ಒಂದು ನಿರ್ಮಲ ಪ್ರಯತ್ನ; ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳ ಸಿನಿಮಾ

Team Udayavani, Feb 15, 2018, 2:47 PM IST

Nirmala_(105).jpg

ಕೇರ್‌ ಆಫ್ ಫ‌ುಟ್‌ಪಾತ್‌ ಮೂಲಕ ಕಿಶನ್‌ ಕನ್ನಡದ ಕಿರಿಯ ನಿರ್ದೇಶಕ ಎಂಬ ಪಟ್ಟ ತಗೊಂಡಿದ್ದಾರೆ. ಈಗ ಮತ್ತೆ ಕಿರಿಯರ ಸುದ್ದಿ. ಹೌದು, ಮಕ್ಕಳೇ ಸೇರಿಕೊಂಡು ಸಿನಿಮಾವೊಂದನ್ನು ಮಾಡಲು ಹೊರಟಿದ್ದಾರೆ. ಇಲ್ಲಿ ನಿರ್ದೇಶಕ, ಸಂಗೀತ ನಿರ್ದೇಶಕಿ, ಡಿಸೈನರ್‌ ಎಲ್ಲರೂ ಕಿರಿಯರೇ. ಕಿರಿಯರೆಲ್ಲಾ ಸೇರಿ ಮಾಡುತ್ತಿರುವ ಈ ಚಿತ್ರದ ಹೆಸರು “ನಿರ್ಮಲ’. ಚಿತ್ರಕ್ಕೆ “ಮುದ್ದು ಮನಸುಗಳ ಕನಸು’ ಎಂಬ ಟ್ಯಾಗ್‌ಲೈನ್‌ ಇದೆ.

ಅಂದಹಾಗೆ, “ನಿರ್ಮಲ’ ಚಿತ್ರವನ್ನು ನಿರ್ಮಿಸುತ್ತಿರುವುದು ಭಾ.ಮ. ಹರೀಶ್‌ ಅವರ ಪುತ್ರ ಉಲ್ಲಾಸ್‌. ಉಲ್ಲಾಸ್‌ ಒಂದೆರೆಡು ವರ್ಷಗಳ ಹಿಂದೆ ಉಲ್ಲಾಸ್‌ ಸ್ಕೂಲ್‌ ಆಫ್ ಸಿನಿಮಾಸ್‌ ಎಂಬ ನಟನಾ ತರಬೇತಿ ಶಾಲೆಯನ್ನು ಪ್ರಾರಂಭಿಸಿದ್ದರು. ಆ ಶಾಲೆಯಲ್ಲಿ ನಟನೆ, ಸಂಗೀತ ಕಲಿಯಲು ಬಂದ ಮಕ್ಕಳೊಂದಿಗೆ ಯಾಕೆ ಸಿನಿಮಾ ಮಾಡಬಾರದು ಎಂದು ಯೋಚಿಸಿ, ಆಯಾ ಕ್ಷೇತ್ರದಲ್ಲಿ ಆಸಕ್ತಿ ಇರುವವರನ್ನೇ ಹುಡುಕಿ, ಅವರಿಂದಲೇ ಕೆಲಸ ಮಾಡಿಸಿದ್ದಾರೆ. ಚಿತ್ರವನ್ನು ನಿರ್ದೇಶಿಸಿರುವುದು ಲೋಹಿತ್‌ ಎಂಬ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿ .ಅವರಿಗೆ ಕಿರುತೆರೆ ನಿರ್ದೇಶಕ ಪ್ರೀತಂ ಶೆಟ್ಟಿಯಿಂದ ತರಬೇತಿ ಕೊಡಿಸಿ, ಚಿತ್ರ ನಿರ್ದೇಶನ ಮಾಡಿಸಲಾಗುತ್ತಿದೆ. 

ಇನ್ನು ಸಂಗೀತ ನಿರ್ದೇಶಕಿ ವರ್ಷಶ್ರೀ, ಸಂಕಲನಕಾರ ಲೋಹಿತ್‌ ಶಂಕರ್‌, ಪೋಸ್ಟರ್‌ ಡಿಸೈನರ್‌ ಅಂಕಿತ ನಾಯ್ಡು ಮುಂತಾದವರಿಗೆ ಹಿರಿಯರಿಂದ ಸೂಕ್ತ ತರಬೇತಿ ಕೊಡಿಸಿ, ಅವರಿಂದಲೇ ಕೆಲಸ ಮಾಡಿಸಲಾಗುತ್ತಿದೆ. ಈ ತಂಡದಲ್ಲಿ ಅನುಭವಿ ಎಂದರೆ, ಛಾಯಾಗ್ರಾಹಕ ಪವನ್‌ ಕುಮಾರ್‌ ಮತ್ತು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ವೆಂಕಗಿರಿ ಬ್ರದರ್ಸ್‌ ಮಾತ್ರ. ಮಿಕ್ಕಂತೆ ಸಾಕಷ್ಟು ಹೊಸಬರು ಮತ್ತು ಅದರಲ್ಲೂ ಮಕ್ಕಳೇ ಇರುವುದು ವಿಶೇಷ.

“ನಿರ್ಮಲ’ ಚಿತ್ರದ ಚಿತ್ರೀಕರಣ ಏಪ್ರಿಲ್‌ನಿಂದ ಆರಂಭವಾಗಲಿದ್ದು, ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಪೋಸ್ಟರ್‌ ಬಿಡುಗಡೆ ಮಾಡುವುದಕ್ಕೆ ನಟಿ ಪ್ರೇಮ ಬಂದಿದ್ದರು. ನಿರ್ಮಾಪಕ ಎಸ್‌.ವಿ. ಬಾಬು, ಜೀ ಕನ್ನಡದ “ಡ್ರಾಮಾ ಜ್ಯೂನಿಯರ್’ ನಿರ್ದೇಶಕ ಶರಣಯ್ಯ, ಭಾ.ಮ. ಹರೀಶ್‌, ಉಲ್ಲಾಸ್‌ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.