ತೃತೀಯರಂಗದ ಚರ್ಚೆಗೆ ಚಾಲನೆ ಕೊಟ್ಟ ಫ‌ಲಿತಾಂಶ


Team Udayavani, Mar 5, 2018, 11:40 AM IST

triteeya.jpg

ಲಕ್ನೋ/ಹೈದರಾಬಾದ್‌: ಈಶಾನ್ಯದ ಮೂರು ರಾಜ್ಯ ಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿರುವಂತೆಯೇ 2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೃತೀಯ ರಂಗ ರಚನೆ ಯತ್ನಗಳು ಮತ್ತೆ ಶುರುವಾಗಿವೆ.

ಕಾಂಗ್ರೆಸ್‌ ನಾಯಕ ಎಂ.ವೀರಪ್ಪ ಮೊಲಿ, ಎಐಎಂಐಎಂ ಸಂಸದ ಅಸಾದುದ್ದೀನ್‌ ಒವೈಸಿ ಈ ಬಗ್ಗೆ ರವಿವಾರ ಬಹಿರಂಗವಾಗಿಯೇ ಮಾತನಾಡಿದ್ದಾರೆ. ಅದಕ್ಕೆ ಚಾಲನೆ ಸಿಕ್ಕಿದ್ದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಹೇಳಿಕೆ. ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೆಸಿಆರ್‌ ಅವರು, ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪರ್ಯಾಯವಾಗಿ ರಾಜಕೀಯ ಮೈತ್ರಿಕೂಟ ರಚನೆಯಾಗಬೇಕು ಎಂದಿದ್ದರು. ಅದನ್ನೇ ಪುಷ್ಟೀಕರಿಸಿರುವ ಅಸಾದುದ್ದೀನ್‌ ಒವೈಸಿ, ದೂರದೃಷ್ಟಿ ಇರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ಪರ್ಯಾಯ ರಾಜಕೀಯ ಒಕ್ಕೂಟ ರಚನೆಯ ಮಾತುಗಳನ್ನಾಡಿದ್ದಾರೆ. ಈ ನಿಟ್ಟಿನಲ್ಲಿ ಅವರೇ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

“ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವೇಳೆ ಅವರನ್ನು ಮತ್ತು ಅವರ ನಿಲುವುಗಳನ್ನು ವಿರೋಧಿಸಿದ್ದೆವು. ಅಂತಿ ಮ ವಾಗಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಟ್ಟು ಸೇರಿಸಿ ಕೇಂದ್ರದಲ್ಲಿ ಸರಕಾರ ರಚಿಸುವ ಚಾಕಚಕ್ಯತೆ ಅವರಲ್ಲಿದೆ’ ಎಂದಿದ್ದಾರೆ ಒವೈಸಿ.

ಕೆಸಿಆರ್‌ಗೆ ಮಮತಾ ಫೋನ್‌: ಇದಾದ ಬಳಿಕ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ಗೆ ಫೋನ್‌ ಮಾಡಿ ಮಾತನಾಡಿರುವ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳು ಒಟ್ಟಾಗಬೇಕು: ಒವೈಸಿ ಧ್ವನಿಯಲ್ಲೇ ಮಾತನಾಡಿರುವ ಕಾಂಗ್ರೆಸ್‌ ನಾಯಕ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಲಿ, ಮುಂದಿನ ದಿನಗಳಲ್ಲಿ ಜಾತ್ಯತೀತ  ಪಕ್ಷಗಳು ಏಕಾಂಗಿಗಳಾಗಿ ಕೆಲಸ ಮಾಡದೆ ಒಗ್ಗೂಡಬೇಕು ಎಂದಿದ್ದಾರೆ. “ಚುನಾವಣೆಯಲ್ಲಿ ಗೆಲವು ಸಾಧಿಸಲೋಸುಗ ಅವುಗಳೆಲ್ಲವೂ ಕೈಜೋಡಿಸಬೇಕು. ನಾವೆಲ್ಲರೂ ಬಿಜೆಪಿಯೆಂಬ ಕೋಮುವಾದಿ ಭೂತವನ್ನು ಎದುರಿಸಬೇಕು. ಹೀಗಾಗಿ ಕೋಮು ಶಕ್ತಿಗಳ ವಿರುದ್ಧ ಹೋರಾಟಕ್ಕೆ ಎಲ್ಲರ ನಡುವೆ ಸಹಕಾರ ಅಗತ್ಯ’ ಎಂದು ಹೇಳಿದ್ದಾರೆ.

ದೇಶ ಕಾಂಗ್ರೆಸ್‌ ಮುಕ್ತ ಭಾರತವಾಗುತ್ತದೆ ಎಂಬ ವಾದವನ್ನು ತಿರಸ್ಕರಿಸಿದ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಎಡಪಕ್ಷಗಳೇ ಇಲ್ಲದಂತಾಗುತ್ತವೆ. ಆದರೆ, ಕಾಂಗ್ರೆಸ್‌ ಮಧ್ಯಪ್ರೇಶದ ಉಪಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದೆ. ರಾಜಸ್ಥಾನದಲ್ಲೂ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉ.ಪ್ರ.ಉಪ ಚುನಾವಣೆ: ಎಸ್‌ಪಿಗೆ ಬೆಂಬಲ ಇಲ್ಲ
ಕರ್ನಾಟಕ ಹೊರತುಪಡಿಸಿ ಬೇರೆ ಯಾವುದೇ ರಾಜ್ಯ ಗಳಲ್ಲಿ ಇತರ ಪಕ್ಷಗಳ ಜತೆ ಚುನಾವಣಾ ಹೊಂದಾ ಣಿಕೆ ಇಲ್ಲ ಎಂದಿದ್ದಾರೆ ಬಿಎಸ್‌ಪಿ ನಾಯಕಿ ಮಾಯಾವತಿ. ಉತ್ತರ ಪ್ರದೇಶದ ಗೋರಖ್‌ಪುರ, ಫ‌ೂಲ್ಪುರ ಲೋಕಸಭೆ ಕ್ಷೇತ್ರಗಳಿಗೆ ಮಾ.11ರಂದು ನಡೆಯಲಿರುವ ಉಪ ಚುನಾವಣೆ ಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ಟ್ವೀಟ್‌ ಮಾಡಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಆದರೆ  ವಿಧಾನಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ. ಲಕ್ನೋದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಎಸ್‌ಪಿ ನಡುವೆ ಮೈತ್ರಿ ಮಾಡುವ ವಿಚಾರ ಇದ್ದರೆ ಅದನ್ನು ಸಾರ್ವಜನಿಕವಾಗಿ ಘೋಷಿಸಲಾಗುತ್ತದೆ. ರಹಸ್ಯವಾಗಿ ಏನನ್ನೂ ಮಾಡುವುದಿಲ್ಲ ಎಂದಿದ್ದಾರೆ.

ಮೈತ್ರಿಕೂಟ ಮಾತುಕತೆ ಚುರುಕು
ತ್ರಿಪುರ ಫ‌ಲಿತಾಂಶದಿಂದ ಕಂಗೆಟ್ಟಿರುವ ಸಿಪಿಎಂ, ಹಾಲಿ ಹಿನ್ನಡೆಗೆ ಪಕ್ಷದ ಮಾಜಿ ಪ್ರಧಾನ ಕಾರ್ಯ ದರ್ಶಿ ಪ್ರಕಾಶ್‌ ಕಾರಟ್‌ ಕಾರಣ ಎಂದು ಸೀತಾ ರಾಮ್‌ ಯೆಚೂರಿ ಬೆಂಬಲಿಗರು ದೂರಿದ್ದಾರೆ. ಬಿಜೆಪಿ ವಿರೋಧಿ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ಇರುವ ಕಾರಟ್‌ ನಿಲುವಿನಿಂದಲೇ ಸೋಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಡುವೆ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ, ಎಪ್ರಿಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಸೋಲಿನ ಕಾರಣಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪರ್ಯಾಯವಾಗಿರುವ ಆಯ್ಕೆಗಳನ್ನು ಮತದಾರರಿಗೆ ನೀಡಬೇಕಾಗಿತ್ತು ಎಂದು ಪಶ್ಚಿಮ ಬಂಗಾಲದ ಸಿಪಿಎಂ ನಾಯಕರೊ ಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪ್ರಕಾಶ್‌ ಕಾರಟ್‌ ಬೆಂಬಲಿಗರು ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.