ಚಿಂತಾಮಣಿಗೆ ಹಾಲಿ, ಮಾಜಿ ಶಾಸಕರ ಕೊಡುಗೆ ಏನು?

Team Udayavani, Feb 1, 2018, 3:42 PM IST

20_18.jpg

ಚಿಂತಾಮಣಿ: ತಾಲೂಕಿನಲ್ಲಿ ಕಳೆದ 65 ವರ್ಷಗಳಿಂದ ಶಾಸಕರ ಆಡಳಿತ ವೈಫ‌ಲ್ಯದಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಜನತೆ ಮೂಲ ಭೂತ ಸೌಲಭ್ಯಗಳಿಗಾಗಿ ಪರಿತಪಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ವೆಂಕಟೇಶ್‌ರೆಡ್ಡಿ ದೂರಿದರು.

ತಾಲೂಕಿನ ನೆರ್ನಕಲ್ಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 60 ವರ್ಷಗಳಿಂದ ತಾಲೂಕಿನಲ್ಲಿ ಸ್ಥಳೀಯ ಎರಡು ಪ್ರಭಾವಿ ಕುಟುಂಬಗಳ ಆಡಳಿತದಲ್ಲಿ ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತ್ತೂಬ್ಬ ವ್ಯಕ್ತಿ ಕ್ಷೇತ್ರಕ್ಕೆ ಆಗಮಿಸಿ ಶಾಸಕರಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ
ಎಂದು ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಹಾಗೂ ದಿ.ಕೆ. ಎಂ. ಕೃಷ್ಣಾರೆಡ್ಡಿ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಅಭಿವೃದ್ಧಿ ಪ್ರಚಾರ: ಕ್ಷೇತ್ರದಲ್ಲಿ ಕೆಲವರು ನಮ್ಮದು 60 ವರ್ಷಗಳ ಇತಿಹಾಸವುಳ್ಳ ರಾಜಕಾರಣ ಎಂದು ಹೇಳಿಕೊಳ್ಳುತ್ತಾರೆ. ಇದೇ ರೀತಿ ಮತ್ತೂಬ್ಬರು 5 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಯಾವುದೇ ಅಭಿವೃದ್ಧಿಯಾಗಿಲ್ಲ. ತಾಲೂಕಿನಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿವೆ. ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಆದರೆ, ಇಲ್ಲಿನ
ರಾಜಕೀಯ ನಾಯಕರು ಮಾತ್ರ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಜನರನ್ನು ವಂಚಿಸುತ್ತಿದ್ದಾರೆ ಎಂದು ಹಾಲಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್‌ ಅಭ್ಯರ್ಥಿ: ಕಳೆದ ಒಂದು ವರ್ಷದಿಂದ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ರೀತಿಯ ಸಮಾಜ ಸೇವಾ ಕಾರ್ಯಕ್ರಮ ಹಮ್ಮಿಕೊಂಡು ಬಡವರು, ದಿನದಲಿತರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ನೆರವಿಗೆ ಧಾವಿಸಿ ಅವರ ಕಷ್ಟ
ಸುಖಗಳಿಗೆ ಸ್ಪಂದಿಸಿದ್ದೇನೆ. ತಮ್ಮ ಸಮಾಜಮುಖೀ ಕಾರ್ಯ ಗುರುತಿಸಿರುವ ಸಂಸದ ಕೆ.ಎಚ್‌.ಮುನಿಯಪ್ಪ ಕಾಂಗ್ರೆಸ್‌ ಟಿಕೆಟ್‌ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಂತಾಮಣಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ಆಶೀರ್ವದಿಸಿದರೆ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತಾವು ಏನು ಎಂಬುದನ್ನು ತೋರಿಸುತ್ತೇನೆ ಎಂದು ತಿಳಿಸಿದರು.

ಸಭೆಯಲ್ಲಿ ಮುಖಂಡರಾದ ಚಂದ್ರು, ನಾರಮಾಕಲಹಳ್ಳಿ ಮೂರ್ತಿ, ದೂಪಂ ಪ್ರಸಾದ್‌, ನೆರ್ನಕಲ್ಲು ಗ್ರಾಮದ ಎನ್‌.ಕೆ.ನಾಗರಾಜ್‌, ನಾಗಪ್ಪ, ಎನ್‌.ನಾರಾಯಣಸ್ವಾಮಿ, ಮುರಳಕೃಷ್ಣ, ಲಕ್ಷ್ಮೀಪತಿ, ದೇವರಾಜ್‌, ಮುನಿರಾಜ್‌, ಅನಿಲ್‌ ಕುಮಾರ್‌, ನಾರಾಯಣಸ್ವಾಮಿ, ವೆಂಕಟೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.