ಕೆಡಿಎ ಮಾಜಿ ಅಧ್ಯಕ್ಷರ ಆರೋಪ ತಳ್ಳಿ ಹಾಕಿದ ಆನಂದ ಅಸ್ನೋಟಿಕರ್‌


Team Udayavani, Mar 7, 2018, 7:40 PM IST

4.jpg

ಕಾರವಾರ: ಬೆಂಗಳೂರಿನಲ್ಲಿ ನಡೆದ ಟೆಕ್ಕಿ ಪತ್ನಿ ಕೊಲೆ ಆರೋಪಿ ಚಂದ್ರು ಕೊಂಡ್ಲಿ ಅಲಿಯಾಸ್‌ ಚಂದ್ರು ಮಡಿವಾಳ ತನಗೆ ಪರಿಚಯ. ಅದು ಬಿಟ್ಟರೆ ಆತನೊಂದಿಗೆ ರಾಜಕೀಯದಲ್ಲಾಗಲಿ ಅಥವಾ ಉದ್ಯಮದಲ್ಲಾಗಲಿ ಯಾವುದೇ ಸಂಬಂಧ ಹೊಂದಿಲ್ಲ ಎಂದು ಮಾಜಿ ಸಚಿವ ಹಾಗೂ ಕಾರವಾರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಹೇಳಿದರು.

ಮಾಜಿ ಕೆಡಿಎ ಅಧ್ಯಕ್ಷರು ಕಳೆದ ಶನಿವಾರ ಮಾಡಿದ್ದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳಿಂದ ಚಂದ್ರುವಿನ ಪರಿಚಯ ತನಗಿದೆ. ಸುಮಾರು 10 ಸಾವಿರಕ್ಕಿಂತ ಹೆಚ್ಚಿನ ಜನ ಭಾಗವಹಿಸಿದ್ದ ಕಾರವಾರದ ಜೆಡಿಎಸ್‌ ಬೈಕ್‌ ರ್ಯಾಲಿಯಲ್ಲೂ ಸಹ ಚಂದ್ರ ಭಾಗವಹಿಸಿರಬೇಕು. ಅವರೆಲ್ಲರನ್ನು ನಾನು ನೆನಪಿಟ್ಟುಕೊಳ್ಳುವುದು
ಅಸಾಧ್ಯ. ನಾನು ಸಾರ್ವಜನಿಕ ಜೀವನದಲ್ಲಿ ಇರುವಂಥ ವ್ಯಕ್ತಿ. ಅನೇಕ ಜನ ಬಂದು ಫೋಟೊ ತೆಗೆದುಕೊಳ್ಳುತ್ತಾರೆ. ಪ್ರತಿಯೊಬ್ಬರ ಚರಿತ್ರೆಯನ್ನು ಗಮನಿಸಲು ತನ್ನಿಂದ ಸಾಧ್ಯವಿಲ್ಲ. ಟೆಕ್ಕಿ ಅಕ್ಷತಾಳ ಸಾವಿನ ಬಗ್ಗೆ ತನಗೂ ಸಹ ನೋವಿದೆ. ಈ ಸಾವು ಅವರಿಬ್ಬರ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯದಿಂದ ಆಗಿರಬಹುದು ಎಂದರು. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ, ಕೆಡಿಎ ಮಾಜಿ ಅಧ್ಯಕ್ಷ ಶಂಭು ಶೆಟ್ಟಿಯವರ ಆತ್ಮೀಯರಾದ ಶಾಸಕ ಸೈಲ್‌ ಅವರು ಸಹ ಬೇಲೇಕೇರಿ ಅದಿರು ಕಳ್ಳತನ ಪ್ರಕರಣದಲ್ಲಿ ಆರೋಪಿಯೆಂಬುದನ್ನು ಮರೆಯಬಾರದು. ಇದನ್ನು ಶಂಭು ಶೆಟ್ಟಿ ನೆನಪಿಸಿಕೊಳ್ಳಲಿ ಎಂದು ಟಾಂಗ್‌ ನೀಡಿದರು.

ಹಿನ್ನೆಲೆ: ಕಳೆದ ಶನಿವಾರ ಶಂಭು ಶೆಟ್ಟಿ ಹಾಗೂ ನಗರ ಘಟಕದ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರಿನಲ್ಲಿ ಟೆಕ್ಕಿ ಪತ್ನಿ  ಕೊಲೆಯ ಆರೋಪ ಹೊತ್ತ ಚಂದ್ರು ಮಡಿವಾಳ ಕಾರವಾರದಲ್ಲಿ ಮಾಜಿ ಸಚಿವ ಅಸ್ನೋಟಿಕರ್‌ ಮನೆಗೆ ಬಂದಿದ್ದ ಎಂದು ಆರೋಪಿಸಿದ್ದರು. ಕೊಲೆ ನಡೆದ ಕೆಲ ದಿನಗಳ ನಂತರ ಸತ್ಯಾಂಶ ಹೊರಬಿದ್ದು ಆರೋಪಿ ಪತಿ ಚಂದ್ರುನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಅದೇ ವ್ಯಕ್ತಿ ಈಚೆಗೆ ನಡೆದ ಆನಂದ ಅಸ್ನೋಟಿಕರ್‌ ಅವರ ಜೆಡಿಎಸ್‌ ಬೈಕ್‌ ರ್ಯಾಲಿಯಲ್ಲಿ ಭಾಗವಹಿಸಿದ್ದ ಎಂದು ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಶಂಭು ಶೆಟ್ಟಿ ಆರೋಪಿಸಿದ್ದರು. ಚಂದ್ರು ಕಳೆದ ಡಿಸೆಂಬರ್‌ ತಿಂಗಳಿನಲ್ಲಿಯೇ ಪತ್ನಿಯನ್ನು ಕೊಂದು, ಕಾರವಾರಕ್ಕೆ ತನ್ನ ಸಹಚರ ರಾಜ್ವಿಂದರ್‌ ಸಿಂಗ್‌ ಜೊತೆ ಬಂದು ಆನಂದ ಅಸ್ನೋಟಿಕರ್‌ ಅವರ ಮನೆಯಲ್ಲಿ ಆಶ್ರಯಪಡೆದ ಸುದ್ದಿ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶೆಟ್ಟಿ ಆರೋಪಿಸಿದ್ದರು. ಬೈಕ್‌ರ್ಯಾಲಿ ದಿನ ಈ ಚಂದ್ರು ಮತ್ತು ರಾಜ್ವಿಂದರ್‌ ಸಿಂಗ್‌ ಇಬ್ಬರು ಆನಂದ ಅಸ್ನೋಟಿಕರ್‌ ಮನೆಯೆದುರು ನಿಂತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಇಲ್ಲಿ ಸ್ಮರಣೀಯ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.