ಪಾಕ್‌ ಗುಂಡಿನ ದಾಳಿ: ಸಾವು, ಬದುಕಿನ ಗಡಿರೇಖೆ

Team Udayavani, Jan 23, 2018, 6:55 AM IST

shell.jpg

ಆರ್‌ಎಸ್‌ ಪುರ (ಜಮ್ಮು): ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿರುವ ಗಡಿಭಾಗದ ಗ್ರಾಮಸ್ಥರು, ಸರಕಾರ ತಮಗೆ ನೀಡಿರುವ ಸುರಕ್ಷಿತ ನೆಲೆ ಹಾಗೂ ಕೃಷಿ ಭೂಮಿಯ ಆಶ್ವಾಸನೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. 

ಪಾಕ್‌ ಪಡೆಗಳ ನಿರಂತರ ಅಪ್ರಚೋದಿತ ದಾಳಿಗಳಿಗೆ ಐವರು ಸೇನಾ ಸಿಬ್ಬಂದಿ ಸಹಿತ 12 ನಾಗರಿಕರು ಸಾವನ್ನಪ್ಪಿದ್ದು 50 ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಜಮ್ಮು, ಕಥುವಾ ಹಾಗೂ ಸಾಂಬಾ ವಲಯಗಳ ಐದು ಜಿಲ್ಲೆಗಳ ವ್ಯಾಪ್ತಿಗೆ ಬರುವ ಅಂತಾರಾಷ್ಟ್ರೀಯ ಗಡಿ (ಐಬಿ) ಹಾಗೂ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಹಳ್ಳಿಗರನ್ನು ಸರಕಾರ, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿ, ಸದ್ಯಕ್ಕೆ ಬೆಘವಾಡ ಚೋಗಾ ಪ್ರಾಂತ್ಯದಲ್ಲಿರುವ ಭಾರತೀಯ ತರಬೇತಿ ಸಂಸ್ಥೆಯಲ್ಲಿ (ಐಟಿಐ) ವಾಸ್ತವ್ಯ ಕಲ್ಪಿಸಿದೆ.  

ಕಳೆದ ತಿಂಗಳಷ್ಟೇ, ಕೇಂದ್ರ ಸರಕಾರ, ಭಾರತ- ಪಾಕಿಸ್ಥಾನ ಗಡಿಭಾಗದ ಹಳ್ಳಿಗರಿಗೆ ಭೂಮಿಯಡಿಯಲ್ಲಿ 415.73 ಕೋಟಿ ರೂ. ವೆಚ್ಚದಲ್ಲಿ 14,460 ಬಂಕರ್‌ ನಿರ್ಮಿಸುವುದಾಗಿ ಹೇಳಿತ್ತು. ಇದಲ್ಲದೆ, 2015ರ ಕಣಿವೆ ರಾಜ್ಯದ ಚುನಾವಣೆ ಪ್ರಚಾರ ವೇಳೆ 1361.25 ಚದರಡಿ ಭೂಮಿಯನ್ನು ಸ್ಥಳಾಂತರಗೊಂಡವರಿಗೆ ಕೃಷಿ ಚಟುವಟಿಕೆಗಾಗಿ ನೀಡಲಾಗುವುದು ಎಂದು ವಾಗ್ಧಾನ ನೀಡಿತ್ತು. ಈ ಎರಡೂ ವಾಗ್ಧಾನಗಳು ಇನ್ನೂ ಜಾರಿಯಾಗಿಲ್ಲ ಎಂದು ಅಳಲು ತೋಡಿ ಕೊಂಡಿ ರುವ ನಿರಾಶ್ರಿತರು, ಶೀಘ್ರವೇ ತಮ್ಮ ಸುರ ಕ್ಷತೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

ಪಾಕ್‌ನತ್ತ ಚಿಮ್ಮಿದ 9 ಸಾವಿರ ಶೆಲ್‌
ಕಳೆದ  4 ದಿನಗಳಲ್ಲಿ ಪಾಕ್‌ನತ್ತ ಚಿಮ್ಮಿದ್ದು ಬರೋಬ್ಬರಿ 9 ಸಾವಿರ ಶೆಲ್‌ಗ‌ಳು. ಹೀಗಂತ ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಾಕ್‌ನ ಅಪ್ರಚೋದಿತ ದಾಳಿಗೆ ಪ್ರತ್ಯುತ್ತರವಾಗಿ 9 ಸಾವಿರ ಶೆಲ್‌ಗ‌ಳನ್ನು ಸಿಡಿಸಲಾಗಿದೆ. ಇದರಿಂದಾಗಿ ಪಾಕಿಸ್ಥಾನಿ ರೇಂಜರ್‌ಗಳ ತುರ್ತು ತೈಲ ಶೇಖರಣಾ ಪ್ರದೇಶಗಳು ಧ್ವಂಸವಾಗಿವೆ. ಒಟ್ಟಿನಲ್ಲಿ 190 ಕಿ.ಮೀ.ನ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪ್ರಕ್ಷುಬ್ಧ ವಾತಾ ವರಣ ನಿರ್ಮಾಣವಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪಾಕಿಸ್ಥಾನ ಸೇನೆ, ರವಿವಾರ ರಾತ್ರಿಯಿಡೀ ಶೆಲ್‌ ದಾಳಿ ನಡೆಸಿದ್ದು, ಒಬ್ಬ ನಾಗರಿಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಇದರಿಂದಾಗಿ, ಗುರುವಾರದಿಂದೀಚೆಗೆ ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಎಂಥ ಸ್ಥಿತಿ ಬಂದರೂ ತಲೆಬಾಗುವುದಿಲ್ಲ
ಪಾಕ್‌ ದಾಳಿ ಹಿನ್ನೆಲೆಯಲ್ಲಿ  ಸೋಮವಾರ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, “ಎಂಥ ಪ್ರತಿಕೂಲ ಪರಿಸ್ಥಿತಿ ಎದುರಾದರೂ, ದೇಶವು ತಲೆತಗ್ಗಿಸಲು ನಮ್ಮ ಸರಕಾರ ಬಿಡುವುದಿಲ್ಲ’ ಎಂದಿದ್ದಾರೆ. ಭಾರತ ಈಗ ದುರ್ಬಲ ರಾಷ್ಟ್ರವಲ್ಲ. ನಾವು ಪ್ರಬಲವಾಗಿ ಬೆಳೆದಿದ್ದು, ಜಗತ್ತಿನ ಕಣ್ಣಲ್ಲಿ ಭಾರತದ ವರ್ಚಸ್ಸು ಬದಲಾಗಿದೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.