಚಿತ ಶಿಬಿರವನ್ನು ಉದ್ಯಮಿ ಕೆ. ಶ್ರೀಪತಿ ಭಟ್‌ ಉದ್ಘಾಟಿಸಿದರು.

ಐವನ್‌ ಡಿ’ಸೋಜಾ, ಎ.ಜೆ. ಆಸ್ಪತ್ರೆಯ ಗೈನಕಾಲಜಿ ವಿಭಾಗ ಮುಖ್ಯಸ್ಥೆ ಡಾ| ಕವಿತಾ ಡಿ’ಸೋಜಾ, ಡಾ| ಸುನಂದಾ ಪ್ರಭು, ಅಲಂಗಾರು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆರಾಲ್ಡ್‌ ಲೋಬೋ, ಕಾರ್ಯದರ್ಶಿ ಸುಜಾತಾ ರಮೇಶ್‌, ಪಡುಮಾರ್ನಾಡು ಗ್ರಾ.ಪಂ. ಅಧ್ಯಕ್ಷ ಶ್ರೀನಾಥ್‌ ಸುವರ್ಣ, ಮೂಡಬಿದಿರೆ ಜಮೀಯತುಲ್‌ ಫಲಾಃ ಅಧ್ಯಕ್ಷ ಸಲೀಂ ಹಂಡೇಲು, ಬಜಪೆ ಗ್ರಾ.ಪಂ. ಸದಸ್ಯ ಸಿರಾಜ್‌, ಕಾಂಗ್ರೆಸ್‌ ಪಕ್ಷ ಪ್ರಮುಖರಾದ ಕೆಪಿಸಿಸಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಗುರುರಾಜ್‌ ಎಸ್‌., ಅಕ್ರಮ ಸಕ್ರಮ ಸಮಿತಿಯ ಸುಂದರ ಪೂಜಾರಿ, ವಕೀಲರಾದ ಹರೀಶ್‌ ಪಿ., ಪ್ರಕಾಶ್‌ ಪಿ., ಜಿಲ್ಲಾ ಯುವ ಇಂಟಕ್‌ ಅಧ್ಯಕ್ಷ ಪುನೀತ್‌ ಶೆಟ್ಟಿ, ತೆಂಕ ಎಕ್ಕಾರು ಗ್ರಾ.ಪಂ. ಸದಸ್ಯೆ ನಫಿಸಾ ಖಾನ್‌, ಜಿ.ಪಂ. ಮಾಜಿ ಸದಸ್ಯ ಫೆಲಿಕ್ಸ್‌ ಕರ್ಡೋಝಾ, ಜೆರಾಲ್ಡ್‌ ಲೋಬೋ, ಕಲ್ಲಮುಂಡ್ಕೂರು ಗ್ರಾ.ಪಂ. ಸದಸ್ಯ ಲಾಝರಸ್‌ ಡಿ’ಕೋಸ್ಟಾ, ಮೂಡಬಿದಿರೆ ಪುರಸಭಾ ನಾಮನಿರ್ದೇಶಿತ ಸದಸ್ಯ ಆಲ್ವಿನ್‌ ಮೆನೇಜಸ್‌ ಮೊದಲಾದವರಿದ್ದರು. 

ಡಾ| ಕವಿತಾ ಡಿ’ಸೋಜಾ ಮಾತನಾಡಿ, ಸೂಕ್ತವಾಗಿ ತಪಾಸಣೆ ಮಾಡಿಸಿಕೊಂಡು, ಅಗತ್ಯವಿದ್ದಲ್ಲಿ ಔಷಧ ಸೇವನೆ, ಶಸ್ತ್ರ
ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಜನರು ಆರೋಗ್ಯಕರ ಜೀವನವನ್ನು ನಡೆಸಲು ಕಾಳಜಿ ವಹಿಸಬೇಕು ಎಂದು ಹೇಳಿದರು.

ವಿಶೇಷವಾಗಿ ಮಹಿಳೆಯರ ಕ್ಯಾನ್ಸರ್‌ ಬಗ್ಗೆ ಅವರು ವಿವರಣೆ ನೀಡಿದರು. ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸುವ ದೃಕ್‌ಶ್ರವಣ ಕಾರ್ಯಕ್ರಮ ಸಂಯೋಜಿಸಲಾಗಿತ್ತು. ಐವನ್‌ ಡಿ’ ಸೋಜಾ ಅವರು ಇದುವರೆಗಿನ ಶಿಬಿರಗಳ ವಿವರ ನೀಡಿದರು. ಇದುವರೆಗಿನ 49 ಉಚಿತ ವೈದ್ಯಕೀಯ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲೇ ನಡೆಸಲಾಗಿದ್ದು 8,186 ಮಂದಿ ಫಲಾನುಭವಿಗಳಾಗಿದ್ದಾರೆ. 1,000ಕ್ಕೂ ಅಧಿಕ ಕೆಎಂಸಿ ಹೆಲ್ತ್‌ ಕಾರ್ಡ್‌ ಮಾಡಿಸಲಾಗಿದೆ. 1,500 ಮಂದಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗಿದೆ. 186 ಮಂದಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಹಿಳೆಯರಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ ತಪಾಸಣೆ, ನಡೆಸಲಾಗಿದೆ. ಮೂಡಬಿದಿರೆಯಲ್ಲಿ ಇದೇ ಮೊದಲಾಗಿ ಉಚಿತ ಶಿಬಿರ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ರಾಜೇಶ್‌ ಕಡಲಕೆರೆ ನಿರೂಪಿಸಿದರು.

455 ಮಂದಿ ಭಾಗಿ
50ನೇ ಶಿಬಿರದಲ್ಲಿ 455 ಮಂದಿ ಪಾಲ್ಗೊಂಡಿದ್ದು ವಿವಿಧ ವಿಭಾಗಗಳಲ್ಲಿ 70 ಮಂದಿಯನ್ನು ಹೆಚ್ಚಿನ ತಪಾಸಣೆ ಮತ್ತು ಉಚಿತ ಚಿಕಿತ್ಸೆಗಾಗಿ ಜ. 24ರಂದು ಬೆಳಗ್ಗೆ 9.30ಕ್ಕೆ ಮೂಡಬಿದಿರೆ ಜನಸ್ಪಂದನ ಕಚೇರಿಯಿಂದ ಮಂಗಳೂರು ಎಜೆ
ಆಸ್ಪತ್ರೆಗೆ ಕರೆದೊಯ್ಯಲಾಗುವುದು . 50 ಶಿಬಿರಗಳಲ್ಲಿ ಒಟ್ಟು 8,661 ಮಂದಿ ಪಾಲ್ಗೊಂಡಂತಾಗಿದೆ ಎಂದು ಶಿಬಿರಾಂತ್ಯದಲ್ಲಿ ಪ್ರಕಟಿಸಲಾಯಿತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.