ಕಂಬಳಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
Team Udayavani, Feb 12, 2018, 5:14 PM IST
ನವದೆಹಲಿ:ಕರಾವಳಿಯ ಜನಪ್ರಿಯ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ನೀಡಿರುವ ಅವಕಾಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.
ಕಂಬಳ ನಿಷೇಧಿಸುವಂತೆ ಪೆಟಾ(ಪ್ರಾಣಿ ದಯಾ ಸಂಘ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಡೆ ನೀಡಲು ನಿರಾಕರಿಸಿದೆ.
ಈ ಸಂದರ್ಭದಲ್ಲಿ ಕಂಬಳವನ್ನು ನಿಷೇಧಿಸಬೇಕೆಂದು ಪೆಟಾ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪ್ರತಿವಾದ ಮಂಡಿಸಿದ ರಾಜ್ಯದ ಪರ ವಕೀಲರು, ಕಂಬಳ ಸಂಬಂಧ ಮಸೂದೆ ಅಂಕಿತಕ್ಕೆ ರಾಷ್ಟ್ರಪತಿಗೆ ಕಳುಹಿಸಲಾಗಿದೆ ಎಂದರು.
ವಾದ ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 12ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ