371 (ಜೆ) ಕೊಡುಗೆ ಬಗ್ಗೆ ಯುವಕರಿಗೆ ಅರಿವಿಲ್ಲ

Team Udayavani, Apr 8, 2018, 5:11 PM IST

ray-1.jpg

ರಾಯಚೂರು: ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡಿದ 371 (ಜೆ) ವಿಶೇಷ ಸ್ಥಾನಮಾನದ ಕೊಡುಗೆ ಬಗ್ಗೆ ಸಾಕಷ್ಟು ಯುವಕರಿಗೆ ಸೂಕ್ತ ಮಾಹಿತಿಯೇ ಇಲ್ಲ. ಅದೊಂದು ಅವಕಾಶವಾಗಿದ್ದು, ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಲಬುರಗಿ ವಿವಿ ಉಪಕುಲಪತಿ ಎಸ್‌.ಆರ್‌.ನಿರಂಜನ ಹೇಳಿದರು.

ಥಾಮಸ್‌ ಪದವಿ ಕಾಲೇಜಿನಿಂದ ಶನಿವಾರ ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಹೈದರಾಬಾದ್‌ ಕರ್ನಾಟಕ ಭಾಗದ ಸಂವಿಧಾನದ 371(ಜೆ) ಕಾಯ್ದೆಯ ಅವಕಾಶಗಳು ಹಾಗೂ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ವಿಶೇಷ ಸ್ಥಾನಮಾನ ನಿಮಗೆ ಸಿಕ್ಕ ಸೌಲಭ್ಯವಲ್ಲ; ಅದು ನಿಮ್ಮ ಹಕ್ಕು. ಅವಕಾಶಗಳು ಹುಡುಕಿಕೊಂಡು ಬರುವ ಕಾಲ ಇದಲ್ಲ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವವನೇ ಬುದ್ಧಿವಂತ. ಈ ಸೌಲಭ್ಯದ ಬಗ್ಗೆ ಮೊದಲು ಅರಿತುಕೊಳ್ಳಬೇಕು. ಹೈ-ಕ ಭಾಗದ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಸ್ಥಾನ ಮೀಸಲಿದ್ದರೂ ಪಡೆಯುತ್ತಿಲ್ಲ. ಪಕ್ಕದ ಜಿಲ್ಲೆಗಳಲ್ಲೇ ಶಿಕ್ಷಣ ಪಡೆಯದವರು ವಿದೇಶಕ್ಕೆ ಹೋಗಿ ಓದುವುದು ಯಾವಾಗ ಎಂದು ಪ್ರಶ್ನಿಸಿದರು.

ಜಾಗತಿಕ ಮಟ್ಟದ ಚಿಂತನೆಗಳನ್ನು ಬೆಳೆಸಿಕೊಳ್ಳಿ. ಕೆಎಎಸ್‌, ಐಎಎಸ್‌ನಂಥ ಹುದ್ದೆ ಅಲಂಕರಿಸಬೇಕಾದರೆ ಸತತ ಅಧ್ಯಯನ ಬೇಕು. ದಿನಕ್ಕೆ 18 ತಾಸು ಅಧ್ಯಯನ ಮಾಡಿದರೂ ಕಡಿಮೆಯೇ. ಮೊದಲು ಗುಣಮಟ್ಟದ ಶಿಕ್ಷಣ ಪಡೆಯಿರಿ. ಆಗ 371(ಜೆ) ಸೌಲಭ್ಯ ಹೇಗೆ ಬಳಸಿಕೊಳ್ಳಬೇಕು ಎಂಬುದು ಗೊತ್ತಾಗಲಿದೆ ಎಂದರು.

ಸಂವಿಧಾನ 371(ಜೆ) ಕಾಯ್ದೆಯ ಅವಕಾಶಗಳು ಹಾಗೂ ಸವಾಲುಗಳು ಎಂಬ ವಿಷಯ ಕುರಿತು ಪ್ರೊ| ಸಂಗೀತಾ ಕಟ್ಟಿಮನಿ ಮಾತನಾಡಿ, ಮುಂಚೆ ಹೈ-ಕ ಭಾಗದವರಿಗೆ ಅವಕಾಶಗಳೇ ಇಲ್ಲ ಎನ್ನುತ್ತಿದ್ದರು. ಈಗ ಹೈ-ಕ ಭಾಗದಲ್ಲೇ ಅವಕಾಶಗಳಿವೆ ಎಂಬುದು ಸತ್ಯ. ಹೈ-ಕ ಭಾಗದಲ್ಲಿ ಸಂಪನ್ಮೂಲಗಳು ಇದ್ದರೂ ಈ ಭಾಗ ಹಿಂದುಳಿದಿದೆ. ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಸಾಕಷ್ಟು ವಿಳಂಬವಾಗಿದೆ. ಆದರೆ, ಅಂದು ಸಿದ್ಧಪಡಿಸಿದ ವರದಿ ಪ್ರಕಾರ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಪುನರ್‌ ಪರಿಶೀಲನೆಗಾಗಿ ವರದಿಯಲ್ಲಿ ಅಧ್ಯಯನ ಮಾಡಬೇಕಿದೆ ಎಂದರು.

ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಲಿಸಿದರೆ ಹೈ-ಕ ಭಾಗದ ಜಿಲ್ಲೆಗಳು ಹಿಂದುಳಿದಿವೆ. ಜಿಲ್ಲೆಗಳಿಗೆ ಹೋಲಿಸಿದರೆ
ತಾಲೂಕು, ಗ್ರಾಮೀಣ ಭಾಗದಲ್ಲಿ ಸಾಕ್ಷರತೆ ಪ್ರಮಾಣ ಸಾಕಷ್ಟು ಹಿಂದುಳಿದಿದೆ. ಈ ಭಾಗದ ಜನರಿಗೆ ಅನುಕೂಲವಾಗುವ ಸಂವಿಧಾನ 371(ಜೆ) ಪ್ರಮಾಣಪತ್ರ ಪಡೆಯಬೇಕು. ಯಾವ ಸಂದರ್ಭದಲ್ಲಾದರೂ ಬಳಕೆ ಆಗಬಹುದು ಎಂದು ತಿಳಿಸಿದರು.

ರಾಯಚೂರು ವಿವಿ ವಿಶೇಷಾಧಿಕಾರಿ ಪ್ರೊ| ಮುಜಾಫರ್‌ ಅಸಾದಿ, ಗುಲ್ಬರ್ಗ ವಿವಿ ಸಿಂಡಿಕೇಟ್‌ ಸದಸ್ಯ ವಿಜಯ ಭಾಸ್ಕರ್‌ ಮಾತನಾಡಿದರು. ಕಾಲೇಜಿನ ನಿರ್ದೇಶಕ ಥಾಮಸ್‌ ಬೆಂಜಮಿನ್‌ ಅಧ್ಯಕ್ಷತೆ ವಹಿಸಿದ್ದರು. ಡಾ| ರಜಾಕ್‌ ಉಸ್ತಾದ್‌, ಮಾಜಿ ಸಿಂಡಿಕೇಟ್‌ ಸದಸ್ಯೆ ಅಕ್ಕಮಹಾದೇವಿ, ವಿಚಾರ ಸಂಕಿರಣದ ನಿರ್ದೇಶಕ ಡಾ| ತಿಪ್ಪಣ್ಣ ಕಲಮನಿ ಹಾಗೂ ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.