ಬೆಂಗಳೂರು; ಹಾಡಹಗಲೇ ಪೊಲೀಸರ ಮೇಲೆಯೇ ಹಲ್ಲೆ, ಆರೋಪಿಗಳ ಬಂಧನ!
Team Udayavani, Mar 19, 2018, 11:15 AM IST
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಪೊಲೀಸರಿಗೆ ರಕ್ಷಣೆ ಇಲ್ಲ ಎಂಬಂತ ಸ್ಥಿತಿ ಮುಂದುವರಿದಿದ್ದು, ಹಾಡಹಗಲೇ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳ ಮೇಲೆ ಹಲ್ಲೆ ನಡೆಸಿದ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮಾರತ್ ಹಳ್ಳಿ ಸಮೀಪದ ಸಿದ್ದಾಪುರ ಕ್ರಾಸ್ ನಲ್ಲಿ ಬಸಪ್ಪ ಗಾಣೆಗಾರ, ಶರಣಬಸಪ್ಪ ಎಂಬ ಇಬ್ಬರು ಕಾನ್ಸ್ ಟೇಬಲ್ ಗಳು ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡಾದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಗೂಂಡಾಗಳ ರೀತಿ ಹಲ್ಲೆ ನಡೆಸಿದ್ದರು. ಈ ಎಲ್ಲಾ ಘಟನೆ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಪ್ರಕರಣದ ಕುರಿತು ಖಾಸಗಿ ಟಿವಿ ಚಾನೆಲ್ ಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ವರ್ತೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರ್, ಸಂದೀಪ್, ಮೂರ್ತಿ ಹಾಗೂ ಮುರಳಿ ಮೋಹನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾನೂನು ಪಾಲನೆಗೆ ಹೋದವರ ಮೇಲೆ ಹಲ್ಲೆ ತಪ್ಪು:
ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಇಸ್ಪೀಟ್ ಆಟ ಆಡುತ್ತಿದ್ದವರ ಮೇಲೆ ದಾಳಿ ನಡೆಸಲು ಹೋದ ವೇಳೆ, ಕುಡಿದ ಅಮಲಿನಲ್ಲಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಯಾರೇ ಆಗಿರಲಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಪಾಲನೆಗೆ ಹೋದವರ ಮೇಲೆ ಹಲ್ಲೆ ಸರಿಯಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ