ತಿಪ್ಪೇಸ್ವಾಮಿಗೆ ಅನ್ಯಾಯ ವಾಗೋಕೆ ಬಿಡಲ್ಲ


Team Udayavani, Apr 13, 2018, 1:29 PM IST

cta-1.jpg

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಿಕೊಡಲಾಗುವುದು. ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅವರನ್ನು ಮನೆಗೆ ಕರೆಸಿ ಮಾತುಕತೆ ನಡೆಸಲಾಗುವುದು ಎಂದು ಸಂಸದ ಬಿ. ಶ್ರೀರಾಮುಲು ಹೇಳಿದರು.

ನಗರದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರ ಬಗ್ಗೆ ನನಗೆ ಬಹಳಷ್ಟು ಗೌರವವಿದೆ. ಕಳೆದ 2013ರ ಚುನಾವಣೆಯಲ್ಲಿ ನಮ್ಮ (ಬಿಎಸ್‌ಆರ್‌) ಪಕ್ಷದಿಂದಲೇ ಸ್ಪರ್ಧಿಸಿ ಶಾಸಕರಾಗಿದ್ದರು. ಹೀಗಾಗಿ ಕೂಡಲೇ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದರು. ಅವರು ನನಗೆ ಹಲವು ವರ್ಷಗಳಿಂದ ಚಿರಪರಿಚಿತ. ಕಳೆದ ಪರಿವರ್ತನಾ ಯಾತ್ರೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೇಳಿ ನಾನೇ ಟಿಕೆಟ್‌ ಘೋಷಣೆ ಮಾಡಿಸಿದ್ದೆ. ಅವರು ಯಾವುದೇ ಕಾರಣಕ್ಕೂ ಗಾಬರಿಯಾಗುವುದು ಬೇಡ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಹ ಬಿ.ಎಸ್‌. ಯಡಿಯೂರಪ್ಪ ಹೊರತುಪಡಿಸಿ ಸಂಸದರಿಗೆ ಯಾರಿಗೂ ಟಿಕೆಟ್‌ ಇಲ್ಲ ಎಂದು ಹೇಳಿದ್ದರಿಂದ ನಾನು ಸಹ ಎಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿರಲಿಲ್ಲ. ಆದರೆ, ರಾಜಕೀಯ ಲೆಕ್ಕಾಚಾರ ಪ್ರಕಾರ ರಾಜ್ಯದ 15 ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ರಾಮುಲು ಅವರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಟಿಕೇಟ್‌ ಘೋಷಿಸಲಾಗಿದೆ. ಇದರಿಂದ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗೂ ಅನುಕೂಲವಾಗಲಿದೆ ಎಂದರು.

ಎಲ್ಲ ಕ್ಷೇತ್ರಗಳಲ್ಲೂ ರಾಮುಲು ನಿಲ್ಲಬೇಕು ಎನ್ನುವ ಒತ್ತಾಯವಿದೆ. ಆದರೆ ಪಕ್ಷ ನಿರ್ಣಯ ಕೈಗೊಂಡು ಎರಡು ಕಡೆ ನಿಲ್ಲುವಂತೆ ಸೂಚಿಸಿದರೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದರು.

ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಮಾಜಿ ಸಂಸದರಾದ ಜೆ.ಶಾಂತಾ, ಸಣ್ಣ ಫಕ್ಕೀರಪ್ಪ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್‌. ಗುರುಲಿಂಗನಗೌಡ, ಪಾಲಿಕೆ ಸದಸ್ಯರಾದ ಎಸ್‌. ಮಲ್ಲನಗೌಡ, ಶ್ರೀನಿವಾಸ ಮೋತ್ಕರ್‌, ಕೆ.ಎ. ರಾಮಲಿಂಗಪ್ಪ, ಮುರಹರ ಗೌಡ, ಕೆ. ಶಶಿಕಲಾ, ಎಂ. ಶಿವರುದ್ರಪ್ಪ ಇತರರು ಇದ್ದರು.  

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.