ಮುಂಬಯಿ ಉದ್ಯಮಿಯಿಂದ ರೇಪ್ : ಬಾಲಿವುಡ್ ತಾರೆ ದೂರು
Team Udayavani, Mar 23, 2018, 4:10 PM IST
ಮುಂಬಯಿ : ಬಾಲಿವುಡ್ನ ಪ್ರಮುಖ ಮತ್ತು ಹಿರಿಯ ನಟಿಯೊಬ್ಬರು ಮುಂಬಯಿಯ ಉದ್ಯಮಿಯೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಜುಹೂ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ ಪೊಲೀಸರು ಆರೋಪಿ ಉದ್ಯಮಿಯನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಆರೋಪಿ ಉದ್ಯಮಿಯನ್ನು ರಿಮಾಂಡ್ಗೆ ಪಡೆಯಲು ಆತನನ್ನು ಕೋರ್ಟಿಗೆ ಹಾಜರುಪಡಿಸುವುದಾಗಿ ಅವರು ಹೇಳಿದ್ದಾರೆ.
ಆರೋಪಿ ಉದ್ಯಮಿಯು ಕಳೆದ ಒಂದು ತಿಂಗಳಿಂದ ನನ್ನ ಬೆನ್ನಿಗೆ ಬಿದ್ದು ಪೀಡಿಸುತ್ತಿದ್ದ ಮತ್ತು ತನಗೆ ಬೆದರಿಕೆ ಹಾಕುತ್ತಿದ್ದ; ನನಗೆ ವಾಟ್ಸಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ; ನನ್ನ ಮನೆಯ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿ ಆತ ನನ್ನ ಮನೆಯನ್ನೂ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಹಿರಿಯ ನಟಿ ದೂರಿದ್ದಾರೆ.
ಮುಂಬಯಿ ಪೊಲೀಸರು ಆರೋಪಿ ಉದ್ಯಮಿಯ ವಿರುದ್ಧ ಐಪಿಸಿ ಸೆ.376,420,465,467,468, 469,471 ಮತ್ತು 504ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದು ಬಾಲಿವುಡ್ ಅನ್ನು ಕಾಡಿರುವ ತಾಜಾ ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳದ ಕೇಸ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ