11ರಂದು ನಿತೀಶ್ ಬೆಂಗಳೂರಿಗೆ
Team Udayavani, Apr 7, 2018, 6:00 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸಂಯುಕ್ತ ಜನತಾದಳ (ಜೆಡಿಯು) ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿರುವುದರಿಂದ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ.11ರಂದು ಬೆಂಗಳೂರಿಗೆ ಬರಲಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಝಾ, ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನಿತೀಶ್ ಕುಮಾರ್, ಮಧ್ಯಾಹ್ನ 3 ಗಂಟೆಗೆ ವೈಯಾಲಿಕಾವಲ್ನ ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆಂದು ಹೇಳಿದರು. ನಿತೀಶ್ ಕುಮಾರ್
ಬಂದು ಹೋದ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.