12ರಂದು ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? 

Team Udayavani, Apr 10, 2018, 6:15 AM IST

Congress-700.jpg

ಬೆಂಗಳೂರು: ಎಲ್ಲ ಪಕ್ಷಗಳಿಗಿಂತಲೂ ಮೊದಲೇ ಚುನಾವಣಾ ಪ್ರಚಾರ ಆರಂಭಿಸಿದ್ದ ಆಡಳಿತಾರೂಢ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಾತ್ರ ವಿಳಂಬ ನೀತಿ ಅನುಸರಿಸುತ್ತಿದ್ದು, ಆಕಾಂಕ್ಷಿಗಳಲ್ಲಿ ತಳಮಳ ಮೂಡಿಸಿದೆ.

ಅಭ್ಯರ್ಥಿಗಳ ಆಯ್ಕೆ ಕುರಿತಂತೆ ನವದೆಹಲಿಯಲ್ಲಿ ಸೋಮವಾರ ಕಾಂಗ್ರೆಸ್‌ ಚುನಾವಣಾ ಸಮಿತಿ ಅಧ್ಯಕ್ಷ$ಮಧುಸೂಧನ್‌ ಮಿಸಿŒ ನೇತೃತ್ವದ ಆರು ಜನರ ತಂಡ ಸುದೀರ್ಘ‌ ಚರ್ಚೆ ನಡೆಸಿದೆ. ಆದರೆ, ಏ. 12ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ಹೇಳಿವೆ.

ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಚುನಾವಣಾ ಸಮಿತಿ ಆಯ್ಕೆ ಮಾಡಿ ಕಳುಹಿಸಿರುವ ಪಟ್ಟಿ ಹಾಗೂ ಹೈಕಮಾಂಡ್‌ ಇತರೆ ಮೂಲಗಳಿಂದ ಪಡೆದಿರುವ ಮಾಹಿತಿ ಆಧರಿಸಿ ಪ್ರತಿ ಕ್ಷೇತ್ರಗಳ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕಸರತ್ತು ನಡೆಸಿದೆ. ಹೀಗಾಗಿ ಪಟ್ಟಿ ವಿಳಂಬವಾಗುತ್ತಿದೆ ಎನ್ನಲಾಗಿದೆ.

120 ಜನರ ಮೊದಲ ಪಟ್ಟಿ: ಹಾಲಿ ಶಾಸಕರು ಹಾಗೂ ಗೊಂದಲಗಳಿಲ್ಲದ ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರಿರುವ ಕನಿಷ್ಠ 120 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸ್ಕ್ರೀನಿಂಗ್‌ ಕಮಿಟಿ ಆಯ್ಕೆ ಮಾಡಿದೆ. ಸೋಮವಾರ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್‌ 11 ಮತ್ತು 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ಏಪ್ರಿಲ್‌ 12 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

5000 ಒಳಗೆ ಸೋತವರಿಗೆ ಆದ್ಯತೆ: 2013ರ ವಿಧಾನಸಭೆ ಚುನಾವಣೆಯಲ್ಲಿ 5000 ಮತ್ತು ಅದಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ ಸೋತ ಅಭ್ಯರ್ಥಿಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂಬ ಅಭಿಪ್ರಾಯ ರಾಜ್ಯ ಚುನಾವಣಾ ಸಮಿತಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯರಿಂದ ವ್ಯಕ್ತವಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗ 5 ಸಾವಿರ ಮತಗಳ ಒಳಗೆ ಸೋತವರೆಲ್ಲರಿಗೂ ಟಿಕೆಟ್‌ ನೀಡಲು ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಸುಮಾರು ಮೂವತ್ತು ಅಭ್ಯರ್ಥಿಗಳು ಐದು ಸಾವಿರ ಮತಗಳ ಅಂತರದಿಂದ ಸೋತಿದ್ದರು.

ಉಳಿದ ಸುಮಾರು ಎಂಭತ್ತು ಕ್ಷೇತ್ರಗಳಲ್ಲಿ ಎರಡು- ಮೂರು ಅಭ್ಯರ್ಥಿಗಳ ಹೆಸರುಗಳಿವೆ. ಹೀಗಾಗಿ ಅವುಗಳಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಕಾರಣದಿಂದಲೇ ಅಂತಹ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇನ್ನಷ್ಟು ವಿಳಂಬವಾಗಬಹುದು ಎನ್ನಲಾಗಿದೆ.

ಸಂಸದರೊಂದಿಗೆ ಸಭೆ:
ಸ್ಕ್ರೀನಿಂಗ್‌ ಕಮಿಟಿ ಸಭೆಗೆ ಹಾಜರಾಗುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟಿಕೆಟ್‌ ಅಂತಿಮಗೊಳಿಸುವ ಮುನ್ನ ಸಂಸದರ ಅಭಿಪ್ರಾಯವನ್ನೂ ಪಡೆದುಕೊಳ್ಳಬೇಕು ಎಂದು ಎಐಸಿಸಿ ಸ್ಪಷ್ಟ ಸೂಚನೆ ನೀಡಿರುವ ಕಾರಣ ಈ ಸಭೆ ನಡೆದಿದೆ.

ದೆಹಲಿಯಲ್ಲಿ ಬೀಡುಬಿಟ್ಟ ಆಕಾಂಕ್ಷಿಗಳು
ದೆಹಲಿಯಲ್ಲಿ ಟಿಕೆಟ್‌ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಆಕಾಂಕ್ಷಿಗಳೆಲ್ಲಾ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ತಮ್ಮ ನಾಯಕರ ಮೂಲಕ ಟಿಕೆಟ್‌ ಗಿಟ್ಟಿಸಲು ಕೊನೆ ಹಂತದ ಕಸರತ್ತು ನಡೆಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರಿದಿದ್ದು, ಮಂಗಳವಾರವೂ ಸಭೆ ನಡೆದು ಅಭ್ಯರ್ಥಿಗಳ ಒಂದು ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಪಟ್ಟಿ ಪ್ರಕಟಗೊಳ್ಳಬೇಕಿದ್ದು, ಕೆಲವರು ಅದುವರೆಗೂ ದೆಹಲಿಯಲ್ಲೇ ಮೊಕ್ಕಾಂ ಹೂಡುವ ಸಾಧ್ಯತೆ ಇದೆ. ಇನ್ನು ಕೆಲವರು ಮಂಗಳವಾರ ಬೆಂಗಳೂರಿಗೆ ವಾಪಸಾಗಿ ಮತ್ತೆ ಮಾ. 11 ಅಥವಾ 12ರಂದು ದೆಹಲಿಗೆ ತೆರಳಲಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.