ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ


Team Udayavani, Apr 9, 2018, 9:40 AM IST

Voting-8-4.jpg

ಮಡಿಕೇರಿ: ಮತದಾನ ಪ್ರಕ್ರಿಯೆಯಲ್ಲಿ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಉತ್ಸಾಹದಿಂದ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕರೆ ನೀಡಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಶನಿವಾರ ನಡೆದ ಮ್ಯಾರಥಾನ್‌ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಹದಿನೆಂಟು ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾನ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನದ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಮೂಲಕ (ಸ್ವೀಪ್‌) ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ವಿವಿಧ ವಯೋಮಾನದವರಿಗೆ ಓಟ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದು ಅತ್ಯಗತ್ಯ. 8 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗುವಂತಾಗಬೇಕು. ಆ ನಿಟ್ಟಿನಲ್ಲಿ ಸೇರ್ಪಡೆ ಆಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯ ಎಲ್ಲಾ ಬೂತ್‌ ಮಟ್ಟದಲ್ಲಿ, ತಾಲೂಕು ತಹಶೀಲ್ದಾರರ ಕಚೇರಿ, ಉಪ ವಿಭಾಗಾಧಿಕಾರಿಯವರ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು  ಹೇಳಿದರು.

ಸ್ವೀಪ್‌ ಸಮಿತಿ ಸದಸ್ಯರಾದ ಮಂಜುಳಾ ಅವರು ಮಾತನಾಡಿ ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸ್ವೀಪ್‌ ಸಮಿತಿ ಸದಸ್ಯರಾದ ಮಲ್ಲೇಸ್ವಾಮಿ, ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುಂದರ್‌ ರಾಜ್‌, ಮಮ್ತಾಜ್‌, ದೇವರಾಜು, ಡಾ| ಆನಂದ್‌, ಸವಿತಾ ಇತರರು ಇದ್ದರು. ಓಟ ಸ್ಪರ್ಧೆಯು ಗಾಂಧಿ ಮೈದಾನದಿಂದ ಇಂದಿರಾ ಕ್ಯಾಂಟೀನ್‌, ಎಫ್‌.ಎಂ.ಕೆ.ಎಂ.ಸಿ. ಕಾಲೇಜಿನವರೆಗೆ ನಡೆಯಿತು. ಬಳಿಕ ಜಿಲ್ಲಾ ಪಂಚಾಯತ್‌ ಸಿಇಒ ಹಾಗೂ ಸ್ವೀಪ್‌ ಸಮಿತಿ ಅಧ್ಯಕ್ಷ ಪ್ರಶಾಂತ್‌ ಕುಮಾರ್‌ ಮಿಶ್ರ ಅವರು ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಅನಂತರ ಮಾತನಾಡಿದ ಜಿ.ಪಂ.ಸಿಇಒ ಅವರು ಮತದಾನ ಮಾಡುವುದು ಅರ್ಹರೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಮತದಾನ ಮಾಡುವಂತಾಗಬೇಕು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಕೋರಿದರು. ಓಟ ಸ್ಪರ್ಧೆಯಲ್ಲಿ 19 ರಿಂದ 40 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು, 41 ರಿಂದ 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರು, 60 ವರ್ಷ ಮೇಲ್ಪಟ್ಟ ಮಹಿಳೆ ಯರು ಮತ್ತು ಪುರುಷರು ಉತ್ಸಾಹದಿಂದ ಪಾಲ್ಗೊಂಡು ಗಮನ ಸೆಳೆದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.