ರಜತ ಕುವರ ಗುರುರಾಜ್‌ಗೆ ತವರೂರ ಸ್ವಾಗತ


Team Udayavani, Apr 20, 2018, 6:25 AM IST

1904kdm1.jpg

ಕುಂದಾಪುರ: ಆಸ್ಟ್ರೇಲಿಯದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ವೇಟ್‌ಲಿಫ್ಟಿಂಗ್‌ ರಜತಕ್ಕೆ ಕೊರಳೊಡ್ಡುವ ಮೂಲಕ ಭಾರತಕ್ಕೆ ಮೊದಲ ಪದಕ ತಂದಿತ್ತ ಚಿತ್ತೂರಿನ ಗುರುರಾಜ್‌ ಅವರಿಗೆ ಗುರುವಾರ ತವರು ನೆಲ ಕುಂದಾಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.ಬೆಳ್ಳಿ ಪದಕ ಗೆದ್ದ ಬಳಿಕ ತವರಿಗೆ ಆಗಮಿಸಿದ ಗುರುರಾಜ್‌ ಅವರನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಬ್ಯಾಂಡ್‌ ವಾದನ, ಹೂವಿನ ಹಾರಗಳ ಮೂಲಕ ಸ್ವಾಗತಿಸಲಾಯಿತು.

ಮೆರವಣಿಗೆ ಮೂಲಕ ಕುಂದಾಪುರಕ್ಕೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ರಸ್ತೆಯುದ್ದಕ್ಕೂ ನೂರಾರು ಮಂದಿ ಸಾಲುಗಟ್ಟಿ ನಿಂತು ಹುಟ್ಟೂರ ಸಾಧಕನಿಗೆ ಗೌರವ ಸಲ್ಲಿಸಿದರು.

ಕುಂದಾಪುರದ ಶಾಸ್ತ್ರಿ ಸರ್ಕಲ್‌ನಿಂದ ಆರಂಭವಾದ ಗುರುರಾಜ್‌ ಅವರ ವಿಜಯೋತ್ಸವ ಮೆರವಣಿಗೆಯು ಪಾರಿಜಾತ ಸರ್ಕಲ್‌ ಮೂಲಕ ಸಾಗಿ, ಗುರು ನಾರಾಯಣ ಮಂದಿರದ ವರೆಗೆ ತೆರಳಿ, ಅಲ್ಲಿಂದ ಹೊಸ ಬಸ್‌ ನಿಲ್ದಾಣವಾಗಿ ಮತ್ತೆ ಶಾಸ್ತ್ರಿ  ಸರ್ಕಲ್‌ಗೆ ಬಂತು. ಆ ಬಳಿಕ ಹುಟ್ಟೂರಾದ ಚಿತ್ತೂರಿಗೆ ತೆರೆದ ವಾಹನದಲ್ಲಿ ಕಳುಹಿಸಿಕೊಡಲಾಯಿತು.

ವಿವಿಧೆಡೆಗಳಲ್ಲಿ ಅಭಿನಂದನೆ
ಕುಂದಾಪುರದಲ್ಲಿ ಹಕ್ಯುìಲಸ್‌ ಜಿಮ್‌ ವತಿಯಿಂದ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್‌ ಅಭಿನಂದಿಸಿದರು. ತಾಲೂಕು ಬಿಲ್ಲವ ಸಂಘದ ವತಿಯಿಂದ ಕುಂದಾಪುರದ ನಾರಾಯಣಗುರು ಮಂದಿರದಲ್ಲಿ ಸಮ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗುರುರಾಜ್‌ ತಂದೆ ಮಹಾಬಲ ಪೂಜಾರಿ, ಸಹೋದರರು, ಸಂಬಂಧಿಕರು, ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್‌ ಕುಮಾರ್‌, ಮೊದಲ ಕೋಚ್‌ ಕೊಲ್ಲೂರಿನ ಸುಕೇಶ್‌ ಶೆಟ್ಟಿ, ಕುಂದಾಪುರ ಎಸ್‌ಐ ಹರೀಶ್‌ ಆರ್‌., ಗಣ್ಯರು ಉಪಸ್ಥಿತರಿದ್ದರು.

ಕೊಲ್ಲೂರು ಕ್ಷೇತ್ರ ಭೇಟಿ
ಗುರುರಾಜ್‌ ಪೂಜಾರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಸಂಜೆ ತೆರಳಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ಅರ್ಚಕ ಡಾ| ಕೆ.ಎನ್‌. ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಗುರುರಾಜ್‌ ಪೂಜಾರಿ ಅವರ ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ ಶೆಟ್ಟಿ, ದೈಹಿಕ ಶಿಕ್ಷಕ ಸಚಿನ್‌ ಕುಮಾರ್‌ ಶೆಟ್ಟಿ ಹಾಗೂ ದೇಗುಲದ ಅಧೀಕ್ಷಕ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

ಶ್ರೀ ದೇವಿಯ ಅನುಗ್ರಹ…
ಸುದ್ದಿಗಾರರೊಂದಿಗೆ ಮಾತನಾಡಿದ ಗುರುರಾಜ್‌, ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಪ್ರತಿ ದಿನ ಕ್ಷೇತ್ರಕ್ಕೆ ಆಗಮಿಸಿ, ದೇವಿಯನ್ನು ಧ್ಯಾನಿಸುತ್ತಿದ್ದೆ. ಹಾಸ್ಟೆಲ್‌ನಲ್ಲಿ ಬೆಳಗ್ಗೆ ಒದಗಿಸುತ್ತಿದ್ದ ಗಂಜಿ ಊಟದೊಡನೆ ಅಮ್ಮನ ಆಶೀರ್ವಾದದಿಂದ ಕಿಂಚಿತ್‌ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.

ವಂಡ್ಸೆ: ಸಮ್ಮಾನಕ್ಕೆ ನೀತಿ ಸಂಹಿತೆ ಅಡ್ಡಿ
ವಂಡ್ಸೆ ಮತ್ತು ಚಿತ್ತೂರು ಆಸುಪಾಸಿನ ಗ್ರಾಮಸ್ಥರು ಆಯೋಜಿಸಿದ್ದ ಸಮ್ಮಾನ ಕಾರ್ಯಕ್ರಮದ ವಿಚಾರದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ನೀತಿಸಂಹಿತೆಯ ಬಗ್ಗೆ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವತಿಯಿಂದ ದೇಗುಲದ ಆಡಳಿತ ಮೊಕ್ತೇಸರ ಬಿ.ಕೆ. ಶಿವರಾಮ ಶೆಟ್ಟಿ , ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀಧರ ಶೆಟ್ಟಿ ಉಪಸ್ಥಿತರಿದ್ದು ಸಮ್ಮಾನಿಸಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲಕ್ಕೆ ತೆರಳಿದ ಗುರುರಾಜ್‌ ಪೂಜಾರಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ತ್ರಿವರ್ಣ ಧ್ವಜ ಹಾರಾಡುತ್ತಿದ್ದಂತೆ ಕಣ್ಣಲ್ಲಿ ನೀರು ಜಿನುಗಿತು…
ಕುಂದಾಪುರದಲ್ಲಿ ಅಭಿನಂದನೆ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಗುರುರಾಜ್‌, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿರುವುದಕ್ಕೆ ತುಂಬಾ ಖುಷಿಯಿದೆ. ಭಾರತ ಗೆದ್ದ 66 ಪದಕಗಳಲ್ಲಿ ಮೊದಲ ಪದಕ ನನ್ನದು ಎನ್ನುವುದು ಹೆಮ್ಮೆಯ ಸಂಗತಿ. ಗೋಲ್ಡ್‌ಕೋಸ್ಟ್‌ನಲ್ಲಿ ಬೆಳ್ಳಿ ಗೆದ್ದಾಗ ರಾಷ್ಟ್ರಗೀತೆಯೊಂದಿಗೆ ತ್ರಿವರ್ಣ ಧ್ವಜವು ನಿಧಾನವಾಗಿ ಮೇಲೇರುತ್ತಿದ್ದಂತೆ ಕಣ್ಣಲ್ಲಿ ನೀರು ಬಂತು. ತೀರಾ ಹಳ್ಳಿ ಪ್ರದೇಶದಲ್ಲಿ ಹುಟ್ಟಿ ಬೆಳೆದ ನನ್ನ ಈ ಸಾಧನೆಯಿಂದಾಗಿ ದೇಶದ ಹೆಮ್ಮೆಯ ಪ್ರತೀಕವಾಗಿರುವ ತ್ರಿವರ್ಣ ಧ್ವಜ ಎತ್ತರಕ್ಕೆ ಹಾರಾಡಿದ ಖುಷಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದರು. 

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.