ಪಡುಬಿದ್ರಿ:ಓವರ್ಟೇಕ್ ವೇಳೆ ಬಸ್ ಪಲ್ಟಿ;ಪ್ರಯಾಣಿಕರಿಗೆ ಗಾಯ
Team Udayavani, Mar 12, 2018, 4:39 PM IST
ಪಡುಬಿದ್ರಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು 5 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಏಕಮುಖ ಸಂಚಾರವಿರುವಲ್ಲಿ ಓವರ್ಟೇಕ್ ಮಾಡಲು ಮುಂದಾದಾಗ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ರಸ್ತೆ ಪಕ್ಕದಲ್ಲಿರುವ ಚರಂಡಿಗೆ ಪಲ್ಟಿಯಾಗಿದೆ.
ಗಾಯಾಳುಗಳ ಪೈಕಿ ಓರ್ವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಡುಬಿದ್ರಿಯಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಇರುವುದು, ಬಸ್ ಚಾಲಕರು ಪ್ರಯಾಣಿಕರ ಜೀವಗಳ ನಿರ್ಲಕ್ಷ್ಯ ವಹಿಸಿ ಓವರ್ಟೇಕ್ಗೆ ಮುಂದಾಗುತ್ತಿರುವುದು ಆತಂಕ ಹುಟ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?