ನಿರೀಕ್ಷಿತ, ಅನಿರೀಕ್ಷಿತಗಳ ಕಾಂಗ್ರೆಸ್‌ ಪಟ್ಟಿ


Team Udayavani, Apr 16, 2018, 4:58 PM IST

dvg.jpg

ದಾವಣಗೆರೆ: ವಿಧಾನಸಭಾ ಚುನಾವಣೆಗೆ ಭಾನುವಾರ ರಾತ್ರಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ಮಟ್ಟಿಗೆ ನಿರೀಕ್ಷಿತ ಹಾಗೂ ತೀರಾ ಅನಿರೀಕ್ಷಿತ ಎನ್ನುವಂತಿದೆ. ಜಗಳೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ ಹೆಸರು ಇಲ್ಲ. ಇದು ನಿಜಕ್ಕೂ ಶಾಕ್‌!.

ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ ಬದಲಿಗೆ ಪಟ್ಟಿಯಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮಣಸ್ವಾಮಿ ಹೆಸರು ಕಾಣಿಸಿಕೊಂಡಿದೆ. ಮಾಯಕೊಂಡ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಕೆ. ಶಿವಮೂರ್ತಿನಾಯ್ಕಗೆ ಟಿಕೆಟ್‌ ಸಿಕ್ಕುವುದೇ ಇಲ್ಲ ಎಂಬ ಮಾತು ಕೊನೆಗೆ ನಿಜ ಎನ್ನುವಂತೆ ಪ್ರಕಟಿತ ಪಟ್ಟಿಯಲ್ಲಿ ಕೆ. ಶಿವಮೂರ್ತಿನಾಯ್ಕರ ಹೆಸರು ಇಲ್ಲ. ಆನಗೋಡು ಜಿಲ್ಲಾ ಪಂಚಾಯತ್‌ ಕ್ಷೇತ್ರದ ಸದಸ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ ಅವರ ಅಳಿಯ ಕೆ.ಎಸ್‌. ಬಸವರಾಜ್‌(ಬಸವಂತಪ್ಪ) ಹೆಸರು ಕಾಣಿಸಿಕೊಂಡಿದೆ. ಜಗಳೂರು ಮತ್ತು ಮಾಯಕೊಂಡ ಎರಡು ಮೀಸಲು ಕ್ಷೇತ್ರ ಹೊರತುಪಡಿಸಿದರೆ ಇನ್ನುಳಿದ 6 ಕ್ಷೇತ್ರದಲ್ಲಿ ನಿರೀಕ್ಷಿತ ಆಕಾಂಕ್ಷಿಗಳಿಗೇ ಟಿಕೆಟ್‌ ದಕ್ಕಿದೆ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪ, ಹರಿಹರ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಎಸ್‌. ರಾಮಪ್ಪ, ಹರಪನಹಳ್ಳಿ ಕ್ಷೇತ್ರದಲ್ಲಿ ಹಾಲಿ ಶಾಸಕ ಎಂ.ಪಿ. ರವೀಂದ್ರ, ಹೊನ್ನಾಳಿಯಿಂದ ಡಿ.ಜಿ. ಶಾಂತನಗೌಡ, ಚನ್ನಗಿರಿ ಕ್ಷೇತ್ರಕ್ಕೆ ವಡ್ನಾಳ್‌ ರಾಜಣ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಜಗಳೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ ಅವರ ಹೆಸರು ಪಟ್ಟಿಯಲ್ಲಿ ಇಲ್ಲದೇ ಇರುವುದು ಸ್ವತಃ ರಾಜೇಶ್‌ ಗೆ ಅಚ್ಚರಿ ಮೂಡಿಸಿದೆ. ಪಕ್ಷ, ಆಂತರಿಕ ಸಮೀಕ್ಷೆ ಮತ್ತು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದುಕೊಂಡ ಮಾಹಿತಿಯಂತೆ ರಾಜೇಶ್‌ಗೆ ಹೆಚ್ಚಿನ ಒಲವು ಇಲ್ಲ…. ಎನ್ನುವ ಕಾರಣಕ್ಕೆ ಟಿಕೆಟ್‌ ದೊರೆತಿಲ್ಲ ಎಂಬ ಮಾತುಗಳು ದಟ್ಟವಾಗಿ ಕೇಳಿ ಬಂದಿವೆ. 

ಜಗಳೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ ಹೆಸರು ಪಟ್ಟಿಯಲ್ಲಿ ಇಲ್ಲದೇ ಇರುವುದು ತೀರಾ ಅನಿರೀಕ್ಷಿತ ಎನ್ನುವುದು ಜಿಲ್ಲಾ ಕಾಂಗ್ರೆಸ್‌ ವಲಯದಲ್ಲೇ ಕೇಳಿ ಬರುತ್ತಿದೆ. ಈ ಬಾರಿ ಮಹಿಳೆಯರಿಗೆ ಅವಕಾಶ ಮಾಡಿಕೊಡಬೇಕು ಎಂಬ ಪ್ರಬಲ ಒತ್ತಾಯ ಮಂಡಿಸುತ್ತಲೇ ಬಂದಿದ್ದ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮಣಸ್ವಾಮಿ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. 

ಕಳೆದ ಚುನಾವಣೆಯಿಂದಲೂ ಟಿಕೆಟ್‌ಗೆ ಇನ್ನಿಲ್ಲದ ಪ್ರಯತ್ನ ನಡೆಸಿದ್ದ ಪುಷ್ಪಾ ಲಕ್ಷ್ಮಣಸ್ವಾಮಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಒಂದೊಮ್ಮೆ ಟಿಕೆಟ್‌ ಖಾತರಿ ಆದಲ್ಲಿ ಜಗಳೂರು ಕ್ಷೇತ್ರದ ಇತಿಹಾಸದಲ್ಲೇ ರಾಷ್ಟ್ರೀಯ ಪಕ್ಷದಿಂದ ಮಹಿಳಾ ಅಭ್ಯರ್ಥಿಯೊಬ್ಬರು ಕಣಕ್ಕೆ ಇಳಿದಂತಾಗುತ್ತದೆ. ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅವರ ನಂತರ ಟಿಕೆಟ್‌ ಪಡೆದವರಾಗುತ್ತಾರೆ.

ಮಾಯಕೊಂಡ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಕೆ. ಶಿವಮೂರ್ತಿನಾಯ್ಕಗೆ ಟಿಕೆಟ್‌ ಸಿಕ್ಕುವುದೇ ಇಲ್ಲ ಎಂಬ ಮಾತು ನಿಜವಾಗಿದೆ. ಪಟ್ಟಿಯಲ್ಲಿ ಕೆ. ಶಿವಮೂರ್ತಿ ನಾಯ್ಕರ ಬದಲಿಗೆ ಆನಗೋಡು ಜಿಲ್ಲಾ ಪಂಚಾಯತ್‌ ಕ್ಷೇತ್ರದ ಸದಸ್ಯ ಕೆ.ಎಸ್‌. ಬಸವರಾಜ್‌(ಬಸವಂತಪ್ಪ) ಹೆಸರು ಇದೆ. ಕೆ. ಶಿವಮೂರ್ತಿ ಸಹ ಟಿಕೆಟ್‌ಗೆ ಪ್ರಯತ್ನ ಮುಂದುವರೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಅನಾರೋಗ್ಯ ಮತ್ತು ಕೆಲವಾರು ಕಾರಣದಿಂದ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿ, ರಾಜೀನಾಮೆ ನೀಡಲಿಕ್ಕೂ ಮುಂದಾಗಿದ್ದ ಹರಪನಹಳ್ಳಿ ಕ್ಷೇತ್ರದ ಹಾಲಿ ಶಾಸಕ ಎಂ.ಪಿ. ರವೀಂದ್ರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರವೀಂದ್ರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ ರವೀಂದ್ರ ಅವರ ಪ್ರಮುಖ ಬೇಡಿಕೆ ಹರಪನಹಳ್ಳಿ
ತಾಲೂಕನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿಸುವುದಕ್ಕೆ ಸ್ಪಂದಿಸಿದ್ದರು. ಹರಿಹರ ಕ್ಷೇತ್ರದಿಂದ ವಿಟಿಯು ವಿಶ್ರಾಂತ ಕುಲಪತಿ ಡಾ| ಮಹೇಶ್ವರಪ್ಪ, ಮಾಜಿ ಸಚಿವ ಡಾ| ವೈ. ನಾಗಪ್ಪ, ಡಾ| ಶೈಲೇಶ್‌ಕುಮಾರ್‌ ಟಿಕೆಟ್‌ ಗೆ ಭಾರೀ ಪ್ರಯತ್ನ ನಡೆಸಿದ್ದರ ಮಧ್ಯೆಯೂ ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿ ಎಸ್‌. ರಾಮಪ್ಪ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ವಯೋಮಾನದ ಆಧಾರದಲ್ಲಿ ಹಿರಿಯ ಕಾಂಗ್ರೆಸಿಗ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರಾಯಶಃ ಟಿಕೆಟ್‌ ಕೊಡುವುದಿಲ್ಲ ಎಂಬ ಮಾತು ಕೇಳಿ ಬಂದಿದ್ದವು. ಹೈಕಮಾಂಡ್‌ ಮನೆಯ ಬಾಗಿಲಿಗೆ ಟಿಕೆಟ್‌ ಕಳಿಸಿಕೊಡುತ್ತದೆ… ಎಂದು ಶಾಸಕ ಶಾಮನೂರು ಶಿವಶಂಕರಪ್ಪ ದೃಢ ವಿಶ್ವಾಸ ವ್ಯಕ್ತಪಡಿಸಿದ್ದರು. ಅದರಂತೆ ಕಾಂಗ್ರೆಸ್‌ ಪಟ್ಟಿಯಲ್ಲಿ ಹೆಸರು ಇದೆ. ಇನ್ನುಳಿದಂತೆ ದಾವಣಗೆರೆ ಉತ್ತರ, ಹೊನ್ನಾಳಿ, ಚನ್ನಗಿರಿಯಲ್ಲಿ ನಿರೀಕ್ಷೆಯಂತೆ ಹಾಲಿ ಶಾಸಕರ ಹೆಸರು ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.