ರಾಹುಲ್‌ ಮಹದಾಯಿ ಬಗ್ಗೆ ಮಾತಾಡ್ತಾರೆ: ಪರಂ 

Team Udayavani, Feb 23, 2018, 6:20 AM IST

Parameshwara-700.jpg

ಬೆಂಗಳೂರು: ಫೆಬ್ರವರಿ 24 ರಿಂದ 26ರ ವರೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮುಂಬೈ ಕರ್ನಾಟಕ ಭಾಗದಲ್ಲಿ ಜನಾಶೀರ್ವಾದ ಯಾತ್ರೆ ನಡೆಸಲಿದ್ದು, ಈ ಸಂದರ್ಭದಲ್ಲಿ ಮಹದಾಯಿ ವಿವಾದದ ಕುರಿತಂತೆಯೂ ಮಾತನಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಹುಲ್‌ ಗಾಂಧಿ ರಾಜ್ಯ ಪ್ರವಾಸದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್‌ ಕರ್ನಾಟಕದಲ್ಲಿ ಪ್ರವಾಸ ಮಾಡುವಾಗ ರಾಹುಲ್‌ ಗಾಂಧಿ ಸಂವಿಧಾನದ ಅನುಚ್ಛೇಧ 371ಜೆ ತಿದ್ದುಪಡಿ ಮಾಡುವ ಕುರಿತು ಆ ಭಾಗದ ಜನರಿಗೆ ಭರವಸೆ ನೀಡಿದ್ದರು. ಅದರಂತೆ ಯುಪಿಎ ಸರ್ಕಾರದ ಅವಧಿಯಲ್ಲಿ 371ಜೆ ತಿದ್ದುಪಡಿ ಮಾಡಿ ಅನುಕೂಲ ಮಾಡಿಕೊಟ್ಟಿದ್ದರು. ರಾಜ್ಯ ಸರ್ಕಾರ ಮಹದಾಯಿ ವಿವಾದ ಬಗೆ ಹರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡದೇ ರಾಜ್ಯಕ್ಕೆ ಬಂದಾಗಲೆಲ್ಲ ಸುಳ್ಳು ಹೇಳಿ ಹೋಗುತ್ತಿದ್ದಾರೆ. ಆದರೆ ರಾಹುಲ್‌ಗಾಂಧಿಯವರು ಮುಂಬೈ ಕರ್ನಾಟಕ ಭಾಗದ ಪ್ರವಾಸದಲ್ಲಿ ಮಹದಾಯಿ ವಿವಾದದ ಬಗ್ಗೆ ರಾಹುಲ್‌ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಿದರು.

ರಾಹುಲ್‌ ಗಾಂಧಿ ಪ್ರವಾಸದ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳು,ರೈತರೊಂದಿಗೆ ಸಂವಾದ, ಪಕ್ಷದ ಮುಖಂಡರೊಂದಿಗೆ ಸಭೆಗಳನ್ನು ಮಾಡಲಿದ್ದಾರೆ. ಫೆ.26ರಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ.

ಈ ಬಾರಿಯ ಪ್ರವಾಸದಲ್ಲಿ ಮಠ ಹಾಗೂ ದೇವಸ್ಥಾನಗಳಿಗೆ ಅಧಿಕೃತ ಭೇಟಿ ನೀಡುವ ಕಾರ್ಯಕ್ರಮ ಇಲ್ಲದಿದ್ದರೂ, ದಾರಿಯಲ್ಲಿ ಐತಿಹಾಸಿಕ ಮತ್ತು ಪಾರಂಪರಿಕ ದೇವಸ್ಥಾನ ಮಠಗಳು ಕಂಡರೆ ರಾಹುಲ್‌ ಗಾಂಧಿ ಭೇಟಿ ಮಾಡುವ ಸಾಧ್ಯತೆಯಿದೆ ಎಂದರು.

ಈ ಚುನಾವಣೆಯಲ್ಲಿ ಬಿಜೆಪಿ ಹಿಂದುತ್ವ ಅಜೆಂಡಾ ಮುಂದಿಟ್ಟುಕೊಂಡು ಹೋದರೂ ಕಾಂಗ್ರೆಸ್‌ ಅಭಿವೃದಿಟಛಿ ಬಗ್ಗೆ ಮಾತ್ರ ಚರ್ಚೆ ಮಾಡುತ್ತದೆ. ಕಾಂಗ್ರೆಸ್‌ನದ್ದು ಸಾಫ್ಟ್ ಹಿಂದುತ್ತ ಎನ್ನುವ ಬಿಜೆಪಿಯವರು ಹಾರ್ಡ್‌ ಹಿಂದುತ್ವ ಎಂದರೆ ಗಲಾಟೆ ಮಾಡುವುದು, ಸಮಾಜ ಒಡೆಯುವ ಕೆಲಸ ಮಾಡುವುದೇ ಎಂದು ಪ್ರಶ್ನಿಸಿದರು.

ಯಾರೇ ತಪ್ಪು ಮಾಡಿದರೂ ಕ್ಷಮಿಸಲ್ಲ: ಶಾಸಕ ಹ್ಯಾರಿಸ್‌ ಪುತ್ರ ಮೊಹಮದ್‌ ನಲಪಾಡ್‌ ಹಲ್ಲೆ ಪ್ರಕರಣದಲ್ಲಿ ಪಕ್ಷ ತಕ್ಷಣವೇ ಕ್ರಮ ಕೈಗೊಂಡಿದ್ದು, ಆತನನ್ನು ಆರು ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅದೇ ರೀತಿ ಕೆ.ಆರ್‌.ಪುರ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ವಿರುದಟಛಿವೂ ಪಕ್ಷ ಕ್ರಮ ಕೈಗೊಂಡಿದೆ. ಸರ್ಕಾರ ಕೂಡ ನಲಪಾಡ್‌ ವಿರುದ್ಧ ಪ್ರಕರಣ ದಾಖಲಿಸಿದೆ. ಕೋರ್ಟ್‌ ಆತನನ್ನು ಜೈಲಿಗೆ ಕಳುಹಿಸಿದೆ. ಪಕ್ಷದಲ್ಲಿ ಯಾರೇ ಅಶಿಸ್ತಿನಿಂದ ವರ್ತಿಸಿದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪಿಎಫ್ಐ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಸಂಸ್ಥೆಯ ಬಗ್ಗೆ ಯಾವ ರೀತಿಯ ವರದಿ ಇದೆ ಎನ್ನುವುದನ್ನು ಸರ್ಕಾರ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ. 
ಪ್ರಜಾಪ್ರಭುತ್ವದಲ್ಲಿ ಎಲ್ಲ ಸಂಘಟನೆಗಳಿಗೂ ಸ್ವಾತಂತ್ರ್ಯ ಇದೆ ಎಂದು ಪರಮೇಶ್ವರ್‌ ಹೇಳಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.