ಜೆಡಿಯು ಅಭ್ಯರ್ಥಿಗಳ ಪರ ನಿತೀಶ್ ಕುಮಾರ್ ಪ್ರಚಾರ
Team Udayavani, Apr 29, 2018, 7:30 AM IST
ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಚೆನ್ನಗಿರಿ, ಹುಬ್ಬಳ್ಳಿ -ಧಾರವಾಡ ಸೇರಿ ಕೆಲವೆಡೆ ಜೆಡಿಯು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಯು ಯುವ ಘಟಕದ ರಾಜ್ಯಾಧ್ಯಕ್ಷ ಕೆ.ವಿ.ಶಿವರಾಂ, ಚೆನ್ನಗಿರಿಯಲ್ಲಿ ಮಹಿಮಾ ಜೆ.ಪಟೇಲ್ ಕಣಕ್ಕಿಳಿದಿದ್ದು ಅವರ ಪರವಾಗಿ ನಿತೀಶ್ ಕುಮಾರ್ ಪ್ರಚಾರ ನಡೆಸಲಿದ್ದಾರೆ. ಅಲ್ಲದೆ, ಹುಬ್ಬಳ್ಳಿ-ಧಾರವಾಡ, ಆಳಂದ ಸೇರಿದಂತೆ ಕೆಲವು ಕಡೆಗಳಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಕೇಂದ್ರದಲ್ಲಿ ಎನ್ಡಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಜೆಡಿಯು, ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದೆ. ಆದರೆ, ರಾಜ್ಯದಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿಯಿಲ್ಲ. ಈಗಾಗಲೇ ಸುಮಾರು 31 ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕಿಳಿದಿದ್ದು, ಚುನಾವಣಾ ನಂತರ ಮೈತ್ರಿ ಬಗ್ಗೆ ಆಲೋಚಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು