ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ


Team Udayavani, Apr 10, 2018, 3:57 PM IST

cta-.jpg

ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೊಳಕಾಲ್ಮೂರು ಕ್ಷೇತ್ರದಿಂದ ಹಾಲಿ ಶಾಸಕ ಎಸ್‌. ತಿಪ್ಪೇಸ್ವಾಮಿ ಅವರ ಬದಲು ಮಾಜಿ ಸಚಿವ, ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಶ್ರೀರಾಮುಲು ನೇತೃತ್ವದ ಬಿಎಸ್‌ಆರ್‌ಸಿ ಪಕ್ಷದಿಂದ ತಿಪ್ಪೇಸ್ವಾಮಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ನಂತರ ಬಿಜೆಪಿ ಸೇರಿದ್ದರು. ಆದರೆ ಈಗ ತಿಪ್ಪೇಸ್ವಾಮಿ ಅವರನ್ನು ರಾಜಕೀಯಕ್ಕೆ ಕರೆತಂದ ಶ್ರೀರಾಮುಲು ಅವರಿಗೇ ಮೊಳಕಾಲ್ಮೂರಿನಿಂದ ಸ್ಪರ್ಧಿಸುವಂತೆ ಬಿಜೆಪಿ ವರಿಷ್ಠರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಮೊಳಕಾಲ್ಮೂರು ಕ್ಷೇತ್ರದಿಂದ ತಾನು ಸ್ಪರ್ಧಿಸುವುದಿಲ್ಲ. ಕಣ್ತಪ್ಪಿನಿಂದ ಪಟ್ಟಿಯಲ್ಲಿ ನನ್ನ ಹೆಸರು ಇದೆ. ಮುಖಂಡರ ಬಳಿ ಮಾತನಾಡಿ ಎಲ್ಲವನ್ನೂ ಸರಿಪಡಿಸುವುದಾಗಿ ಸ್ವತಃ ಶ್ರೀರಾಮುಲು ತಿಪ್ಪೇಸ್ವಾಮಿಯವರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
 
ಹಿರಿಯೂರು ಕ್ಷೇತ್ರದಿಂದ ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್‌ಗೆ ಟಿಕೆಟ್‌ ಖಚಿತ ಎಂಬ ಮಾತು ಕೇಳಿಬಂದಿತ್ತು. ಆದರೆ ಅವರ ಬದಲಾಗಿ ಪತ್ನಿ ಬಿಬಿಎಂಪಿ ಸದಸ್ಯೆ ಪೂರ್ಣಿಮಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡಿದ್ದಾಗ ಟಿಕೆಟ್‌ ನೀಡುವುದಾಗಿ ಶ್ರೀನಿವಾಸ್‌ ಗೆ ಆಶ್ವಾಸನೆ ನೀಡಿದ್ದರು. ಈಗ ಅವರ ಪತ್ನಿಯನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ಕೆಲವರಲ್ಲಿ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ.
 
ಇನ್ನು ಹೊಸದುರ್ಗ ಕ್ಷೇತ್ರದಿಂದ ಇತ್ತೀಚೆಗಷ್ಟೇ ಪಕ್ಷ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಿರುವುದಕ್ಕೆ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಹಾಗೂ ಎಸ್‌. ಲಿಂಗಮೂರ್ತಿ ಅವರಲ್ಲಿ ಬೇಸರ ಉಂಟಾಗಿದೆ. ಯಡಿಯೂರಪ್ಪ ಅವರು ನವೀನ್‌ ಹಾಗೂ ಲಿಂಗಮೂರ್ತಿ ಅವರನ್ನು ಕರೆದು ಗೂಳಿಹಟ್ಟಿ ಶೇಖರ್‌ಗೆ ಟಿಕೆಟ್‌ ನೀಡುವುದಾಗಿ ತಿಳಿಸಿ ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ಗೂಳಿಹಟ್ಟಿ ಶೇಖರ್‌ ಸದನದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿ ಗರ್ಜಿಸಿದ್ದರು ಎಂಬುದಿಲ್ಲಿ ಗಮನಾರ್ಹ.

ಇನ್ನು ಚಿತ್ರದುರ್ಗ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅವರಿಗೆ ಟಿಕೆಟ್‌ ನೀಡಬಾರದು ಎಂದು ಜಿಲ್ಲಾ ಬಿಜೆಪಿ ಮುಖಂಡರು ಪಟ್ಟು ಹಿಡಿದಿದ್ದರೂ ತಿಪ್ಪಾರೆಡ್ಡಿ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಸಂಘ ಪರಿವಾರದಲ್ಲೂ ಅಸಮಾಧಾನ ಇದೆ ಎಂದು ಹೇಳಲಾಗುತ್ತಿದೆ.

ಹೊಳಲ್ಕೆರೆ-ಚಳ್ಳಕೆರೆ ಅಭ್ಯರ್ಥಿ ಘೋಷಣೆ ಬಾಕಿ: ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ ಪ್ರತಿನಿಧಿಸುತ್ತಿರುವ ಹೊಳಲ್ಕೆರೆ ಎಸ್ಸಿ ಮೀಸಲು ಕ್ಷೇತ್ರಕ್ಕಿನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿಲ್ಲ. ಈ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲೇಬೇಕೆಂಬ ಉದ್ದೇಶದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಿರಿಗೆರೆಗೆ ಭೇಟಿ ನೀಡಿ ತರಳಬಾಳು ಜಗದ್ಗುರುಗಳೊಂದಿಗೆ ಚರ್ಚಿಸಿದ್ದರು.

ಹೊಳಲ್ಕೆರೆ ಮಾಜಿ ಶಾಸಕ ಎಂ. ಚಂದ್ರಪ್ಪ ಅವರಿಗೆ ಟಿಕೆಟ್‌ ಅಂತಿಮ ಎನ್ನಲಾಗುತ್ತಿತ್ತು. ಆದರೆ ಇದಕ್ಕೆ ಮಾಜಿ ಶಾಸಕ ರಮೇಶ್‌ ಹಾಗೂ ಅವರ ಪುತ್ರ ಶಿವಕುಮಾರ್‌ ಅಡ್ಡಗಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹನುಮಕ್ಕ ಮತ್ತಿತರರು ಬಿಜೆಪಿ ಟಿಕೆಟ್‌ಗಾಗಿ ಯತ್ನ ನಡೆಸುತ್ತಿರುವುದು ಎಂ. ಚಂದ್ರಪ್ಪಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ. ಚಳ್ಳಕೆರೆ ಕ್ಷೇತ್ರದ ಟಿಕೆಟ್‌ ಯಾರಿಗೆ ನೀಡಲಾಗುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ.

ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಲಹೆ: ಚಳ್ಳಕೆರೆ ತಾಲೂಕಿನ ನೇರಲಗುಂಟೆಯಲ್ಲಿರುವ ಮೊಳಕಾಲ್ಮೂರು
ಶಾಸಕ ಎಸ್‌. ತಿಪ್ಪೇಸ್ವಾಮಿ ಮನೆಗೆ ಸೋಮವಾರ ಬೆಳಿಗ್ಗೆಯಿಂದಲೇ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಆಪ್ತರು, ಅಭಿಮಾನಿಗಳು, ಬೆಂಬಲಿಗರು ಶಾಸಕರಲ್ಲಿ ಆತ್ಮಸ್ಥೈರ್ಯ ತುಂಬಿದರು. ಉದ್ದೇಶಪೂರ್ವಕವಾಗಿಯೇ ನಿಮಗೆ ಟಿಕೆಟ್‌ ತಪ್ಪಿಸಿ ಶ್ರೀರಾಮುಲು ಅವರಿಗೆ ನೀಡಲಾಗಿದೆ. ಹಾಗಾಗಿ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸಬೇಕು. ಇದು ನಮ್ಮ ಅಳಿವು ಉಳಿವಿನ ಪ್ರಶ್ನೆ. ಹೊರಗಿನವರು ಇಲ್ಲಿಗೆ ಬಂದು ಠಿಕಾಣಿ ಹೂಡಿದರೆ ಕ್ಷೇತ್ರ ತನ್ನ ಮೂಲ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೆ ಪಕ್ಷೇತರರಾಗಿ ಅಥವಾ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂದು ತಿಪ್ಪೇಸ್ವಾಮಿ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಪ್ರತಿ ಚುನಾವಣೆಯಲ್ಲೂ ಜಿಲ್ಲೆಯ ಹೊರಗಿನವರು ಇಲ್ಲಿ ರಾಜಕೀಯ ಅಸ್ವಿತ್ವ ಕಂಡುಕೊಳ್ಳಲು ಶತಪ್ರಯತ್ನ ಮಾಡುತ್ತಾರೆ.

ಆ ಪ್ರವೃತ್ತಿ ಈ ಚುನಾವಣೆಯಲ್ಲೂ ಮುಂದುವರೆದಿದೆ. ಈಗ ಬಿಜೆಪಿ ಟಿಕೆಟ್‌ ಘೋಷಣೆಯಾಗಿರುವ ನಾಲ್ಕೂ ಕ್ಷೇತ್ರಗಳಲ್ಲೂ ಒಂದಿಲ್ಲೊಂದು ಕಾರಣದಿಂದ ಆಕಾಂಕ್ಷಿಗಳಲ್ಲಿ ಅಸಮಾಧಾನ ಮಡುಗಟ್ಟಿದೆ. ಪಕ್ಷದ ವರಿಷ್ಠರು ಈ ಭಿನ್ನಮತವನ್ನು ಹೇಗೆ
ಶಮನಗೊಳಿಸುತ್ತಾ  ಕಣ್ತಪ್ಪಿನಿಂದ ಮೊಳಕಾಲ್ಮೂರು ಕ್ಷೇತ್ರಕ್ಕೆ ತಮ್ಮ ಹೆಸರು ಘೋಷಣೆಯಾಗಿದೆ. ಎರಡು ದಿನ ಸುಧಾರಿಸಿಕೊಳ್ಳಿ. ಬಿಜೆಪಿ ವರಿಷ್ಠರ ಬಳಿ ಮಾತನಾಡಿ ಸರಿಪಡಿಸುತ್ತೇನೆ. ನಾನು ಯಾವುದೇ ಕಾರಣಕ್ಕೂ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಶ್ರೀರಾಮುಲು ಸ್ಪಷ್ಟಪಡಿಸಿ ಸಮಾಧಾನ ಮಾಡಿದ್ದಾರೆ.  ಆದರೆ ನನ್ನ ಬೆಂಬಲಿಗರು ಇದೆಲ್ಲ ನಾಟಕ, ನಿಮ್ಮ ಶಕ್ತಿ ಸಾಮರ್ಥ್ಯ ಏನೆಂಬುದನ್ನು ತೋರಿಸಬೇಕು. ನಿಮ್ಮ ಜೊತೆ ನಾವಿದ್ದೇವೆಂದು ಹೇಳುತ್ತಿದ್ದಾರೆ. ಬೆಂಬಲಿಗರ ಮಾತೇ ಅಂತಿಮ. ಅವರ ಮಾರ್ಗದರ್ಶನದಲ್ಲಿ ನಾನು ಮುಂದಿನ ಹೆಜ್ಜೆ ಇಡುತ್ತೇನೆ.  
 ಎಸ್‌. ತಿಪ್ಪೇಸ್ವಾಮಿ, ಟಿಕೆಟ್‌ ವಂಚಿತ ಬಿಜೆಪಿ ಶಾಸಕ.

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.