ತೆಕ್ಕಟ್ಟೆ : ವಾಹನ ತಪಾಸಣೆ ಕೇಂದ್ರ ಆರಂಭ:ಸಿಸಿ ಕೆಮರಾ ಕಣ್ಗಾವಲು!
Team Udayavani, Apr 2, 2018, 6:50 AM IST
ತೆಕ್ಕಟ್ಟೆ : ಕರ್ನಾಟಕ ವಿಧಾನ ಸಭಾ ಚುನಾವಣೆ ಮೇ 12ರಂದು ನಡೆಯುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ತೆಕ್ಕಟ್ಟೆ ರಾ.ಹೆ. 66ರ ಪ್ರಮುಖ ಭಾಗದಲ್ಲಿ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ಕೇಂದ್ರವು ಮಾ. 27ರಂದು ಆರಂಭಗೊಂಡಿದೆ.
ಸಿಸಿ ಕೆಮರಾ ಕಣ್ಗಾವಲು
ರಾ.ಹೆ. 66ರಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿ ಸಂಪೂರ್ಣ ವಿವರ ಪಡೆಯಲಾಗುವುದು. ಅನುಮಾನ ಕಂಡು ಬರುವ ವಾಹನ,ಪ್ರಯಾಣಿಕರನ್ನು ಪ್ರತ್ಯೇಕವಾಗಿ ತಪಾಸಣೆ ಮಾಡುವ ನಿಟ್ಟಿನಿಂದ ವಿಶೇಷ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ದಿನದ 24 ಗಂಟೆಗಳ ಕಾಲ ತಪಾಸಣ ಕಾರ್ಯಾಚರಣೆ ನಡೆಸುವುದರಿಂದ ರಾ.ಹೆ. 66ರಲ್ಲಿ ಗುಣಮಟ್ಟದ 2 ಸಿಸಿ ಕೆಮರಾ ಅಳವಡಿಸಲಾಗಿದ್ದು ವಾಹನಗಳ ಚಲನ ವಲನಗಳ ಮೇಲೆ ನಿಗಾ ಇರಿಸಲಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್ ಕಾಯ್ಕಿಣಿ ತಿಳಿಸಿದ್ದಾರೆ.
ಟ್ರಾಫಿಕ್ ಜಾಮ್
ತಪಾಸಣೆ ಸಂದರ್ಭ ವಾಹನಗಳು ಕುಂಭಾಸಿಯ ವರೆಗೆ ಸಾಲುಗಟ್ಟಿ ನಿಲ್ಲುವುದರಿಂದ ಕೆಲವೊಮ್ಮೆ ಆ್ಯಂಬುಲೆನ್ಸ್ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಇಲಾಖೆ ಗಮನಹರಿಸಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಿಬಂದಿ ಕೊರತೆ !
ಉಡುಪಿ ಜಿಲ್ಲೆಯಲ್ಲಿಯೇ ಕೋಟ ಪೊಲೀಸ್ ಠಾಣಾ ವ್ಯಾಪ್ತಿ ಅತ್ಯಂತ ಡೊಡ್ಡದಾಗಿದ್ದು ಈಗಾಗಲೇ ಠಾಣೆಯಲ್ಲಿ 8 ಮಂದಿ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2 ಪೊಲೀಸ್ ಸಿಬಂದಿಗಳು ಗುಪ್ತ ವಾರ್ತೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ, ಇನ್ನುಳಿದ ಸಿಬಂದಿಗಳು ಠಾಣೆಯಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇಲ್ಲಿ ವಾಹನ ತಪಾಸಣ ಕೇಂದ್ರ ತೆರೆದಿದ್ದರೂ ಪೊಲೀಸ್ ಸಿಬಂದಿ ಕೊರತೆ ನಡುವೆ ಹೆಚ್ಚುವರಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಪೊಲೀಸರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್