ಮಹಾದಾಯಿ : ರಾಜ್ಯ ಬಂದ್‌ ಆಂಶಿಕ


Team Udayavani, Jan 26, 2018, 6:35 AM IST

Bandh-25-1.jpg

ಬೆಂಗಳೂರು: ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ ನಡೆದ ಈ ವರ್ಷದ ಮೊದಲ ಬಂದ್‌ಗೆ ರಾಜ್ಯದಲ್ಲಿ ಆಂಶಿಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಭಾಗದ ಜನರ ಬಹುವರ್ಷಗಳ ಬೇಡಿಕೆಯಾದ ಮಹಾ ದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನೀಡಿದ ಬಂದ್‌ ಕರೆಗೆ ಕರಾವಳಿ, ಮಧ್ಯ ಕರ್ನಾಟಕ, ಮಲೆನಾಡು ಭಾಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು, ಹುಬ್ಬಳ್ಳಿ  ಸಹಿತ ಕೆಲವು ಕಡೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಇತ್ತು.

ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಬಂದ್‌ ರಾಜ್ಯಾದ್ಯಂತ ಬಹುತೇಕ ಶಾಂತಿಯುತವಾಗಿತ್ತು. ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಗದಗ, ಹಾವೇರಿಯಲ್ಲಿ ಬಂದ್‌ ಯಶಸ್ವಿಯಾಗಿದ್ದರೆ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ ಬಳ್ಳಾರಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಿಜಾಪುರ, ಬೀದರ್‌, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಪ್ಪಳದಲ್ಲಿ ಬಂದ್‌ ನೀರಸವಾಗಿತ್ತು. ಬಂದ್‌ ಸಂದರ್ಭದಲ್ಲೇ  ಮೈಸೂರಿನಲ್ಲಿ ನಡೆದ ಪರಿವರ್ತನ ಯಾತ್ರೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭರ್ಜರಿ ಭಾಷಣ ಮಾಡಿ ಹೋಗಿದ್ದಾರೆ. ಆದರೆ, ಮಹಾದಾಯಿ ಬಗ್ಗೆ ಚಕಾರ ಎತ್ತಲಿಲ್ಲ.


ಕನ್ನಡಪರ ಸಂಘಟನೆಗಳು ರೈಲು ಹಾಗೂ ರಸ್ತೆ ತಡೆ, ಧರಣಿ ಮೂಲಕ ತಮ್ಮ ಆಕ್ರೋಶ ಹೊರ ಹಾಕಿವೆ. ಸಾವಿರಾರು ಕಾರ್ಯಕರ್ತರು ಬೃಹತ್‌ ಮೆರವಣಿಗೆ ನಡೆಸಿ ಮಹಾದಾಯಿ ವಿಚಾರದಲ್ಲಿ ತತ್‌ಕ್ಷಣ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು. ಚಲನಚಿತ್ರ ಪ್ರದರ್ಶನ, ಚಿತ್ರೀಕರಣ ಸಹಿತ ಇಡೀ ಚಿತ್ರೋದ್ಯಮ ಸ್ಥಗಿತ ಗೊಂಡಿತ್ತು. ಮುನ್ನೆಚ್ಚರಿಕೆಯಾಗಿ ಬಹುತೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯದ ಕಾರಣ ಕೆಲವೆಡೆ ಜನಜೀವನ ಅಸ್ತವ್ಯಸ್ತ ಗೊಂಡಿತ್ತು¤.  ಸಂಜೆ ಸಂಚಾರ ಪುನರಾರಂಭಗೊಂಡು ಎಲ್ಲೆಡೆ ಜನಜೀವನ ಸಹಜ ಸ್ಥಿತಿಗೆ ಮರಳಿತು.

ಏಳನೇ ಬಂದ್‌: ಮಹಾದಾಯಿ ವಿಚಾರದಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಏಳನೇ ಬಂದ್‌ ಇದು.  ಈ ಹಿಂದೆ ಆರು ಬಾರಿ ಕರ್ನಾಟಕ ಬಂದ್‌ ಆಗಿದೆ. ಉಳಿದಂತೆ ಹುಬ್ಬಳ್ಳಿ-ಧಾರವಾಡ ಸಹಿತ ಆ ಭಾಗದಲ್ಲಿ ಜಿಲ್ಲಾ ಬಂದ್‌ಗಳು ಸಾಕಷ್ಟು ಬಾರಿ ಆಗಿವೆ.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.