ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಸಿಎಂ ಸಮಾಲೋಚನೆ

Team Udayavani, Jan 24, 2018, 12:55 PM IST

m3-chamundi.jpg

ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಗೆಲುವಿಗೆ ರಣತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಸ್ಥಳೀಯ ಮುಖಂಡರ ಜತೆಗೆ ಸಮಾಲೋಚನೆ ನಡೆಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದ ಅವರು ಚಾಮುಂಡೇಶ್ವರಿ ಕ್ಷೇತ್ರದ ಡಿ.ಸಾಲುಂಡಿ ಗ್ರಾಮದಲ್ಲಿ ಶ್ರೀ ಮುರುಡ ಬಸವೇಶ್ವರ ಸ್ವಾಮಿ ಓಕಳಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ನನಗೆ ರಾಜಕೀಯವಾಗಿ ಜನ್ಮ ನೀಡಿದ ಹಾಗೂ ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜಕೀಯವಾಗಿ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಕಡೇಯ ಚುನಾವಣೆ ಎದುರಿಸುತ್ತಿದ್ದು, ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ನಂತರ ನಗರದ ಜೆ.ಪಿ. ಪ್ಯಾಲೇಸ್‌ನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಲಹೆ ನೀಡಿ, ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಸಂಸದ ಆರ್‌.ಧ್ರುವನಾರಾಯಣ, ಮಾಜಿ ಶಾಸಕ ಸತ್ಯನಾರಾಯಣ, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಜೆಡಿಎಸ್‌ಗೂ ಪ್ರತಿಷ್ಠೆ: ಸಭೆ ನಡೆಸಿ ತಿರುಗೇಟು 
ಇತ್ತ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸಹ ನಗರದ ಖಾಸಗಿ ಹೋಟೆಲ್‌ನಲ್ಲಿ ಕ್ಷೇತ್ರದ ಕುರುಬ ಸಮಾಜದ ಮುಖಂಡರ ಸಭೆ ನಡೆಸುವ ಮೂಲಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಕುರುಬ ಸಮುದಾಯದ ಮುಖಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಡೆಗಣಿಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಕ್ಷೇತ್ರದ ಜನರನ್ನೂ ಸಂಪೂರ್ಣವಾಗಿ ಮರೆತಿದ್ದಾರೆ. ಹೀಗಾಗಿ ಈ ಬಾರಿ ಅವರಿಗೆ ತಕ್ಕ ಪಾಠಕಲಿಸಬೇಕೆಂದು ಮನವಿ ಮಾಡಿದರು.

ಮುಖಂಡರಾದ ಬೆಳವಾಡಿ ಶಿವಮೂರ್ತಿ, ಕೋಟೆಹುಂಡಿ ಮಹದೇವು, ಹಿನಕಲ್‌ ರಾಜಣ್ಣ, ಪ್ರೇಮ, ಚಿಕ್ಕತಾಯಮ್ಮ ಸೇರಿದಂತೆ ನೂರಾರು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.