ಶಿವಣ್ಣ ರುಸ್ತುಂಗೆ ಫೋಟೋಶೂಟ್‌


Team Udayavani, Apr 8, 2018, 11:24 AM IST

Rustom-Photo-Shoot.jpg

ಶಿವರಾಜಕುಮಾರ್‌ ಅವರು ಒಪ್ಪಿಕೊಂಡಿರುವ ಎರಡು ಪ್ರಮುಖ ಚಿತ್ರಗಳು ಮುಗಿಯುತ್ತಾ ಬಂದಿವೆ. “ದಿ ವಿಲನ್‌’ ಹಾಗೂ “ಕವಚ’ ಚಿತ್ರಗಳು ಮುಗಿಯುವ ಹಂತಕ್ಕೆ ಬಂದಿದ್ದು, ಶಿವರಾಜಕುಮಾರ್‌ ಅವರ ಹೊಸ ಚಿತ್ರಗಳು ಮುಂದಿನ ದಿನಗಳಲ್ಲಿ ಪ್ರಾರಂಭವಾಗಲಿವೆ. ಈ ಪೈಕಿ ಮೊದಲನೆಯದಾಗಿ “ರುಸ್ತುಂ’ ಶುರುವಾಗಲಿದ್ದು, ಅದಕ್ಕೂ ಮುನ್ನ ಇತ್ತೀಚೆಗೆ ಚಿತ್ರದ ಫೋಟೋ ಶೂಟ್‌ ಸಹ ನಡೆದಿದೆ.

ಹೌದು, “ರುಸ್ತುಂ’ ಚಿತ್ರದ ಫೋಟೋ ಶೂಟ್‌ ಇತ್ತೀಚೆಗೆ ನಗರದ ಮಿನರ್ವ ಮಿಲ್ಸ್‌ನಲ್ಲಿ ನಡೆದಿದೆ. “ಟಗರು’ ಚಿತ್ರದ ಛಾಯಾಗ್ರಹಣ ಮಾಡಿದ್ದ ಮಹೇಂದ್ರ ಸಿಂಹ, ಈ ಫೋಟೋ ಶೂಟ್‌ ಮಾಡಿದ್ದಾರೆ. ಈ ಫೋಟೋ ಶೂಟ್‌ನಲ್ಲಿ ಶಿವರಾಜಕುಮಾರ್‌ ಹಾಗೂ ಇತರರು ಭಾಗವಹಿಸಿದ್ದಾರೆ. ಸದ್ಯಕ್ಕೆ ಚಿತ್ರದ ಸ್ಟಿಲ್‌ಗ‌ಳನ್ನು ಗೌಪ್ಯವಾಗಿಡಲಾಗಿದ್ದು, ಡಾ. ರಾಜಕುಮಾರ್‌ ಅವರ ಹುಟ್ಟುಹಬ್ಬವಾದ ಏಪ್ರಿಲ್‌ 24ರಂದು ಚಿತ್ರದ ಮೊದಲ ಲುಕ್‌ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

“ರುಸ್ತುಂ’ ಚಿತ್ರವನ್ನು ಜಯಣ್ಣ ಕಂಬೈನ್ಸ್‌ನಡಿ ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸುತ್ತಿದ್ದು, ಈ ಸಂಸ್ಥೆಗೆ ಶಿವರಾಜಕುಮಾರ್‌ ಮಾಡುತ್ತಿರುವ ಮೂರನೆಯ ಚಿತ್ರ ಇದಾಗಿದೆ. ಇದಕ್ಕೂ ಮುನ್ನ ಜಯಣ್ಣ ಫಿಲಮ್ಸ್‌ನ “ಬಂಗಾರ – ಸನ್‌ ಆಫ್ ಬಂಗಾರದ ಮನುಷ್ಯ’ ಹಾಗೂ “ಮಫ್ತಿ’ ಚಿತ್ರಗಳಲ್ಲಿ ಶಿವರಾಜಕುಮಾರ್‌ ನಟಿಸಿದ್ದರು. ಈಗ ಇದೇ ಸಂಸ್ಥೆಯ “ರುಸ್ತುಂ ಚಿತ್ರದಲ್ಲೂ ಶಿವರಾಜಕುಮಾರ್‌ ನಟಿಸಲಿದ್ದಾರೆ. ಈ ಚಿತ್ರವನ್ನು ಸಾಹಸ ನಿರ್ದೇಶಕ ಕೆ. ರವಿವರ್ಮ ಅವರು ನಿರ್ದೇಶಿಸಲಿದ್ದಾರೆ.

ಈ ಹಿಂದೆಯೇ, ರವಿವರ್ಮ ನಿರ್ದೇಶಕರಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಅವರ ನಿರ್ದೇಶನ ತಡವಾಗಿತ್ತು. ಈಗ ಕೊನೆಗೂ ಶಿವರಾಜಕುಮಾರ್‌ ಅಭಿನಯದಲ್ಲಿ ರವಿವರ್ಮ ಚಿತ್ರ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್‌ ಎದುರು ಮಯೂರಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯದಲ್ಲೇ ಇನ್ನುಳಿದ ಕಲಾವಿದರು ಹಾಗೂ ತಂತ್ರಜ್ಞರ ಪಟ್ಟಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.