ಸಂಸತ್‌ ಕಲಾಪಹರಣ : ಚರ್ಚೆ ಇಲ್ಲದೆ 250 ಗಂಟೆ ಸಮಯ ವ್ಯರ್ಥ

Team Udayavani, Apr 7, 2018, 5:10 AM IST

Session-6-4.jpg

ಹೊಸದಿಲ್ಲಿ: ಸಂಸತ್‌ ನ ಬಜೆಟ್‌ ಅಧಿವೇಶನದ ಎರಡನೇ ಚರಣ ಶುಕ್ರವಾರಕ್ಕೆ ಅಂತ್ಯವಾಗಿದ್ದು, ಹೆಚ್ಚು ಕಡಿಮೆ ಸಂಪೂರ್ಣ ವ್ಯರ್ಥವಾಗಿದೆ. ‘ಕಲಾಪ ಹರಣ’ಕ್ಕೆ ವಿಪಕ್ಷ ಕಾರಣ ಎಂದು ಬಿಜೆಪಿ ಆರೋಪಿಸಿದ್ದರೆ, ಆಡಳಿತ ಪಕ್ಷವೇ ಕಾರಣ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಶುಕ್ರವಾರ ಲೋಕಸಭೆ ಮತ್ತು ರಾಜ್ಯಸಭೆಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡುತ್ತಿದ್ದಂತೆ, ಸದನದಿಂದ ಆಚೆ ಬಂದ ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಾಮುಖಿಯಾಗಿ ನಿಂತು ಪ್ರತಿಭಟನೆ ನಡೆಸಿವೆ.

ಮಾ.5ರಂದು ಆರಂಭವಾದ ಬಜೆಟ್‌ ಅಧಿವೇಶನದ ಎರಡನೇ ಭಾಗ ಸರಿಯಾಗಿ ನಡೆಯಲೇ ಇಲ್ಲ. ಈ ಬಾರಿ ಒಟ್ಟಾರೆ ನಡೆದದ್ದು, ಕೇವಲ 124 ನಿಮಿಷ ಮಾತ್ರ. ಅಂದರೆ 22 ದಿನಗಳಲ್ಲಿ ಸರಿಸುಮಾರು 250 ಗಂಟೆ ಸಂಪೂರ್ಣವಾಗಿ ವ್ಯರ್ಥವಾಗಿದೆ. 2000ನೇ ಇಸವಿಯ ಅನಂತರ ಈ ಪ್ರಮಾಣದಲ್ಲಿ ಕಲಾಪದ ಸಮಯ ಹರಣವಾಗಿದ್ದು ಈಗಲೇ. ಈ ಹಿಂದೆ 2011ರಲ್ಲಿ 2ಜಿ ಸ್ಪೆಕ್ಟ್ರಂ ಹಗರಣದ ಕುರಿತಾಗಿ ಭಾರೀ ಗದ್ದಲವುಂಟಾದರೂ ಆಗಿನ ಯುಪಿಎ ಸರಕಾರ ಜಂಟಿ ಸಂಸದೀಯ ಸಮಿತಿ ರಚಿಸಿ ಸದನ ಸರಿಯಾಗಿ ನಡೆಯಲು ಅನುವು ಮಾಡಿಕೊಟ್ಟಿತ್ತು.

ಹೋರಾಟ-ಪ್ರತಿ ಹೋರಾಟ:
ಅಧಿವೇಶನ ಕೊಚ್ಚಿ ಹೋದರೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ವಾಕ್ಸಮರ ತಣ್ಣಗಾಗಿಲ್ಲ. ಕಲಾಪ ವ್ಯರ್ಥವಾಗಲು ವಿಪಕ್ಷಗಳೇ ಕಾರಣ ಎಂದು ಬಿಂಬಿಸುವ ಸಲುವಾಗಿ ಬಿಜೆಪಿ ಎ.12ರಂದು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ. ಅಂದು ಬಿಜೆಪಿಯ ಎಲ್ಲ ಸಂಸದರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್‌ನ ವಿಭಜನಾತ್ಮಕ ಮತ್ತು ನಕಾರಾತ್ಮಕ ರಾಜಕೀಯವನ್ನು ಜನರ ಮುಂದಿಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಎ.9ರಂದು ದೇಶಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದೆ. ಎಲ್ಲ ಜಿಲ್ಲಾ ಹಾಗೂ ರಾಜ್ಯ ಕಚೇರಿಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಕಲಾಪ ವ್ಯರ್ಥವಾಗಲು ಕಾಂಗ್ರೆಸ್‌ ಕಾರಣ ಎಂದು ಹೇಳಿದ್ದ ಸಚಿವ ಅನಂತ್‌ಕುಮಾರ್‌ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ.

ಕಡೇ ದಿನವೂ ಹೋರಾಟ: ಕೊನೆಯ ದಿನವಾದ ಶುಕ್ರವಾರವೂ ವಿಪಕ್ಷಗಳ ಸಂಸದರು ಗದ್ದಲ ನಡೆಸಿದ್ದರು. ಕಲಾಪ ಮುಗಿದು ಅಧಿವೇಶನ ಮುಕ್ತಾಯವಾಗುತ್ತಿದ್ದಂತೆ ಗಾಂಧಿ ಪ್ರತಿಮೆಯ ಎದುರು ನಿಂತು ಬಿಜೆಪಿ ಹಾಗೂ ವಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದವು. ಕಲಾಪ ನಡೆಯುವುದಕ್ಕೆ ಕಾಂಗ್ರೆಸ್‌ ಅವಕಾಶ ನೀಡಲಿಲ್ಲ ಎಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆಕ್ಷೇಪಿಸಿತು. ಪ್ರಧಾನಿ ಮೋದಿಗೆ 21 ರಾಜ್ಯಗಳು ನೀಡಿದ ಬಹುಮತವನ್ನು ಕಾಂಗ್ರೆಸ್‌ನಿಂದ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇನ್ನೊಂದೆಡೆ ಅಧಿವೇಶನದ ಕೊನೆಯ ದಿನ ಸಂಪ್ರದಾಯದಂತೆ ಸ್ಪೀಕರ್‌ ನಡೆಸುವ ಚಹಾ ಕೂಟಕ್ಕೆ ಕಾಂಗ್ರೆಸ್‌ ನಾಯಕರು ಹಾಜರಾಗಲಿಲ್ಲ. ಶುಕ್ರವಾರ ಬೆಳಗ್ಗೆ ಚಹಾಕೂಟಕ್ಕೆ ಎಲ್ಲ ಕಾಂಗ್ರೆಸ್‌ ಸಂಸದರು ಗೈರಾಗಿದ್ದರು.

ಯಾಕಾಗಿ ಪ್ರತಿಭಟನೆ?: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಇಟ್ಟು ತೆಲಗು ದೇಶಂ ಪಕ್ಷ ಪ್ರತಿಭಟನೆ ನಡೆಸಿದರೆ, ಬ್ಯಾಂಕ್‌ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್‌ ಪಟ್ಟು ಹಿಡಿಯಿತು. ಇನ್ನೊಂದೆಡೆ ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಯಾಗಬೇಕು ಎಂದು ಎಐಎಡಿಎಂಕೆ ಸಂಸದರು ಪ್ರತಿಭಟನೆ ನಡೆಸಿದರು. ಇದರ ಜತೆಗೇ ತಮಿಳುನಾಡು ಹಾಗೂ ಇತರೆಡೆಗಳಲ್ಲಿ ಪ್ರತಿಮೆಗಳ ಧ್ವಂಸ, ಪ.ಜಾ/ಪ.ಪಂ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪು, ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸೇರಿ ವಿವಿಧ ವಿಷಯಗಳ ಬಗ್ಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಐವರು ಸಂಸದರ ರಾಜೀನಾಮೆ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿರುವ ಕೇಂದ್ರ ಸರಕಾರದ ಕ್ರಮಕ್ಕೆ ಪ್ರತಿಭಟನೆ ರೂಪವಾಗಿ ವೈಎಸ್‌ಆರ್‌ ಕಾಂಗ್ರೆಸ್‌ನ ಐವರು ಸಂಸದರು ರಾಜೀನಾಮೆ ನೀಡಿದ್ದಾರೆ. ಕಲಾಪ ಮುಗಿಯುತ್ತಿದ್ದಂತೆಯೇ ಸ್ಪೀಕರ್‌ ಸುಮಿತ್ರಾ ಮಹಾಜನ್‌ಗೆ ರಾಜೀನಾಮೆ ಪತ್ರವನ್ನು ಅವರು ಹಸ್ತಾಂತರಿಸಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಈಗ ಟಿಡಿಪಿ ಸಂಸದರೂ ರಾಜೀನಾಮೆ ನೀಡಲಿ. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಗೆ ಇನ್ನಷ್ಟು ಬಲ ನೀಡಲಿ ಎಂದು ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ವೈ.ಎಸ್‌.ಆರ್‌. ಕಾಂಗ್ರೆಸ್‌ ಮುಖಂಡ ಜಗನ್‌ ಮೋಹನ ರೆಡ್ಡಿ, ಎನ್‌.ಡಿ.ಎ. ಸರಕಾರ ಈ ವಿಚಾರದಲ್ಲಿ ವಿಫ‌ಲವಾಗಿರುವುದರಿಂದ ಈ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.

ಕಾವೇರಿ ಜಲ ನಿರ್ವಹಣ ಮಂಡಳಿ ಬೇಡ
ಯಾವುದೇ ಕಾರಣಕ್ಕೂ ಕೇಂದ್ರ ಸರಕಾರ ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸಬಾರದು ಎಂದು ಆಗ್ರಹಿಸಿ ಕರ್ನಾಟಕದ ಕೆಲವು ಕಾಂಗ್ರೆಸ್‌ ಸಂಸದರು ಲೋಕಸಭೆ ಮುಂದೆ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.

375 ಕೋಟಿ ರೂ. ವ್ಯರ್ಥ
ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಚರ್ಚೆಗೆ ನಿಗದಿಯಾಗಿದ್ದ ಸಮಯ 250 ಗಂಟೆ. ಈ ಅವಧಿಗೆ ಸರಕಾರ ಮಾಡಿರುವ ವೆಚ್ಚ  375 ಕೋಟಿ ರೂ. ಅಂದರೆ, ಅಧಿವೇಶನದ ವೇಳೆ ಸಂಸದರ ಎಲ್ಲ ಖರ್ಚು ವೆಚ್ಚಗಳನ್ನು ಸೇರಿಸಿ ಪ್ರತಿ ನಿಮಿಷಕ್ಕೆ 2.5 ಲಕ್ಷ ರೂ.ಗಳಂತೆ ಹಣವನ್ನು ತೆಗೆದಿರಿಸಲಾಗಿರುತ್ತದೆ. ಕಲಾಪ ನಡೆಯಲಿ, ನಡೆಯದೆ ಇರಲಿ ಇಷ್ಟು ಹಣ ಖರ್ಚಾಗಿಯೇ ಆಗುತ್ತದೆ. ಹೀಗಾಗಿ ಎನ್‌.ಡಿ.ಎ. ಸಂಸದರು ಜನರ ಹಣವನ್ನು ಪೋಲು ಮಾಡುವುದಿಲ್ಲ ಎಂದು ಬಿಂಬಿಸುವ ಸಲುವಾಗಿ ಬಜೆಟ್‌ ಅಧಿವೇಶನದ ಅವಧಿಯ ಸಂಪೂರ್ಣ ವೇತನ ನಿರಾಕರಿಸುವುದಾಗಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.