ಹೈಸ್ಕೂಲ್‌ ಮುಗಿಯಿತು, ಮುಂದೇನು?


Team Udayavani, Apr 27, 2018, 6:00 AM IST

317.jpg

ಈಗಾಗಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಕೊನೆಗೊಂಡು, ಇನ್ನೇನು ಕೆಲವೇ ದಿನಗಳಲ್ಲಿ ಫ‌ಲಿತಾಂಶ ಹೊರಬರಲಿವೆ. ಸಹಸ್ರಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮುಂದೇನು ಎಂಬುದೇ ಚಿಂತೆಯಾಗಿದೆ. ಪಿಯುಸಿ, ಪದವಿ, ಸ್ವಯಂ ಉದ್ಯೋಗ, ಡಿಪ್ಲೋಮಾ- ಹೀಗೆ ನಾನಾ ಅವಕಾಶಗಳನ್ನು ಅರಸುತ್ತ, ನಾನಾ ಶಾಲಾ-ಕಾಲೇಜುಗಳ ಬಗ್ಗೆ ಮಾಹಿತಿಗಾಗಿ ಪರದಾಡುವುದು ಸಾಮಾನ್ಯ ಸಂಗತಿಯಾಗಿದೆ. ಇವರಿಗಾಗಿ ಶಿಕ್ಷಣ ಇಲಾಖೆಗಳು ವಿವರವಾದ ಮಾಹಿತಿಗಳನ್ನು ತಮ್ಮ ಅಂತರಜಾಲ ತಾಣಗಳಲ್ಲಿ ಒದಗಿಸುತ್ತವೆ.

ಹಿಂದೆಲ್ಲ ವಿವಿಧ ಆಸಕ್ತಿಗಳಿಗೆ ಅನುಗುಣವಾದ ಕೋರ್ಸ್‌ಗಳಿರಲಿಲ್ಲ. ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಪದವಿ, ಶಿಕ್ಷಕರ ತರಬೇತಿ, ಎಂ.ಎ. ಎಂಬುದು ಒಂದು ಬಗೆಯ ದಾರಿಯಾಗಿತ್ತು. ಅಲ್ಲದಿದ್ದರೆ ಎಂಜಿನಿಯರಿಂಗ್‌, ಲಾ, ಮೆಡಿಕಲ್‌ ಎಂಬ ಇನ್ನೊಂದು ದಾರಿ ಇತ್ತು. ಆದರೆ ಇಂದು ಸಾಕಷ್ಟು ಬದಲಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರ ಬರುವ ಅವಕಾಶಗಳತ್ತ ಒಮ್ಮೆ ದೃಷ್ಟಿ ಹಾಯಿಸಿದಾಗ ಸಾಕಷ್ಟು ಆಯ್ಕೆಗಳನ್ನು ನಾವು ಕಾಣುತ್ತೇವೆ. ಇಂದು ಶಿಕ್ಷಣ ಎಂದರೆ ಕೇವಲ ಉದ್ಯೋಗಕ್ಕಾಗಿ ಎನ್ನುವಂತಾಗಿದೆ. ಓದಿದ ತಕ್ಷಣ ಕೆಲಸ ಸಿಗಬೇಕೆಂಬುದೇ ಬಹುತೇಕ ಮಂದಿಯ ಆಸೆಯಾಗಿದೆ. ಆ ರೀತಿ ಯೋಚಿಸುವವರು ತಮ್ಮ ಭವಿಷ್ಯದ ಬಗ್ಗೆ ಸೂಕ್ತ ಯೋಜನೆ ರೂಪಿಸಿಕೊಳ್ಳಬೇಕಾಗುತ್ತದೆ. ಯಾವ ಕೋರ್ಸ್‌ಗಳಿಗೆ ಹೆಚ್ಚು ಬೇಡಿಕೆ ಇದೆ, ಎಲ್ಲೆಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎನ್ನುವುದರ ಪರಿಕಲ್ಪನೆ ಬೇಕಾಗುತ್ತದೆ.

ಕೋರ್ಸ್‌ ಆಯ್ಕೆಗೂ ಮುನ್ನ!
ಎಷ್ಟೋ ಮಂದಿಗೆ ಯಾವ ಯಾವ ಕೋರ್ಸ್‌ಗಳಿವೆ ಎನ್ನುವುದೇ ತಿಳಿದಿರುವುದಿಲ್ಲ. ಯಾವುದೋ ಒಂದು ಪದವಿ ಪಡೆದರೆ ಸಾಕು, ಯಾವುದಾದರೂ ಒಂದು ಕೆಲಸ ಸಿಗುತ್ತದೆಂಬ ಕಲ್ಪನೆಯಲ್ಲಿ ಶಿಕ್ಷಣ ಮುಗಿಸಿ ನಂತರ ಕೆಲಸ ಸಿಗದೆ ಪರದಾಡುತ್ತಾರೆ. ತಾವು ಪಡೆದ ಶಿಕ್ಷಣಕ್ಕೂ, ಮಾಡುವ ಕೆಲಸಕ್ಕೂ ಯಾವುದೇ ರೀತಿಯ ಸಂಬಂಧವೇ ಇಲ್ಲದಂತೆ ದುಡಿಯುತ್ತ ಜೀವನ ಕಳೆಯುತ್ತಾರೆ. ಆದುದರಿಂದ ತಮ್ಮ ತಮ್ಮ ಭವಿಷ್ಯ ರೂಪಿಸುವ ಶಿಕ್ಷಣ ಪಡೆಯುವುದು ಉತ್ತಮ. ಇನ್ನು ಕೆಲವರ ಕನಸು ಸರ್ಕಾರಿ ನೌಕರಿ ಪಡೆಯುವುದಾಗಿರುತ್ತದೆ. ಪದವಿ ಪೂರೈಸಿದ ನಂತರ ಸರ್ಕಾರಿ ನೌಕರಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಾ, ಯಾವುದು ಕೈ ಹಿಡಿಯುವುದೋ ಅದರಲ್ಲಿ ಉದ್ಯೋಗ ಗಿಟ್ಟಿಸುವ ಗುರಿ ಹೊಂದಿರುತ್ತಾರೆ. ನಮ್ಮಲ್ಲಿ ಅನೇಕರು ಪೋಸ್ಟ್‌ ಗ್ರಾಜುವೇಶನ್‌ ಮಾಡಿದರೂ, ಯಾವ ಕೆಲಸ ಮಾಡಬೇಕೆಂಬುದನ್ನೇ ತಿಳಿದಿರುವುದಿಲ್ಲ. ಆದರೆ ಸರಿಯಾದ ಯೋಜನೆ ಇದ್ದಲ್ಲಿ ನಮ್ಮ ಶಿಕ್ಷಣದ ಆಯ್ಕೆ ಮೂಲಕವೇ ನಮ್ಮ ಭವಿಷ್ಯ ಕಟ್ಟಿಕೊಳ್ಳಬಹುದು. ಶಿಕ್ಷಣವೆಂದರೆ ಬರೀ ಓದಲ್ಲ, ಬರೀ ಪುಸ್ತಕದ ಜ್ಞಾನವೂ ಅಲ್ಲ, ಅದು ಮಾನವತೆಯ ವಿಕಾಸ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ.

ಸಾಹಿತ್ಯ, ಸಂಗೀತ, ಕಲೆ, ನಾಟಕ, ನೃತ್ಯ, ಕುಶಲಕಲೆಗಳಲ್ಲಿ ಆಸಕ್ತಿ ಇರುವ ಮಕ್ಕಳಿಗೆ, ಪೋಷಕರು ಬಲವಂತವಾಗಿ ಮತ್ತಾವುದೋ ಕೋರ್ಸ್‌ಗಳಿಗೆ ಸೇರಿಸಿದಾಗ ಕೆಲವರು ಮಾತ್ರ ಎರಡರಲ್ಲೂ ಸೈ ಎನಿಸಿಕೊಳ್ಳುತ್ತಾರೆ. ಆದರೆ ಬಹುತೇಕರು ವಿಫ‌ಲರಾದ ಉದಾಹರಣೆಗಳಿವೆ. ವಿದ್ಯಾರ್ಥಿಗಳಿಗೆ ಹಿರಿಯರು ಹಲವು ಬಗೆಯ ಆಯ್ಕೆಗಳ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಆಯಾಯ ಕ್ಷೇತ್ರಗಳಲ್ಲಿ ಸಾಧಿಸಿದವರ ಮಾರ್ಗದರ್ಶನ ಪಡೆಯಬಹುದು. ಅಗತ್ಯವಾದಲ್ಲಿ ಮನೋವೈದ್ಯರ, ಸಮಾಲೋಚಕರ ಸೇವೆಯನ್ನೂ ಪಡೆಯಬಹುದು. ಬಹಳ ಮುಖ್ಯವಾಗಿ ಪೋಷಕರು ತಮಗೆ ಇಷ್ಟವಾಗುವ ಅಥವಾ ಒಣ ಪ್ರತಿಷ್ಠೆ ತೋರಿಸುವ ಸಲುವಾಗಿ “ಇದನ್ನೇ ಓದು’ ಎಂದು ಮಕ್ಕಳ ಮೇಲೆ ಒತ್ತಡ ಹೇರಬಾರದು. ಅದರ ಬದಲಾಗಿ ಮಕ್ಕಳಲ್ಲಿ ಮುಕ್ತ ಮಾತುಕತೆ ನಡೆಸಿ ಅವರಿಗೆ ಆಸಕ್ತಿಯುಳ್ಳ ಕ್ಷೇತ್ರದಲ್ಲಿ ಮುನ್ನಡೆಯಲು ಅವಕಾಶ ನೀಡಬೇಕು. ಆಗ ಮಕ್ಕಳ ಮನೋಸಾಮರ್ಥ್ಯ ಹೆಚ್ಚಾಗುವುದಲ್ಲದೆ, ಅವರು ಸಾಧನೆಯ ಹಾದಿಯಲ್ಲಿ ಸಾಗುತ್ತಾರೆ.

ಮಂಜುಶ್ರೀ ದ್ವಿತೀಯ ಪಿಯುಸಿ ಎಸ್‌.ಡಿ.ಎಂ. ಕಾಲೇಜು, ಉಜಿರೆ

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.