ಇಪಿಎಫ್ ಎಂದರೆ ಏನು ಗೊತ್ತಾ?


Team Udayavani, Mar 26, 2018, 4:45 PM IST

26-March-16.jpg

ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಹಣ ಉಳಿಸುವ ದಾರಿ ಯಾವುದು ಅಂತ ಯೋಚಿರುತಾರೆ. ಅದಕ್ಕಾಗಿ ಆರ್‌ಡಿ, ಎ ಫ್ ಡಿಗಿಂತ ಮೇಲು ಈ ಇಪಿಎಫ್ (Employees Provident Fund).

ಇದಕ್ಕೆ ಇಪಿಎಫ್ ಆಕ್ಟ್  1952 ಎನ್ನುವ ಪ್ರತ್ಯೇಕ ಶಾಸನವಿದೆ. ಇದರನ್ವಯ ಸರಕಾರವು ಎಂಪ್ಲಾಯೀಸ್‌ ಪ್ರಾವಿಡೆಂಟ್‌ ಫ‌ಂಡ್‌ ಎಂಬ ನಿಧಿಯನ್ನು ನೌಕರ ವರ್ಗದ ಭವಿಷ್ಯ ಕಲ್ಯಾಣಕ್ಕಾಗಿ ಸ್ಥಾಪಿಸಿತು. ಇದು ಸರಕಾರಿ ಹಾಗೂ ಖಾಸಗಿ ಕ್ಷೇತ್ರದ ನೌಕರರಿಗೆ ಸಮಾನವಾಗಿ ಅನ್ವಯಿಸುವ ಸೌಲಭ್ಯ. ಇದು ನಿಮ್ಮ ಕಂಪೆನಿಯೊಳಗೆ ಸಂಬಳದಿಂದ ಕಡಿತಗೊಂಡು ವೃದ್ಧಿಯಾಗುವ ಫ‌ಂಡ್‌. ಹೊರಗೆ ಸ್ಟೇಟ್‌ ಬ್ಯಾಂಕ್‌/ ಪೋಸ್ಟ್‌ ಆಫೀಸ್‌ ನಲ್ಲಿ ಸಾರ್ವಜನಿಕರಿಗಾಗಿ ದೊರೆಯುವ ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌ಗಿಂತ ಭಿನ್ನ.

ಯಾರ ಹಣ ಹೂಡಬಹುದು?
ಒಂದು ಸಂಸ್ಥೆಯಲ್ಲಿ ಪಿಎಫ್ ಕಡಿತ ಮಾಡಬೇಕಾದರೆ 20ಕ್ಕೂ ಹೆಚ್ಚು ಉದ್ಯೋಗಿಗಳು ಇರಬೇಕಾದದ್ದು ಕಡ್ಡಾಯ. ಅದಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಪಿಎಫ್ ನಿಧಿ ಅನುಷ್ಠಾನ ಕಡ್ಡಾಯವಲ್ಲ. ಅಲ್ಲದೆ, ಮಾಸಿಕ ಸಂಬಳ 15,000 (ಬೇಸಿಕ್‌+ಡಿ.ಎ.) ರೂ. ಗಿಂತ ಜಾಸ್ತಿ ಇರುವ ಉದ್ಯೋಗಿಗಳ ಮೇಲೆ ಕೂಡ ಈ ಸ್ಕೀ ಮ್‌ ಕಡ್ಡಾಯವಲ್ಲ. ಈ ಮಿತಿಯ ಒಳಗೆ ವೇತನ ಪಡೆಯುವ ವರ್ಗಕ್ಕೆ ಮಾತ್ರ ಈ ಸ್ಕೀಮ್‌ ಕಡ್ಡಾಯ.

ಸರಕಾರದ ಕಾನೂನುಗಳು ದುರ್ಬಲ ವರ್ಗದವರನ್ನು ರಕ್ಷಿಸುವ ದೃಷ್ಟಿಯಿಂದ ಮಾಡಿದ್ದಾಗಿರುತ್ತವೆ. ಆದರೂ ಬಹುತೇಕ ಉತ್ತಮ ಕಂಪೆನಿಗಳು ತಮ್ಮ ಎಲ್ಲ ಉದ್ಯೋಗಿಗಳಿಗೂ ಪಿಎಫ್ ಕಡಿತವನ್ನು ಐಚ್ಛಿಕವಾಗಿಯಾದರೂ ಮಾಡುತ್ತಿವೆ. ಇದು ಏಕೆಂದರೆ, ಪ್ರಾವಿಡೆಂಟ್‌ ಫ‌ಂಡ್‌ ಎಂಬುದು ಭವಿಷ್ಯಕ್ಕಾಗಿ ಮಾಡುವಂತಹ ಒಂದು ಉತ್ತಮವಾದ ಉಳಿತಾಯ ಯೋಜನೆ. ನಿಗದಿತ, ಕರಮುಕ್ತ ಆದಾಯಕ್ಕೆ ಪಿಎಫ್ನಷ್ಟು ಪ್ರಶಸ್ತವಾದ ಹೂಡಿಕೆ ಇನ್ನೊಂದಿಲ್ಲ.

ಸಂಘಟಿತ ಉದ್ಯಮಗಳಿಗೆ ಈ ಕಾನೂನು ಕಟ್ಟುನಿಟ್ಟಾಗಿ ಅನ್ವಯಿಸುವುದಾದರೂ ಅಸಂಘಟಿತ ಕ್ಷೇತ್ರದ ಬಹುಪಾಲು ಕಾರ್ಮಿಕರಿಗೆ ಈ ಸೌಲಭ್ಯ ಇನ್ನೂ ದೊರಕುತ್ತಿಲ್ಲ ಎನ್ನುವುದು ದುಃಖದ ವಿಚಾರ. ಅಂಥವರಿಗೆ ಬ್ಯಾಂಕ್‌/ ಪೋಸ್ಟ್‌ ಆಫೀಸಿನ ಪಿಪಿಎಫ್ ಒಂದು ಪರ್ಯಾಯ.

ವೇತನದ (ಬೇಸಿಕ್‌ ಮತ್ತು ಡಿಎ) ಶೇ. 12ರಷ್ಟ ನ್ನು ಉದ್ಯೋಗಿಯ ಸಂಬಳದಿಂದ ಕಡಿದು ಈ ನಿಧಿಗೆ ‘ಅಕೌಂಟ್‌ ಎ’ ಅಡಿಯಲ್ಲಿ ಸಂಪೂರ್ಣವಾಗಿ ಜಮೆ ಮಾಡಲಾಗುತ್ತದೆ. ಅದಲ್ಲದೆ ಉದ್ಯೋಗದಾತನ ವತಿಯಿಂದಲೂ ಕೂಡ ಪ್ರತ್ಯೇಕವಾಗಿ ಇನ್ನೊಂದು ಶೇ. 12 ಕಡಿತಗೊಳಿಸಿ ‘ಅಕೌಂಟ್‌ ಬಿ’ ಅಡಿಯಲ್ಲಿ ಉದ್ಯೋಗಿಯ ಪಿಎಫ್ ಖಾತೆಗೆ ಸೇರಿಸಲಾಗುತ್ತದೆ.

ಹಾಗಾಗಿ ಒಟ್ಟು ಜಮೆ ಶೇ. 24. ನಿಜ ಹೇಳಬೇಕಾದರೆ, ನಾವು ಶೇ. 24 ಎಂದು ಹೇಳುತ್ತೇವಾದರೂ ಅಸಲಿಗೆ ನಮ್ಮ ಪಿಎಫ್ ಖಾತೆಗೆ ಶೇ. 24ರಷ್ಟು ಸಂಪೂರ್ಣವಾಗಿ ಜಮೆಯಾಗುವುದಿಲ್ಲ. ನಿಮ್ಮ ಶೇ. 12ರಷ್ಟು ಸಂಪೂರ್ಣವಾಗಿ ಪಿಎಫ್ ಖಾತೆಗೆ ಜಮೆಯಾದರೂ ಕೂಡ ಉದ್ಯೋಗದಾತರ ಶೇ. 12ರಲ್ಲಿ ಎರಡು ಭಾಗಗಳಿವೆ. ಮೊತ್ತಮೊದಲನೆಯ ಭಾಗ ಸಂಬಳದ ಶೇ. 8.33 (ಗರಿಷ್ಠ, ಸಂಬಳ ರೂ 15,000 ಮಿತಿಯೊಳಗೆ ಅಂದರೆ, ಗರಿಷ್ಠ ದೇಣಿಗೆ ರೂ. 1,250) ಇಪಿಎಫ್ಒ ಅಡಿಯಲ್ಲಿಯೇ ಬರುವ ಒಂದು ಪೆನ್ಶನ್‌ನ ಉಪಖಾತೆಗೆ ಹೋಗುತ್ತದೆ. ಎಂಪ್ಲಾಯ್‌ ಪೆನ್ಶನ್‌ ಸ್ಕೀಮ್‌ ಅಥವಾ ‘ಇಪಿಎಸ್‌’ ಎನ್ನುವ ಈ ಸ್ಕೀಮ್‌ ನಿವೃತ್ತಿಯ ಬಳಿಕ ಸಿಗುವ ಪೆನ್ಶನ್‌ ಗಾಗಿ ಮೀಸಲಾಗಿದೆ. ಹಾಗಾಗಿ ಇಪಿಎಫ್ನಲ್ಲಿ ಪೆನ್ಶನ್‌ ದೇಣಿಗೆಯಾದ ಶೇ. 8.33 ಅಥವಾ ಗರಿಷ್ಠ ರೂ. 1,250 ಕಳೆದು ಉಳಿದ ಮೊತ್ತ ಅಂದರೆ ಶೇ.3.67 (ಗರಿಷ್ಠ ಸಂಬಳ ರೂ. 15,000 ಮಿತಿಯೊಳಗೆ ಅಂದರೆ ಗರಿಷ್ಠ ದೇಣಿಗೆ ರೂ. 550) ಮಾತ್ರ ಪಿಎಫ್ನ ‘ಅಕೌಂಟ್‌ ಬಿ’ ಗೆ ಜಮೆಯಾಗುತ್ತದೆ. 

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.