ಐಎನ್ಎಕ್ಸ್ ಮೀಡಿಯಾ ಕೇಸ್:ಕಾರ್ತಿ ಚಿದಂಬರಂ ಅರೆಸ್ಟ್ !
Team Udayavani, Feb 28, 2018, 9:04 AM IST
ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಐಎನ್ಎಕ್ಸ್ ಮೀಡಿಯಾ ಕೇಸ್ ಗೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಚೆನ್ನೈನ ನಿವಾಸದಲ್ಲಿ ಲಂಡನ್ನಿಂದ ವಾಪಾಸಾಗಿರುವ ಕಾರ್ತಿ ಅವರನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ನಿನ್ನೆಯಷ್ಟೇ ಕಾರ್ತಿ ಅವರ ಸಿಎ ಭಾಸ್ಕರನ್ ಅವರನ್ನು ಸಿಬಿಐ ವಶಕ್ಕೆ ಪಡೆದಿತ್ತು.
ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಯೂ ಆಗಿರುವ ಇಂದ್ರಾಣಿ ಮುಖರ್ಜಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
2007ರಲ್ಲಿ ಮಾರಿಷಸ್ನಿಂದ ಬಂಡವಾಳ ಪಡೆಯುವ ವೇಳೆ ಎಫ್ಐಪಿಬಿ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಲಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ.
ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್