ವರ್ಷಾಂತ್ಯಕ್ಕೆಲೋಕಸಭೆ ಚುನಾವಣೆ?
Team Udayavani, Feb 3, 2018, 10:32 AM IST
ಬೆಂಗಳೂರು: ರಾಜಸ್ಥಾನ ಹಾಗೂ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ಲೋಕಸಭೆಗೂ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಗೆ ಆಗಮಿಸಿ ಬೂತ್ಮಟ್ಟದ ಸದಸ್ಯತ್ವ ನೇಮಕ ಪ್ರಕ್ರಿಯೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವರ್ಷಾಂತ್ಯದಲ್ಲಿ ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಿಗೆ ಚುನಾವಣೆ ನಡೆಯಲಿದೆ. ಅದೇ ಸಮಯದಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ಕೇಂದ್ರದ ಆಡಳಿತಾರೂಢ ಬಿಜೆಪಿ ಸಿದ್ಧತೆ ನಡೆಸಿದೆ. ಹೀಗಾಗಿ, ನಾವು ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಬೇಕು ಎಂದು ತಿಳಿಸಿದರು. ಕರ್ನಾಟಕದಲ್ಲಿ ಮೇನಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಪಕ್ಷ ಅಧಿಕಾರದಲ್ಲಿದ್ದರೆ ಲೋಕಸಭೆ ಚುನಾವಣೆಗೆ ಹೆಚ್ಚಿನ ಸ್ಥಾನ ಗೆಲ್ಲಲು ಅನುಕೂಲವಾಗಲಿದೆ ಎಂದು ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಹೇಳಿದರು. ದೇಶದಲ್ಲೆ ಮೊದಲ ಬಾರಿಗೆ ರಾಜ್ಯದಲ್ಲಿ ಬೂತ್ ಮಟ್ಟದ ಸಮಿತಿ ರಚನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ