ಬಿಜೆಪಿ ಆಡಳಿತದಲ್ಲೇ ಕೊಲೆ, ದರೋಡೆ ಅಧಿಕ

Team Udayavani, Mar 6, 2018, 4:25 PM IST

ramalingareddy.jpg

ಉಡುಪಿ: ರಾಜ್ಯದಲ್ಲಿ ಈಗ ನಡೆದಿರುವ ಕೊಲೆ, ದರೋಡೆ ಪ್ರಕರಣಗಳಿಗಿಂತ ಈ ಹಿಂದೆ ಬಿಜೆಪಿ
ಅಧಿಕಾರದಲ್ಲಿದ್ದಾಗ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿವೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್‌ ಠಾಣೆಯಲ್ಲಿ ಮಾ.5ರಂದು ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಅನಂತರ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ಎನ್‌ಸಿಆರ್‌ಬಿ (ನ್ಯಾಶನಲ್‌ ಕ್ರೈಮ್‌ ರೆಕಾರ್ಡ್ಸ್‌ ಬ್ಯೂರೋ) ಪ್ರಕಾರ  ಅಪರಾಧ ಪ್ರಕರಣದಲ್ಲಿ ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯ 10ನೇ ಸ್ಥಾನದಲ್ಲಿದೆ. ಹಿಂದೆ ಬಿಜೆಪಿ ಆಡಳಿತ ಇದ್ದಾಗ ಅಪರಾಧ ಪ್ರಕರಣಗಳ ಪ್ರಮಾಣ ಶೇ.7 ಇತ್ತು. ಈಗ ಶೇ.5ಕ್ಕೆ ಬಂದಿದೆ. ಟ್ರಾಫಿಕ್‌ ಕೇಸುಗಳನ್ನು ಕೂಡ ಇತರ ಪ್ರಕರಣಗಳ ಜತೆ ಸೇರಿಸಿರುವುದರಿಂದ ಶೇ. 5 ಆಗಿದೆ. ಇಲ್ಲದಿದ್ದರೆ ಈ ಪ್ರಮಾಣ ಶೇ. 4ರಷ್ಟಾಗುತ್ತಿತ್ತು ಎಂದರು.

ಬಿಜೆಪಿ ಅವಧಿಯಲ್ಲಿ 8,885 ಕೊಲೆಗಳಾಗಿದ್ದವು. ನಮ್ಮ ಅವಧಿಯಲ್ಲಿ (ಕಾಂಗ್ರೆಸ್‌) 7,759 ಆಗಿದೆ. ಬಿಜೆಪಿ ಅವಧಿಯಲ್ಲಿ 9,648 ದರೋಡೆ ಪ್ರಕರಣಗಳಾಗಿದ್ದವು. ನಮ್ಮ ಅವಧಿಯಲ್ಲಿ 5,542 ದರೋಡೆ ಆಗಿದೆ. ಬಿಜೆಪಿ ಅವಧಿಯಲ್ಲಿ 2,922 ಅತ್ಯಾಚಾರ ಪ್ರಕರಣಗಳಾಗಿವೆ. ನಮ್ಮ ಅವಧಿಯಲ್ಲಿ 3,833 ಆಗಿದೆ. ಇದು ಬೇರೆ ರಾಜ್ಯಗಳಲ್ಲಿ ನಮಗಿಂತ ಮೂರು ಪಟ್ಟು ಹೆಚ್ಚಾಗಿದೆ. ಇದಕ್ಕೆ ಪೋಕೊÕà ಪ್ರಕರಣಗಳುಕೂಡ ಸೇರಿರುವುದು ಕಾರಣ. ಅತ್ಯಾಚಾರ ಪ್ರಕರಣದಲ್ಲಿ ಉ.ಪ್ರದೇಶ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

ಮುಸ್ಲಿಮರಿಂದ ಹತ್ಯೆಯಾದವರು 10 ಮಾತ್ರ
ಪಿಎಫ್ಐ, ಎಸ್‌ಡಿಪಿಐ ಅಥವಾ ಇತರ ಮುಸ್ಲಿಮರಿಂದ ಮೃತಪಟ್ಟ ಹಿಂದೂಗಳು 10 ಮಂದಿ ಮಾತ್ರ. ಬಿಜೆಪಿಯವರು ಹೇಳುತ್ತಿರುವಂತೆ 23 ಮಂದಿ ಅಲ್ಲ. ಉಳಿದವರ ಪೈಕಿ ಕೆಲವು ಮಂದಿ ಆತ್ಮಹತ್ಯೆ ಮಾಡಿಕೊಂಡವರು. ವೈಯಕ್ತಿಕ ಕಾರಣಗಳು, ರಾಜಕೀಯ, ಇತರ ವ್ಯವಹಾರಗಳ ಹಿನ್ನೆಲೆಯಲ್ಲಿ ಕೂಡ ಕೊಲೆಗಳಾಗಿವೆ. ಹಿಂದೂ ಸಂಘಟನೆಗಳಿಂದ 10 ಮಂದಿ ಹಿಂದೂಗಳು ಮೃತಪಟ್ಟಿದ್ದಾರೆ. ಹಿಂದೂಗಳಿಂದ 14 ಮಂದಿ ಹಿಂದೂಗಳು ಮೃತಪಟ್ಟಿದ್ದಾರೆ. ಹಿಂದೂ ಸಂಘಟನೆಗಳಿಂದ 11 ಮಂದಿ ಮುಸಲ್ಮಾನರು ಕೊಲೆಗೀಡಾಗಿದ್ದಾರೆ. ಮೃತಪಟ್ಟಿರುವ 23 ಮಂದಿ ಬಿಜೆಪಿ ಕಾರ್ಯಕರ್ತರು ಹೌದು. ಆದರೆ ಅವರೆಲ್ಲರೂ ಮುಸಲ್ಮಾನರಿಂದ ಕೊಲೆಗೈಯಲ್ಪಟ್ಟಿದ್ದಲ್ಲ. ಎಲ್ಲ ಪ್ರಕರಣಗಳಲ್ಲೂ ಆರೋಪಿಗಳ ಬಂಧನವಾಗಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರೆಡ್ಡಿ ಹೇಳಿದರು.

ಎಲ್ಲ ಪ್ರಾಣಿಹತ್ಯೆ ನಿಲ್ಲಿಸಲಿ
ಬಿಜೆಪಿಯವರು ಗೋಹತ್ಯೆ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಾರೆ. ಆದರೆ ಗೋಮಾಂಸ ರಫ್ತು ನಿಲ್ಲಿಸುತ್ತಿಲ್ಲ. ಗೋಮಾಂಸ ರಫ್ತು ನಿಲ್ಲಿಸಲಿ. ಜತೆಗೆ ಎಲ್ಲ ಪ್ರಾಣಿಗಳ ಹತ್ಯೆಯನ್ನೂ ನಿಲ್ಲಿಸಲಿ. ಇದಕ್ಕೆ ನನ್ನ ಬೆಂಬಲವೂ ಇದೆ ಎಂದು ರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.