ಪುಲ್ವಾಮ ಎನ್ ಕೌಂಟರ್ ಮೂವರು ಉಗ್ರರ ಹತ್ಯೆ
Team Udayavani, Apr 25, 2018, 8:45 AM IST
ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬಂದಿ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಆದರೆ, ಈ ಕಾರ್ಯಾಚರ ಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಇಲ್ಲಿಯ ತ್ರಾಲ್ ಪ್ರದೇಶದ ಲಾಮ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಉಗ್ರರು ಭದ್ರತಾ ಸಿಬಂದಿ ಮೇಲೆ ಗುಂಡಿನ ದಾಳಿ ಆರಂಭಿಸಿದರು. ಸೇನೆ ಅದಕ್ಕೆ ಪ್ರತಿದಾಳಿ ನಡೆಸಿತು. ಕೆಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಅಜಯ್ ಕುಮಾರ್ ಮತ್ತು ಪೊಲೀಸ್ ಪೇದೆ ಲತೀಫ್ ಗುಜ್ರಿ ಹುತಾತ್ಮರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂವರು ಜೈಶ್ ಉಗ್ರರನ್ನು ಸದೆಬಡಿಯಲಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ