ಪುತ್ತೂರು: ರಾಜ್ಯಮಟ್ಟದ ಯುವಜನ ಮೇಳಕ್ಕೆ ಚಾಲನೆ

Team Udayavani, Feb 2, 2018, 12:12 PM IST

20-23.jpg

ಪುತ್ತೂರು: ಯುವ ಸಮುದಾಯವು ಸಮಾಜದ ಸೇವೆ ಮಾಡುವಂತೆ ಪ್ರೇರೇಪಿಸುವ ಕಾರ್ಯ ಯುವಕ/ಯುವತಿ ಮಂಡಲಗಳಿಂದ ನಡೆಯುತ್ತಿದೆ. ಯುವ ಸಮುದಾಯ ಯಾವುದನ್ನು ಸ್ವೀಕರಿಸಬೇಕು ಎನ್ನುವುದನ್ನು ತಿಳಿದುಕೊಂಡು ಸಮಾಜ ಸುಧಾರಕರಾಗದಿದ್ದರೂ ಸಾಮಾಜಿಕ ಕಾರ್ಯಕರ್ತರಾಗಬೇಕು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಆಶಯ ವ್ಯಕ್ತಪಡಿಸಿದರು.

ದ.ಕ. ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲಾ ಮತ್ತು ರಾಜ್ಯ ಯುವಜನ ಒಕ್ಕೂಟ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಸಹ ಯೋಗದಲ್ಲಿ ಪುತ್ತೂರಿನ ಸುದಾನ ಶಾಲೆಯಲ್ಲಿ ಆಯೋಜಿಸಲಾದ 2017-18ನೇ ಸಾಲಿನ ರಾಜ್ಯ ಮಟ್ಟದ ಯುವಜನ ಮೇಳವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅವಧಿ ಯಲ್ಲಿ ಎರಡನೇ ಬಾರಿಗೆ ರಾಜ್ಯ ಯುವಜನ ಮೇಳವನ್ನು ನಡೆಸುವ ಅವಕಾಶ ಲಭಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ತಾಲೂಕು ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ಪ್ರಸ್ತುತ ನಿಲ್ಲಿಸ ಲಾಗಿರುವ ಯುವಜನ ಮೇಳವನ್ನು ಮರು ಆರಂಭಿಸಲು ಸರಕಾರವನ್ನು ಒತ್ತಾಯಿಸುವ ಭರವಸೆ ನೀಡಿದರು.

ಪ್ರತಿ ಗ್ರಾಮ ಮಟ್ಟದಲ್ಲಿ ಸ್ಥಳೀಯ ಯುವಕ/ ಯುವತಿ ಮಂಡಲಗಳಿಗೆ ಸ್ವಂತ ಕಟ್ಟಡ ನಿರ್ಮಿ ಸಲು 10 ಸೆಂಟ್ಸ್‌ ಜಾಗ ನೀಡಲು ವಿಧಾನ ಸಭೆಯಲ್ಲಿ ಪ್ರಸ್ತಾವಿಸಿದ್ದು, ಈ ನಿಟ್ಟಿನಲ್ಲಿ ಯುವ ಸಂಘಟನೆಗಳೂ ಸರಕಾರವನ್ನು ಆಗ್ರಹಿಸಬೇಕು ಎಂದು ವಿನಂತಿಸಿದರು.

ಪ್ರೇರಣೆಯ ಕೆಲಸ
ಮೇಳವನ್ನು ಉದ್ಘಾಟಿಸಿದ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ತುಳುನಾಡಿನ ಸಂಸ್ಕೃತಿಯ ಪರಂಪರೆಯನ್ನು ಒಳಗೊಂಡ ಕಲಾ ಪ್ರಕಾರಗಳು ಸೇರಿದಂತೆ ಬಹಳಷ್ಟು ಜನಪದ ಕಲೆಗಳನ್ನು ಜನತೆಯ ಬಳಿಗೆ ಕೊಂಡೊಯ್ಯುವ ಕೆಲಸವನ್ನು ಯುವ ಸಮುದಾಯ ಮಾಡಬೇಕು ಎಂದರು.

“ಯುವ ಸಂಗಮ’ ಸ್ಮರಣ ಸಂಚಿಕೆಯ ಪ್ರಾಯೋಗಿಕ ಪ್ರತಿಯನ್ನು ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಬಿಡುಗಡೆಗೊಳಿಸಿದರು. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್‌ ಹಮೀದ್‌, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ರಾಜ್ಯ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ| ಬಾಲಾಜಿ, ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು, ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ| ವಿಜಯ ಹಾರ್ವಿನ್‌, ಪುತ್ತೂರು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಪುತ್ತೂರು ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ ಶುಭ ಹಾರೈಸಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ರಾಜ್ಯ ಅರೆಭಾಷೆ ಅಕಾ ಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಜಿ.ಪಂ. ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್‌, ಪ್ರಮೀಳಾ ಜನಾರ್ದನ, ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಮಾçದೆ ದೇವುಸ್‌ ಚರ್ಚ್‌ನ ಧರ್ಮಗುರು ವಂ| ಆಲ್ಫೆ†ಡ್‌ ಜೆ. ಪಿಂಟೋ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಗದೀಶ್‌ ಎಸ್‌., ನಗರ ಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ತಾ.ಪಂ. ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಉಷಾ ಅಂಚನ್‌, ಮೀನಾಕ್ಷಿ ಮಂಜುನಾಥ, ಬಿಇಒ  ಸುಕನ್ಯಾ ಡಿ.ಎನ್‌., ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಎ. ಹೇಮನಾಥ ಶೆಟ್ಟಿ, ಸುದಾನ ಶಾಲೆಯ ಮುಖ್ಯಗುರು ಶೋಭಾ ನಾಗರಾಜ್‌, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್‌ ಎಂ., ನಗರಸಭಾ ಸದಸ್ಯರಾದ ಝೊಹರಾ ನಿಸಾರ್‌, ಜೀವಂಧರ್‌ ಜೈನ್‌, ಜಯಲಕ್ಷ್ಮೀ ಸುರೇಶ್‌, ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ರೋಶನ್‌ ಶೆಟ್ಟಿ, ವಿಶ್ವನಾಥ, ಮಹಮ್ಮದ್‌ ಕುಕ್ಕುವಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಇಲಾಖೆಯ ಉಪನಿರ್ದೇಶಕ ಪ್ರದೀಪ್‌ ಡಿ’ಸೋಜಾ ಪ್ರಸ್ತಾವನೆಗೈದು ಸ್ವಾಗತಿಸಿದರು. ರಾಕೇಶ್‌ ರೈ ಕೆಡೆಂಜಿ ಕಾರ್ಯಕ್ರಮ ನಿರ್ವಹಿಸಿದರು. ಫೆ. 4ರ ತನಕ ನಡೆಯಲಿರುವ ರಾಜ್ಯ ಯುವಜನ ಮೇಳದಲ್ಲಿ ಭಾಗವಹಿಸಲು 5,000ಕ್ಕೂ ಮಿಕ್ಕಿ ಸ್ಪರ್ಧಾಳುಗಳು ಪುತ್ತೂರಿಗೆ ಆಗಮಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.